ಕೇಂದ್ರ-ರಾಜ್ಯ ಸರ್ಕಾರಗಳಿಂದ ಅಂಗನವಾಡಿ ನೌಕರರ ಕಡೆಗಣನೆ
Team Udayavani, Jul 19, 2022, 5:35 PM IST
ವಿಜಯಪುರ: ಪ್ರಸ್ತುತ ಸಂದರ್ಭದಲ್ಲಿ ಕೇಂದ್ರ ರಾಜ್ಯ ಸರ್ಕಾರಗಳು ಅಂಗನವಾಡಿ ನೌಕರರಿಗೆ ಕಾಯಂಮಾತಿ ಮಾಡಬೇಕು. ಮಾಡುವವರೆಗೆ ಕನಿಷ್ಟ ವೇತನ ಜಾರಿ ಮಾಡಬೇಕು. ಸುಪ್ರೀಂಕೋರ್ಟ್ ಅಂಗನವಾಡಿ ನೌಕರರಿಗೆ ಗ್ರಾಚ್ಯೂಟಿ ನೀಡಬೇಕು ಎಂದು ಅಂಗನವಾಡಿ ನೌಕರರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನಂದಾ ಆಗ್ರಹಿಸಿದರು.
ನಗರದ ಶಿವಶರಣೆ ನಿಂಬೆಕ್ಕ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಅಂಗನವಾಡಿ ನೌಕರರ ಸಂಘದ ಸಮ್ಮೇಳನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯ ಸರ್ಕಾರ ಅಂಗನವಾಡಿ ನೌಕರರಿಗೆ ತಾರಾತಮ್ಯ ಮಾಡುತ್ತಿವೆ. ಸುಪ್ರೀಂಕೋರ್ಟ್ ಆದೇಶ ಜಾರಿಗೆ ತರಲು ಆಗ್ರಹಿಸಿ ಇದೆ ಜು. 26ರಿಂದ ದೆಹಲಿ ಚಲೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ವಲಯವಾರು 5 ಜನರು ಕಡ್ಡಾಯವಾಗಿ ಹೋರಾಟದ ಪಾಲ್ಗೊಳ್ಳಬೇಕು ಎಂದರು.
ಸಂಘಟನೆ ರಾಜ್ಯಾಧ್ಯಕ್ಷೆ ಶಾಂತಾ ಘಂಟೆ, ಭೀಮಶಿ ಕಲಾದಗಿ, ಅಣ್ಣಾರಾಯ ಈಳಗೇರ ಮಾತನಾಡಿದರು. ಸಭೆಯಲ್ಲಿ ಸಂಘಟನೆಯ ವಿಜಯಪುರ ಜಿಲ್ಲಾಧ್ಯಕ್ಷರಾಗಿ ಸುನಂದಾ ನಾಯಕ, ಪ್ರಧಾನ ಕಾರ್ಯದರ್ಶಿಯಾಗಿ ಅಶ್ವಿನಿ ತಳವಾರ, ಖಜಾಂಚಿಯಾಗಿ ಪ್ರತಿಭಾ ಕುರಡೆ, ಗೌರವಾಧ್ಯಕ್ಷರಾಗಿ ಭಾರತಿ ವಾಲಿ ಅವರನ್ನು ಆಯ್ಕೆ ಮಾಡಲಾಯಿತು. ಸುವರ್ಣಾ ಹಲಗಣಿ, ಗೀತಾ ನಾಯಕ, ಶೋಭಾ ಕಬಾಡೆ, ದಾನಮ್ಮ ಗುಗ್ಗರಿ, ಸರಸ್ವತಿ ಮಠ ಸೇರಿದಂತೆ ಇತರರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ
Vijayapura; ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿ ಕೂರದು: ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
MUDA Scam: ಕೇಸ್ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು
Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?
Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ
Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ
ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.