ಕೋವಿಡ್ : ಪಿಡಿಒ ತರಾಟೆಗೆ
Team Udayavani, Apr 18, 2020, 3:28 PM IST
ಮುದ್ದೇಬಿಹಾಳ: ಗ್ರಾಮಕ್ಕೆ ಮೂಲಸೌಕರ್ಯ ಒದಗಿಸುವಲ್ಲಿ, ಕೋವಿಡ್ ನಿಯಂತ್ರಣಕ್ಕೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಲ್ಲಿ ವಿಫಲರಾಗಿದ್ದಿರಿ ಎಂದು ಜಮ್ಮಲದಿನ್ನಿ ಇಂಗಳಗೇರಿ ಪಿಡಿಒ ವಿಜಯಕುಮಾರ ಕೋರಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಗ್ರಾಮದಲ್ಲಿ ಶುದ್ಧ ಕುಡಿವ ನೀರು ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಿಲ್ಲ. ಕೋರಿ 2 ವರ್ಷಗಳಿಂದ ಪಿಡಿಒ ಆಗಿ ಕೆಲಸ ಮಾಡುತ್ತಿದ್ದರೂ ಇದುವರೆಗೂ ಗ್ರಾಮಕ್ಕೆ ಭೇಟಿ ನೀಡಿ ಜನರ ಸಮಸ್ಯೆ ಕೇಳಿ ಬಗೆಹರಿಸಲು ಮುಂದಾಗಿಲ್ಲ. ಗ್ರಾಮದ ಯೋಜನೆಗಳನ್ನು ದುರ್ಬಳಕೆ ಮಾಡಿಕೊಂಡು ಸ್ವಜನ ಪಕ್ಷಪಾತ ಎಸಗುತ್ತಿದ್ದಾರೆ. ಮಹಾಮಾರಿ ಕೋವಿಡ್ ಬಂದು ತಿಂಗಳುಗಳಾಗುತ್ತ ಬಂದರೂ ಒಬ್ಬ ಜವಾಬ್ದಾರಿಯುತ ಅಧಿಕಾರಿಯಾಗಿ ನಿಯಂತ್ರಣಕ್ಕೆ ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲ. ಗ್ರಾಮಸ್ಥರು ಒತ್ತಾಯಿಸಿದ ಮೇಲೆ ಪಂಚಾಯತ್ ಅಧ್ಯಕ್ಷರೊಂದಿಗೆ ಗ್ರಾಮಕ್ಕೆ ಬಂದಿದ್ದಾರೆ ಎಂದು ದೂರಿದರು.
ಕೋವಿಡ್ ನ ಈ ಪರಿಸ್ಥಿತಿಯಲ್ಲಿ ಬಡ ಕಾರ್ಮಿಕರಿಗೆ ಉದ್ಯೋಗ ಖಾತ್ರಿ ಯೋಜನೆ ಅಡಿ ಕೆಲಸ ಕೊಡಬೇಕು ಎಂದು ಮೇಲಧಿಕಾರಿಗಳು
ತಿಳಿಸಿದ್ದರೂ ಇದುವರೆಗೂ ಕ್ರಮ ಏಕೆ ಕ್ರಮ ಕೈಗೊಂಡಿಲ್ಲ ಎಂದು ತರಾಟೆಗೆ ತೆಗೆದುಕೊಂಡರು. ಈಗಲಾದರೂ ಸುಧಾರಿಸಿಕೊಂಡು ಕೊರೊನಾ ಮುಂಜಾಗ್ರತಾ ಕ್ರಮ ಕೈಗೊಳ್ಳದಿದ್ದರೆ, ಮೂಲಸೌಕರ್ಯ ಒದಗಿಸದಿದ್ದರೆ ತಾಪಂ ಇಒ, ಜಿಪಂ ಸಿಇಒ, ತಹಶೀಲ್ದಾರ್, ಸ್ಥಳೀಯ ಶಾಸಕರು ಸೇರಿ ಹಲವು ಅಧಿಕಾರಿಗಳ ಬಳಿ ತೆರಳಿ ಪಿಡಿಒ ವರ್ಗಾವಣೆಗೆ ಒತ್ತಾಯಿಸಬೇಕಾಗುತ್ತದೆ ಎಂದು ಗ್ರಾಮಸ್ಥರು ಎಚ್ಚರಿಕೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Tollywood: ‘ಗೇಮ್ ಚೇಂಜರ್ʼಗೆ ರಾಮ್‌ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.