15ರಂದು ಸಂಗೊಳ್ಳಿ ರಾಯಣ್ಣ ಕಂಚಿನ ಮೂರ್ತಿ ಪ್ರತಿಷ್ಠಾಪನೆ


Team Udayavani, Mar 11, 2020, 2:39 PM IST

11-March-27

ಮುದ್ದೇಬಿಹಾಳ: ಈ ಭಾಗದಲ್ಲೇ ಪ್ರಥಮ ಎನ್ನಿಸಿಕೊಂಡಿರುವ ಅಪ್ರತಿಮ ದೇಶಭಕ್ತ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಕಂಚಿನ ಮೂರ್ತಿ ಅನಾವರಣ ಕಾರ್ಯಕ್ರಮ ಮುದ್ದೇಬಿಹಾಳದಿಂದ 5 ಕಿ.ಮೀ. ಅಂತರದಲ್ಲಿ ನಾಲತವಾಡ ರಸ್ತೆಯಲ್ಲಿರುವ ಕವಡಿಮಟ್ಟಿ ಗ್ರಾಮದಲ್ಲಿ ಮಾ. 15ರಂದು ಅದ್ಧೂರಿಯಾಗಿ ನಡೆಸಲು ಸಕಲ ತಯಾರಿ ಮಾಡಿಕೊಳ್ಳಲಾಗುತ್ತಿದೆ ಎಂದು ತಾಲೂಕು ಕುರುಬರ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಮದರಿ, ಸಂಗೊಳ್ಳಿ ರಾಯಣ್ಣ ಗ್ರಾಮೀಣಾಭಿವೃದ್ಧಿ ಸಂಸ್ಥೆ ಅಧ್ಯಕ್ಷ ಬಸವರಾಜ ಹೊಕ್ರಾಣಿ, ಸಂಚಾಲಕರಾದ ಸಂಗಮೇಶ ವಾಲೀಕಾರ, ಚಂದಾಲಿಂಗ ಹಂಡರಗಲ್ಲ ತಿಳಿಸಿದ್ದಾರೆ.

ಇಲ್ಲಿನ ಹುಡ್ಕೋದ ಹೇಮರಡ್ಡಿ ಮಲ್ಲಮ್ಮ ವೃತ್ತದ ಬಳಿ ಇರುವ ಮದರಿ ಕಾಂಪ್ಲೆಕ್ಸ್‌ನ ಸಂಘದ ಕಚೇರಿಯಲ್ಲಿ ಮಂಗಳವಾರ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪಕ್ಷಾತೀತವಾಗಿ, ಜಾತ್ಯತೀತವಾಗಿ ನಡೆಯಲಿರುವ ಕಾರ್ಯಕ್ರಮಕ್ಕೆ ಅಂದಾಜು 15,000 ಜನ ಸೇರುವ ನಿರೀಕ್ಷೆ ಇದೆ. ಎಲ್ಲ ಸಮಾಜದ, ರಾಜಕೀಯ ಪಕ್ಷಗಳ ಗಣ್ಯರನ್ನು ಆಹ್ವಾನಿಸಲಾಗಿದೆ. ದಿನಪೂರ್ತಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದರು.

ಕವಡಿಮಟ್ಟಿಯ ಸಮಸ್ತ ಜನತೆ ಮತ್ತು ಕುರುಬರ ಸಂಘದ ಆಶ್ರಯದಲ್ಲಿ ತಮ್ಮ (ಮದರಿ) ಅಧ್ಯಕ್ಷತೆಯಲ್ಲಿ ಅಂದು ಬೆಳಗ್ಗೆ 10ಕ್ಕೆ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಮೂರ್ತಿ ಅನಾವರಣಗೊಳಿಸುವರು. ಹಿರಿಯ ಸಚಿವ ಕೆ.ಎಸ್‌. ಈಶ್ವರಪ್ಪ ಸಮಾರಂಭ ಉದ್ಘಾಟಿಸುವರು. ಸ್ಥಳೀಯ ಶಾಸಕ ಎ.ಎಸ್‌.ಪಾಟೀಲ ನಡಹಳ್ಳಿ ಹಾಗೂ ಮಾಜಿ ಸಚಿವ ಸಿ.ಎಸ್‌. ನಾಡಗೌಡ ಜ್ಯೋತಿ ಬೆಳಗಿಸುವರು.

ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ವಿಧಾನ ಪರಿಷತ್‌ ವಿಪಕ್ಷ ನಾಯಕ ಎಸ್‌.ಆರ್‌. ಪಾಟೀಲ, ಸಚಿವ ಭೈರತಿ ಬಸವರಾಜ, ಸಂಸದ ರಮೇಶ ಜಿಗಜಿಣಗಿ, ಕರ್ನಾಟಕ ರಾಜ್ಯ ಕುರಿ ಮೇಕೆ ಮಹಾಮಂಡಳದ ಅಧ್ಯಕ್ಷ ಪಂಡಿತರಾವ್‌ ಚಿದ್ರಿ, ರಾಜ್ಯ ಜೆಡಿಎಸ್‌ ಮಹಿಳಾ ಕಾರ್ಯಾಧ್ಯಕ್ಷೆ ಮಂಗಳಾದೇವಿ ಬಿರಾದಾರ, ಮಾಜಿ ಸಚಿವರಾದ ಎಚ್‌. ವಿಶ್ವನಾಥ, ಎಚ್‌.ಎಂ.ರೇವಣ್ಣ, ಬಂಡೆಪ್ಪ ಖಾಶೆಂಪುರ, ಬಿ.ಬಿ.ಚಿಮ್ಮನಕಟ್ಟಿ, ಎಚ್‌.ವೈ.ಮೇಟಿ, ಆರ್‌.ಶಂಕರ್‌, ಎಂ.ಸಿ.ಮನಗೂಳಿ ಸೇರಿದಂತೆ ಜಿಲ್ಲೆಯ ಹಾಲಿ, ಮಾಜಿ ಶಾಸಕರು, ಸ್ಥಳೀಯ ಸಂಸ್ಥೆಯ ಹಾಲಿ, ಮಾಜಿ ಜನಪ್ರತಿನಿಧಿಗಳು, ಜಿಲ್ಲೆ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ವಿವಿಧ ಸಂಘ, ಸಂಸ್ಥೆ, ಸಹಕಾರಿ ಪದಾಧಿ ಕಾರಿಗಳು, ಹಾಲುಮತ ಸಮಾಜದ ರಾಜ್ಯ, ಜಿಲ್ಲೆ ಮತ್ತು ಸ್ಥಳೀಯ ನಾಯಕರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದರು.

ರಾಷ್ಟ್ರಪ್ರಶಸ್ತಿ ಪುರಸ್ಕಾರ ಪಡೆದ ಡಿವೈಎಸ್ಪಿ ಎಸ್‌.ಎಸ್‌. ಹುಲ್ಲೂರ, ಡಿಸಿಸಿ ಬ್ಯಾಂಕ್‌ ನಿರ್ದೇಶಕ ಸೋಮನಗೌಡ ಬಿರಾದಾರ, ಮೂರ್ತಿ ನಿರ್ಮಾತೃ ವಿಜಯ ಬಿಡದಿ, ಎಪಿಎಂಸಿ ಅಧ್ಯಕ್ಷ ಗುರಣ್ಣ ತಾರನಾಳ ಸೇರಿದಂತೆ 35-40 ಸಾಧಕರು, ಗಣ್ಯರನ್ನು ಬಸನಗೌಡ ಪಾಟೀಲರ 10 ಎಕರೆ ವಿಶಾಲವಾದ ಜಮೀನಿನಲ್ಲಿ ನಡೆಯುವ ಅದ್ಧೂರಿ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗುತ್ತದೆ. ಕಾರ್ಯಕ್ರಮಕ್ಕೂ ಮುನ್ನ ಎಲ್ಲ ಗಣ್ಯರನ್ನು ಡೊಳ್ಳು ಸಹಿತ ಸಕಲ ವಾದ್ಯಗಳೊಂದಿಗೆ ಸೋಮನಗೌಡರ ತೋಟದಿಂದ ಕಾರ್ಯಕ್ರಮ ಸ್ಥಳದವರೆಗೆ ಮೆರವಣಿಗೆಯಲ್ಲಿ ಕರೆತರಲಾಗುತ್ತದೆ.

ಕಾರ್ಯಕ್ರಮಕ್ಕೆ ಬರುವವರಿಗೆ ಸಿಹಿ ಖಾದ್ಯ ಮಾದರಿ, ಅನ್ನಸಾಂಬಾರ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ತಿಳಿಸಿದರು. ಇದೇ ವೇಳೆ ಗ್ರಾಮದ ಯುವ ಮುಖಂಡ ಮುತ್ತು ಪೂಜಾರಿ ಮಾತನಾಡಿ, ಅಂದೇ ಸಂಜೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಯುವ ಬಳಗದಿಂದ ನಡೆಯಲಿದ್ದು ಮೂರ್ತಿ ಅನಾವರಣಕ್ಕೆ ಶ್ರಮಿಸಿದ ಎಲ್ಲ ಗಣ್ಯರನ್ನು, ಸಮಾಜದ ಹಿರಿಯರು, ಧುರೀಣರನ್ನು ಸನ್ಮಾನಿಸಿ ಅಭಿನಂದಿಸಲಾಗುತ್ತದೆ ಎಂದು ತಿಳಿಸಿದರು.

ಪ್ರಮುಖರಾದ ಎಚ್‌.ಟಿ. ಪೂಜಾರಿ, ಎಸ್‌.ಬಿ. ಬಾಚಿಹಾಳ, ಸಿದ್ದಣ್ಣ ಪೂಜಾರಿ, ಹನುಮಂತ ಹಂಡರಗಲ್ಲ, ಗೌಡಪ್ಪ ಹೊಕ್ರಾಣಿ, ಸಂಗಪ್ಪ ಮೇಲಿನಮನಿ, ಬೀರಪ್ಪ ಹೊಕ್ರಾಣಿ, ಬಸವಲಿಂಗಪ್ಪ ಮೇಟಿ, ಮಹಾದೇವ ಪೂಜಾರಿ, ರವಿ ಜಗಲಿ, ಸಂತೋಷ , ಹನುಮಂತ್ರಾಯ ದೇವರಳ್ಳಿ, ಶ್ರೀಶೈಲ ಹೂಗಾರ, ಬಿ.ಎಚ್‌. ಹಾಲಣ್ಣವರ್‌, ರಾಯಣ್ಣ ವಾಲೀಕಾರ ಸೇರಿದಂತೆ ಹಲವರು ಇದ್ದರು.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

23-

Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್

22-

ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ

State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ

State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ

Government will not turn a blind eye if public is inconvenienced: CM Siddaramaiah

Vijayapura; ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿ ಕೂರದು: ಸಿದ್ದರಾಮಯ್ಯ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Fake-Gold

Mangaluru: ನಕಲಿ ಚಿನ್ನ ಅಡವಿಟ್ಟು ವಂಚನೆ; 7ನೇ ಸಲ ಬಂದಾಗ ಸಿಕ್ಕಿಬಿದ್ದ ಮಹಿಳೆ!

Suside-Boy

PaduBidri: ಬಸ್‌ ಢಿಕ್ಕಿ: ಪಾದಚಾರಿ ಸಾವು

Kallabatti

Bantwala: ಪಂಜಿಕಲ್ಲು: ಅಕ್ರಮ ಕಳ್ಳಬಟ್ಟಿ ಅಡ್ಡೆಗೆ ದಾಳಿ

money

Mangaluru: ಹಣ ದ್ವಿಗುಣ ಆಮಿಷ: 3.70 ಲ.ರೂ. ವಂಚನೆ

Arrest

Mangaluru: ಹೊಸ ವರ್ಷ ಪಾರ್ಟಿಗೆ ಡ್ರಗ್ಸ್‌: ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.