ಎಸ್ಸೆಸ್ಸೆಲ್ಸಿ ಪರೀಕ್ಷೆ: 2ನೇ ದಿನವೂ ಸುಸೂತ್ರ
Team Udayavani, Jun 28, 2020, 3:20 PM IST
ಮುದ್ದೇಬಿಹಾಳ: ಜ್ಞಾನಭಾರತಿ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷಾರ್ಥಿಗಳಿಗೆ ಸ್ಕ್ರೀನಿಂಗ್ ಮಾಡಲು ಆಗಮಿಸಿದ ಸ್ಕೌಟ್ಸ್-ಗೈಡ್ಸ್ ಸಿಬ್ಬಂದಿ, ಆಶಾ ಕಾರ್ಯಕರ್ತೆಯರ ತಂಡ.
ಮುದ್ದೇಬಿಹಾಳ: ಎಸ್ಸೆಸ್ಸೆಲ್ಸಿ ಎರಡನೇ ದಿನದ ಗಣಿತ ವಿಷಯದ ಪರೀಕ್ಷೆ ತಾಲೂಕಿನ 16 ಪರೀಕ್ಷಾ ಕೇಂದ್ರಗಳಲ್ಲಿ ಯಶಸ್ವಿಯಾಗಿ ನಡೆದಿದೆ.
ಆಶಾ ಕಾರ್ಯಕರ್ತೆಯರು, ಆರೋಗ್ಯ ಇಲಾಖೆ ಸಿಬ್ಬಂದಿ, ಭಾರತ ಸ್ಕೌಟ್ಸ್-ಗೈಡ್ಸ್ ಸ್ವಯಂ ಸೇವಕರು, ದೈಹಿಕ ಶಿಕ್ಷಕರು ತಂಡಗಳಾಗಿ ಪ್ರತಿಯೊಂದು ಕೇಂದ್ರದಲ್ಲಿ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ, ಮಾಸ್ಕ್ ಪರಿಶೀಲನೆ, ಹ್ಯಾಂಡ್ ಸ್ಯಾನಿಟೈಜಿಂಗ್ ಮುಂತಾದ ಪ್ರಾಥಮಿಕ ಚಟುವಟಿಕೆ ನಡೆಸಿದರು. ಯಾವುದೇ ಕೇಂದ್ರದಲ್ಲೂ ನಕಲಿನ ಪ್ರಕರಣಗಳು ಕಂಡುಬಂದಿಲ್ಲ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
3197 ಬಾಲಕರು, 2244 ಬಾಲಕಿಯರು ಸೇರಿ 5441 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿದ್ದರು. ಈ ಪೈಕಿ 149 ಬಾಲಕರು, 80 ಬಾಲಕಿಯರು ಸೇರಿ 229 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾಗಿದ್ದರು. 3048 ಬಾಲಕರು, 2164 ಬಾಲಕಿಯರು ಸೇರಿ ಒಟ್ಟು 5212 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆಂದು ಬಿಇಒ ರೇಣುಕಾ ಕಲಬುರ್ಗಿ, ನೋಡಲ್ ಅಧಿಕಾರಿ ಇಸಿಒ ಬಿ.ಎಚ್. ಮೇಟಿ ತಿಳಿಸಿದ್ದಾರೆ.
ಎಂಜಿಎಂಕೆ ಪರೀಕ್ಷಾ ಕೇಂದ್ರದಲ್ಲಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದ ವಿದ್ಯಾರ್ಥಿಯೊಬ್ಬನಿಗೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಿ ಸ್ವತಃ ಆತನೇ ಪರೀಕ್ಷೆ ಬರೆಯಲು, ನಾಗರಬೆಟ್ಟದ ಎಸ್‌ಡಿಕೆ ಮತ್ತು ತಾಳಿಕೋಟೆಯ ಎಸ್‌ಕೆ ಪಿಯು ಕಾಲೇಜಿನ ಪರೀಕ್ಷಾ ಕೇಂದ್ರಗಳಲ್ಲಿ ತಲಾ ಒಬ್ಬರಿಗೆ ಸಹಾಯಕರೊಂದಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿತ್ತು. ಕಂಟೇನ್ಮೆಂಟ್, ಸೀಲ್‌ಡೌನ್ ಪ್ರದೇಶದಿಂದ ಬಂದವರಿಗೆ ಪ್ರತ್ಯೇಕ ಕೊಠಡಿ ನೀಡಿ ಪರೀಕ್ಷೆ ಬರೆಯಲು ಅನುವು ಮಾಡಿಕೊಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ
Vijayapura; ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿ ಕೂರದು: ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.