ಶಾಸಕ ನಡಹಳ್ಳಿ ದಾಸೋಹಕ್ಕೆ ಶ್ರೀಗಳ ಮೆಚ್ಚುಗೆ
Team Udayavani, May 17, 2020, 5:54 AM IST
ಮುದ್ದೇಬಿಹಾಳ: ಯಂಕಂಚಿಮಠದ ಅಭಿನವ ರುದ್ರಮುನಿ ಶಿವಾಚಾರ್ಯರು, ಆಲಮೇಲ ಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿಗಳು ಶನಿವಾರ ಇಲ್ಲಿನ ದಾಸೋಹ ನಿಲಯಕ್ಕೆ ಆಗಮಿಸಿ ಕೋವಿಡ್ ಸಂಕಷ್ಟದಲ್ಲಿ ಬಡವರ ನೋವಿಗೆ ಸ್ಪಂದಿಸುತ್ತಿರುವ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಮತ್ತು ಅವರ ಪತ್ನಿ ಮಹಾದೇವಿ ಅವರನ್ನು ಸನ್ಮಾನಿಸಿ ಆಶೀರ್ವದಿಸಿದರು.
ಈ ವೇಳೆ ಸ್ವಾಮೀಜಿಗಳು ತಂದಿದ್ದ ಹೂಮಾಲೆ ಗಳನ್ನು ದಂಪತಿಗೆ ಹಾಕಿಸಿ ಪತಿ ಪತ್ನಿ ನಡುವಿನ ಅನ್ಯೋನ್ಯ ಬಾಂಧವ್ಯದ ಮಹತ್ವ ತಿಳಿಸಿಕೊಟ್ಟರು. ನಂತರ ಅವರ ಮೇಲೆ ಪುಷ್ಪವೃಷ್ಟಿಗೈದ ಶ್ರೀಗಳು, ಜನರ ಸೇವೆ ಮಾಡಲು ಇನ್ನಷ್ಟು ಶಕ್ತಿ ಬರಲಿ ಎಂದು ಶುಭ ಹಾರೈಸಿದರು. ಈ ವೇಳೆ ಮಾತನಾಡಿದ ಶಾಸಕರು, ಜನಸೇವೆ ಮಾಡಲು ಶ್ರೀಗಳ ಆಶೀರ್ವಾದ ಸದಾ ಹೀಗೆಯೇ ಇರಲಿ ಎಂದು ಕೇಳಿಕೊಂಡರು. ಪುರಸಭೆ ಸದಸ್ಯೆ ಸಂಗಮ್ಮ ದೇವರಳ್ಳಿ, ಬಸಮ್ಮ ಸಿದರಡ್ಡಿ, ಸುಧಾ ಪಾಟೀಲ ಮತ್ತಿತರರು ಇದ್ದರು.
ಪ್ಯಾಕಿಂಗ್ ವೀಕ್ಷಣೆ: ದಾಸೋಹ ನಿಲಯದ ಆವರಣದಲ್ಲಿ ಬಡಜನರಿಗೆ ವಿತರಿಸಲು ತಯಾರಿಸಲಾಗುತ್ತಿರುವ ಆಹಾರ ಸಾಮಗ್ರಿ ಕಿಟ್ ಪ್ಯಾಕಿಂಗ್ ಕಾರ್ಯ ವೀಕ್ಷಿಸಿದ ಶ್ರೀಗಳು, ಇದುವರೆಗೆ 30,000 ಆಹಾರ ಸಾಮಗ್ರಿ ಕಿಟ್ ಹಂಚಿಕೆಯಾಗಿರುವುದನ್ನು ತಿಳಿದು ಮೆಚ್ಚುಗೆ ವ್ಯಕ್ತಪಡಿಸಿದರು. ಅಲ್ಲೆಲ್ಲ ತಿರುಗಾಡಿ ಆಹಾರ ಸಾಮಗ್ರಿಗಳನ್ನು ಪರಿಶೀಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು
Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು
MUST WATCH
ಹೊಸ ಸೇರ್ಪಡೆ
IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.