ಮಹಾರಾಷ್ಟ್ರದಿಂದ ಕದ್ದುಮುಚ್ಚಿ ಬಂದವರ ಕ್ವಾರಂಟೈನ್
Team Udayavani, May 9, 2020, 3:49 PM IST
ಮುದ್ದೇಬಿಹಾಳ: ಬಸ್ ನಿಲ್ದಾಣದಲ್ಲಿ ಮಹಾರಾಷ್ಟ್ರದಿಂದ ಬಂದವರ ಬಗ್ಗೆ ಎಚ್ಚರಿಕೆ ವಹಿಸಲು ಶಾಸಕ ನಡಹಳ್ಳಿ ಅಧಿಕಾರಿಗಳಿಗೆ ಸೂಚಿಸಿದರು.
ಮುದ್ದೇಬಿಹಾಳ: ಕೋವಿಡ್ ಪ್ರಕರಣ ಹೆಚ್ಚಿರುವ ಮಹಾರಾಷ್ಟ್ರದ ಕೊಲ್ಲಾಪುರ, ಸಾಂಗ್ಲಿ ಜಿಲ್ಲೆಗಳಿಂದ ತಾಲೂಕಿನ ಹುಲ್ಲೂರು ಗ್ರಾಪಂ ವ್ಯಾಪ್ತಿಯ ತಾಂಡಾಗಳಿಗೆ ಕದ್ದುಮುಚ್ಚಿ ಆಗಮಿಸಿದ್ದ 45 ಜನ ಕಾರ್ಮಿಕರನ್ನು ತಾಲೂಕಾಡಳಿತ ಶುಕ್ರವಾರ ಪತ್ತೆ ಹಚ್ಚಿ ಆಯಾ ತಾಂಡಾಗಳಲ್ಲಿನ ಶಾಲೆಯಲ್ಲಿ ಕ್ವಾರಂಟೈನ್ ನಲ್ಲಿರಿಸಲು ಕ್ರಮ ಕೈಗೊಂಡಿದೆ.
ನಗರ ಕೋವಿಡ್-19 ತಂಡದ ಮೇಲ್ವಿಚಾರಕ ಎಂ.ಎಸ್.ಗೌಡರ ನೇತೃತ್ವದ ಆರೋಗ್ಯ ಇಲಾಖೆ ಸಿಬ್ಬಂದಿ ಬಸ್‌ನಿಲ್ದಾಣಕ್ಕೆ ಬಂದಿದ್ದ 25 ಜನ ಕಾರ್ಮಿಕರ ಆರೋಗ್ಯ ತಪಾಸಣೆ ನಡೆಸಿದರು. ಬಳಿಕ ಎಲ್ಲರನ್ನೂ ವಾಹನದಲ್ಲಿ ಅವರ ತಾಂಡಾಗಳಿಗೆ ಕರೆದೊಯ್ದು ಕ್ವಾರಂಟೈನ್‌ನಲ್ಲಿರಿಸಲಾಯಿತು. ನಿಯಮ ಉಲ್ಲಂಘಿಸದಂತೆ ನೋಡಿಕೊಳ್ಳಲು ಬೀಟ್ ಪೊಲೀಸರಿಗೆ ಸೂಚಿಸಲಾಯಿತು. ಗ್ರಾಪಂ ಮಟ್ಟದ ಕೋವಿಡ್ ಜಾಗೃತಿ ಸಮಿತಿ ಸದಸ್ಯರಿಗೂ ಕಟ್ಟೆಚ್ಚರ ವಹಿಸುವಂತೆ ತಿಳಿಸಲಾಯಿತು. ತಹಶೀಲ್ದಾರ್ ಜಿ.ಎಸ್.ಮಳಗಿ, ಸಿಪಿಐ ಆನಂದ ವಾಗಮೋಡೆ, ತಾಲೂಕು ಆರೋಗ್ಯಾಧಿಕಾರಿ ಡಾ| ಸತೀಶ ತಿವಾರಿ, ತಾಪಂ ಇಒ ಶಶಿಕಾಂತ ಶಿವಪುರೆ ಇದ್ದರು.
ಆಹಾರ ಸಾಮಗ್ರಿ ಕಿಟ್ ಹಂಚಿಕೆ: ಶಾಸಕ ಎ.ಎಸ್. ಪಾಟೀಲ ನಡಹಳ್ಳಿ ಅವರು ಡಿಸಿಸಿ ಬ್ಯಾಂಕ್ ನಿರ್ದೇಶಕ ಸೋಮನಗೌಡ ಬಿರಾದಾರ ಅವರೊಂದಿಗೆ ಬಸ್ ನಿಲ್ದಾಣಕ್ಕೆ ಆಗಮಿಸಿ ಕಾರ್ಮಿಕರು ಹೇಗೆ ಬಂದಿದ್ದಾರೆನ್ನುವ ಮಾಹಿತಿ ಪಡೆದುಕೊಂಡರು. ಎಲ್ಲರಿಗೂ ಆಹಾರ ಸಾಮಗ್ರಿ ಕಿಟ್ ವಿತರಿಸಿ ಕ್ವಾರಂಟೈನ್‌ನಲ್ಲಿದ್ದು ನಿಯಮ ಪಾಲಿಸುವಂತೆ ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.