ಮುನ್ನೆಚ್ಚರಿಕೆ ಕ್ರಮ; ವಿವಿಧ ಬಡಾವಣೆ ಸೀಲ್‌ಡೌನ್
Team Udayavani, Apr 15, 2020, 4:19 PM IST
ಮುದ್ದೇಬಿಹಾಳ: ಮುಖ್ಯರಸ್ತೆ ಸಂಪರ್ಕಿಸುವ ಆಂತರಿಕ ರಸ್ತೆಗಳಲ್ಲಿ ಸಂಚಾರ ನಿಷೇಧಿಸಲಾಗಿದೆ.
ಮುದ್ದೇಬಿಹಾಳ: ವಿಜಯಪುರದಲ್ಲಿ ಕೊರೊನಾ ಸೋಂಕಿತರ ಪತ್ತೆಯಾಗಿರುವ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಪಟ್ಟಣದ ಮುಖ್ಯರಸ್ತೆ ಸಂಪರ್ಕಿಸುವ ವಿವಿಧ ಬಡಾವಣೆಗಳ ಆಂತರಿಕ ರಸ್ತೆಗಳನ್ನು ಪುರಸಭೆಯವರು ಪೊಲೀಸರ ಸಹಕಾರದೊಂದಿಗೆ ಸೋಮವಾರ ಸಂಪೂರ್ಣವಾಗಿ ಸೀಲ್‌ಡೌನ್ ಮಾಡಿದ್ದಾರೆ.
ಲಾಕಡೌನ್ ಇದ್ದರೂ ಜನರು ಅನವಶ್ಯಕವಾಗಿ ಹೊರಗೆ ತಿರುಗಾಡುತ್ತಿದ್ದರು. ಎಷ್ಟು ತಿಳಿಹೇಳಿದರೂ ತಮ್ಮ ಚಾಳಿ ಮುಂದುವರೆಸಿದ್ದರು. ಪೊಲೀಸರ ಲಾಠಿ ಏಟಿಗೂ ಮಣಿದಿರಲಿಲ್ಲ. ಇದೀಗ ಜಿಲ್ಲೆಯ ಪರಿಸ್ಥಿತಿ ವಿಷಮಗೊಂಡಿರುವುದನ್ನು ಅರಿತು ತಾಲೂಕು ಆಡಳಿತದ ಕಟ್ಟುನಿಟ್ಟಿನ ಸೂಚನೆ ನೀಡಿದ ಹಿನ್ನೆಲೆ ಈ ಕ್ರಮ ಕೈಕೊಳ್ಳಲಾಗಿದೆ. ಇದರಿಂದಾಗಿ ಪಿಲೇಕೆಮ್ಮನಗರದಿಂದ ಬಸವೇಶ್ವರ ವೃತ್ತ ಮಾರ್ಗವಾಗಿ ಪೊಲೀಸ್ ಠಾಣೆವರೆಗಿನ, ವೀರಶೈವ ರುದ್ರಭೂಮಿಯಿಂದ ಮುಖ್ಯಬಜಾರ್ ಮಾರ್ಗವಾಗಿ ಇಂದಿರಾ ವೃತ್ತದವರೆಗಿನ ಮುಖ್ಯರಸ್ತೆ ಸಂಪರ್ಕಿಸುವ ಆಂತರಿಕ ರಸ್ತೆಗಳನ್ನೆಲ್ಲ ಬ್ಯಾರಿಕೇಡ್, ಕಬ್ಬಿಣದ ಏಣಿ ಅಡ್ಡ ಇಟ್ಟು ಸಂಪೂರ್ಣ ಸೀಲ್‌ಡೌನ್ ಮಾಡಲಾಗಿದೆ.
ಅನವಶ್ಯಕವಾಗಿ ರಸ್ತೆಗಿಳಿಯುತ್ತಿರುವ, ಗುಂಪುಗೂಡುತ್ತಿರುವ ಜನರನ್ನು ನಿಯಂತ್ರಿಸಲು ಪೊಲೀಸರ ಸಲಹೆ ಮೇರೆಗೆ ಈ ಕಾರ್ಯ ಕೈಕೊಳ್ಳಲಾಗಿದೆ. ಈ ವ್ಯವಸ್ಥೆ ಲಾಕ್‌ಡೌನ್ ಮುಗಿಯುವವರೆಗೂ ಮುಂದುವರಿಯುತ್ತದೆ ಎಂದು ಪುರಸಭೆ ಮುಖ್ಯಾಧಿಕಾರಿ ಗೋಪಾಲ ಕಾಸೆ, ಇದೊಂದು ಪ್ರಾಯೋಗಿಕ ಪರೀಕ್ಷೆ ಆಗಿದ್ದು, ಇದರ ಫಲಿತಾಂಶ ನೋಡಿಕೊಂಡು ಇನ್ನುಳಿದ ಬಡಾವಣೆಗಳಲ್ಲೂ ಇದನ್ನು ವಿಸ್ತರಿಸಲಾಗುವುದು. ಈಗ ಸೀಲ್ ಮಾಡಿರುವ ಬಡಾವಣೆಗಳ ಜನರ ತುರ್ತು ಸಂಚಾರಕ್ಕೆ ಒಂದೊಂದೇ ರಸ್ತೆಗಳನ್ನು ತೆರೆದಿಡಲಾಗಿದೆ. ಇದರಿಂದ ವಾಹನಗಳ ಅನವಶ್ಯಕ ಸಂಚಾರ ನಿಯಂತ್ರಣಕ್ಕೆ ಪೊಲೀಸರಿಗೆ ಅನುಕೂಲ ಆಗುತ್ತದೆ. ಈ ವ್ಯವಸ್ಥೆಯನ್ನೂ ಉಲ್ಲಂಘಿಸುವವರ ವಾಹನವನ್ನು ಈ ಬಾರಿ ಲಾಕ್ ಡೌನ್ ಮುಗಿಯುವವರೆಗೂ ಸೀಜ್ ಮಾಡಲಾಗುತ್ತದೆ ಎಂದು ಪಿಎಸ್‌ಐ ಮಲ್ಲಪ್ಪ ಮಡ್ಡಿ ಉದಯವಾಣಿಗೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?
Mohini Dey: ಎಆರ್ ರೆಹಮಾನ್ ಜತೆ ಸಂಬಂಧ.. ಅವರು ನನಗೆ ತಂದೆ ಸಮಾನ ಎಂದ ಮೋಹಿನಿ
Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
Mohammed Siraj: ಬಿಟೌನ್‌ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.