ಖಾಸಗಿ ಶಾಲೆಗಳಿಗೆ ಆರ್‌ಟಿಇ ಹಣ ಬಿಡುಗಡೆಗೆ ಮನವಿ
Team Udayavani, May 3, 2020, 4:28 PM IST
ಮುದ್ದೇಬಿಹಾಳ: ಜಿಲ್ಲಾ ಅನುದಾನರಹಿತ ಪ್ರಾಥಮಿಕ, ಪ್ರೌಢಶಾಲೆಗಳ ಕ್ಷೇಮಾಭಿವೃದ್ಧಿ ಸಂಘದ ಪ್ರಧಾನ ಕಾರ್ಯದರ್ಶಿ ಎಂ.ಎಸ್.ಕೊಪ್ಪ ಅವರು ಶಿರಸ್ತೇದಾರ್‌ಗೆ ಮನವಿ ಸಲ್ಲಿಸಿದರು
ಮುದ್ದೇಬಿಹಾಳ: 2019-20ನೇ ಸಾಲಿನ ಖಾಸಗಿ ಶಾಲೆಗಳ ಆರ್‌ಟಿಇ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ಎನ್‌ಕೆಯುಎಸ್‌ಎಂಎ ಸಂಘಟನೆ ಅಡಿಯ ಜಿಲ್ಲಾ ಅನುದಾನ ರಹಿತ ಪ್ರಾಥಮಿಕ, ಪ್ರೌಢಶಾಲೆಗಳ ಕ್ಷೇಮಾಭಿವೃದ್ಧಿ ಸಂಘದ ಪ್ರಧಾನ ಕಾರ್ಯದರ್ಶಿ ಎಂ.ಎಸ್. ಕೊಪ್ಪ ಅವರು ಶನಿವಾರ ತಹಶೀಲ್ದಾರ್ ಕಚೇರಿ ಶಿರಸ್ತೇದಾರ ಎ.ಬಿ. ಹಿರೇಮಠ ಅವರ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.
2012-13ನೇ ಸಾಲಿನಿಂದ ಬಡ, ಅನಾಥ, ಅಂಗವಿಕಲ, ನಿರ್ಗತಿಕ, ಬೀದಿ ಮಕ್ಕಳ ಕಲ್ಯಾಣಕ್ಕಾಗಿ ಆರ್‌ಟಿಇ ಯೋಜನೆ ಜಾರಿಗೊಳಿಸಲಾಗಿದೆ. ಎಲ್ಲ ಖಾಸಗಿ ಶಾಲೆಗಳಲ್ಲಿ ಶೇ.25ರಷ್ಟು ಇಂಥ ಮಕ್ಕಳನ್ನು ಉಚಿತವಾಗಿ ತೆಗೆದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಇವರ ಶಾಲಾ ಶುಲ್ಕವನ್ನು ಸರ್ಕಾರವೇ ಭರಿಸುತ್ತ ಬಂದಿದೆ. ಆದರೆ ಕಳೆದ ವರ್ಷದಿಂದ ಶಾಲೆಗಳಿಗೆ ಆರ್‌ಟಿಇ ಹಣ ಬರುತ್ತಿಲ್ಲ.
2019-20ನೇ ಸಾಲಿನ ಹಣ ಮಾರ್ಚ್ 30ರೊಳಗೆ ಬರಬೇಕಿದ್ದು ಈವರೆಗೆ ಬಿಡುಗಡೆ ಆಗಿಲ್ಲ. ಇದರಿಂದ ಬಹಳಷ್ಟು ಶಾಲೆಗಳಿಗೆ ತೊಂದರೆ ಆಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ. ಖಾಸಗಿ ಶಿಕ್ಷಣ ಸಂಸ್ಥೆಗಳು ಸರ್ಕಾರದ ಜವಾಬ್ದಾರಿ ನಿಭಾಯಿಸುತ್ತವೆ. ಪಾಲಕರು ಸರಿಯಾಗಿ ಫೀ ಕೊಡುತ್ತಿಲ್ಲ. ಕೋವಿಡ್-19 ವೈರಸ್‌ನಿಂದಾಗಿ ಫೀ ಬರದೆ ಶಾಲೆ ನಡೆಸುವುದೇ ಕಷ್ಟಕರವಾಗಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಶೇ.80ರಷ್ಟು ಶಾಲೆಗಳು ಮಾಸಿಕ 1000-1500 ರೂ. ಶುಲ್ಕ ಪಡೆದು ಶಾಲೆ ನಡೆಸುತ್ತಿದ್ದು ಇವುಗಳ ಸ್ಥಿತಿ ಈಗ ಗಂಭಿರವಾಗಿದೆ. ಇಂಥ ಸಂಕಷ್ಟ ಪರಿಸ್ಥಿತಿಯಲ್ಲಿ ಬಾಕಿ ಇರುವ ಆರ್‌ಟಿಇ ಹಣವನ್ನಾದರೂ ಬಿಡುಗಡೆ ಮಾಡಿದರೆ ಖಾಸಗಿ ಶಾಲೆಗಳಿಗೆ ಅನುಕೂಲವಾಗುತ್ತದೆ. ಕೂಡಲೇ ಹಣ ಬಿಡುಗಡೆಗೊಳಿಸಬೇಕೆಂದು ಮನವಿಯಲ್ಲಿ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.