ನೈಸರ್ಗಿಕವಾಗಿಯೇ ಹಕ್ಕು ಪ್ರಾಪ್ತಿ
Team Udayavani, Dec 11, 2018, 11:23 AM IST
ವಿಜಯಪುರ: ಮಾನವನ ಹುಟ್ಟಿನಿಂದಲೇ ನೈಸರ್ಗಿಕವಾಗಿ ಹಕ್ಕು ಪಡೆದುಕೊಳ್ಳುತ್ತಾನೆ. ಅವುಗಳ ರಕ್ಷಣೆ ಉದ್ದೇಶದಿಂದ ಸಾಂವಿಧಾನಿಕ ಚೌಕಟ್ಟಿನಡಿ ಕಾನೂನುಗಳಿವೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸದಾನಂದ ನಾಯಕ ಹೇಳಿದರು.
ಸೋಮವಾರ ನಗರದ ಜಿಪಂ ಸಭಾಂಗಣದಲ್ಲಿ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಮಾನವ ಹಕ್ಕುಗಳ ರಕ್ಷಣೆಗೆ ಸಂವಿಧಾನ ಅವಕಾಶ ಕಲ್ಪಿಸಿದೆ. ಸಾಂವಿಧಾನಿಕ ಮಾನ್ಯತೆ ನೀಡಿದೆ. ಅವುಗಳ ಉಲ್ಲಂಘನೆ ಆದಾಗ ಕಾನೂನು ನೆರವು ಪಡೆಯಲು ಅವಕಾಶವಿದೆ. ಜಿಲ್ಲೆಯಲ್ಲಿ ಈವರೆಗೆ ಮಾನವ ಹಕ್ಕುಗಳ ಉಲ್ಲಂಘನೆ ಕುರಿತು ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದರು.
ಮಾನವ ತನ್ನ ಇಷ್ಟದಂತೆ ಜೀವಿಸುವ, ಅಭಿಪ್ರಾಯ ವ್ಯಕ್ತಪಡಿಸುವ, ಧರ್ಮ ಅನುಸರಿಸುವ ಸಮಾನತೆ ಸೇರಿದಂತೆ ಹಲವು ಹಕ್ಕುಗಳ ಉಲ್ಲಂಘನೆ ಸಂದರ್ಭದಲ್ಲಿ ಅಗತ್ಯ ಕಾನೂನು ನೆರವು ಪಡೆಯಬಹುದು. ಒಬ್ಬ ವ್ಯಕ್ತಿಗೆ ಗೌರವಯುತ ಜೀವನವನ್ನು ಹಕ್ಕುಗಳು ದೊರಕಿಸಿಕೊಡುತ್ತವೆ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಜಿಪಂ ಸಿಇಒ ವಿಕಾಸ ಸುರಳಕರ ಮಾತನಾಡಿ, ಮಾನವ ಹಕ್ಕುಗಳ ರಕ್ಷಣೆ ಕುರಿತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆ ನಡೆದ
ಸಂದರ್ಭದಲ್ಲಿಯೇ ಭಾರತದ ಸಂವಿಧಾನ ರಚನೆ ಕಾರ್ಯ ನಡೆದಿತ್ತು. ಅದರ ಪರಿಣಾಮ ಭಾರತದ ಸಂವಿಧಾನದಲ್ಲಿ ಮಾನವ ಹಕ್ಕುಗಳ ರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಲಾಯಿತು. ಇತರೆ ದೇಶಗಳಿಗೆ ಹೋಲಿಸಿದರೆ ನಮ್ಮ ದೇಶದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಪ್ರಕರಣಗಳು ಕಡಿಮೆ ಎಂದರು.
ಮಾನವ ಹಕ್ಕುಗಳು ಮತ್ತು ಅವುಗಳ ಮಹತ್ವ, ರಕ್ಷಣೆ ಕುರಿತು ಜನರಲ್ಲಿ ಇನ್ನೂ ಹೆಚ್ಚಿನ ತಿಳಿವಳಿಕೆ ಮೂಡಬೇಕು. ಅದರಿಂದ ಹಕ್ಕುಗಳ ಉಲ್ಲಂಘನೆಯಾಗದಂತೆ ತಡೆಯಲು ಸಹಾಯಕವಾಗುತ್ತದೆ. ದೇಶದ ಕಾನೂನುಗಳ ಜೊತೆ ಜನರ ಸಹಕಾರವೂ ಅವಶ್ಯಕ ಎಂದು ಹೇಳಿದರು.
ಕಾನೂನು ಸಲಹೆಗಾರ ಬಿ.ಎಂ. ನೂಲ್ವಿ ಪ್ರಾಸ್ತಾವಿಕ ಮಾತನಾಡಿ, 1948ರಿಂದ ವಿಶ್ವಮಾನವ ಹಕ್ಕುಗಳ ದಿನಾಚರಣೆ ಆರಂಭವಾಗಿದ್ದು, ಇದೀಗ 71ನೇ ದಿನಾಚರಣೆ ಆಚರಿಸಲಾಗುತ್ತಿದೆ. ನೈಸರ್ಗಿಕವಾಗಿ ದೊರೆತ ಹಕ್ಕುಗಳ ರಕ್ಷಣೆಗೆ ಕಾನೂನು ಚೌಕಟ್ಟನ್ನು ಒದಗಿಸುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಎಚ್.ಪ್ರಸನ್ನ, ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಭಾಕರ್‌ರಾವ್ ಸೇರಿದಂತೆ ಜಿಲ್ಲೆಯ ಎಲ್ಲ ತಹಶೀಲ್ದಾರ್‌ರು, ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.
ಮಾನವ ಹಕ್ಕುಗಳ ರಕ್ಷಣೆ ಕುರಿತು ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಮಹೇಶ ಪೋತದಾರ ಪ್ರತಿಜ್ಞಾ ವಿಧಿ ಬೋಧಿಸಿದರು. ಹುಮಾಯೂನ್ ಮಮದಾಪುರ ನಿರೂಪಿಸಿದರು. ಮಂಜುಳಾ ಹಿಪ್ಪರಗಿ ಪ್ರಾರ್ಥಿಸಿದರು. ಪ್ರಭಾರ ಉಪ ವಿಭಾಗಾಧಿಕಾರಿ ಡಾ| ಔದ್ರಾಮ
ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ
Vijayapura; ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿ ಕೂರದು: ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.