ನೂತನ ಶಿಕ್ಷಣ ನೀತಿ ಜಾರಿ ಅನಿವಾರ್ಯ
Team Udayavani, Feb 27, 2022, 5:17 PM IST
ವಿಜಯಪುರ: ಭಾರತದ ಶಿಕ್ಷಣ ವ್ಯವಸ್ಥೆ ಆಧಾರದಲ್ಲೇ ಭಾರತವೂ ಸಾಗಬೇಕು. ಶಿಕ್ಷಣ ಎಂದರೆ ಉದ್ಯೋಗ, ನೌಕರಿ ಹುಡುಕುವ ಕಲಿಕೆಯಲ್ಲ. ದೇಶದ ಸಮಗ್ರ ಅಭಿವೃದ್ಧಿಗಾಗಿ ಪ್ರಜೆಗಳ ಸರ್ವತೋಮುಖ ಅಭಿವೃದ್ಧಿಗೆ ಸಹಕಾರಿಯಾಗಬೇಕು ಎಂದು ಮೇಲ್ಮನೆ ಶಾಸಕ ಅರುಣ ಶಹಾಪುರ ಅಭಿಪ್ರಾಯಪಟ್ಟರು.
ನಗರದ ಬಿಎಲ್‌ಡಿಇ ಸಂಸ್ಥೆಯ ಎಸ್.ಬಿ. ಕಲಾ ಹಾಗೂ ಕೆಸಿಪಿ ವಿಜ್ಞಾನ ಮಹಾವಿದ್ಯಾಲಯ, ಬೆಳಗಾವಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕನ್ನಡ ಅಧ್ಯಾಪಕರ ಪರಿಷತ್ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಶಿಕ್ಷಣ ನೀತಿ-2020 ಅನ್ವಯ ಪದವಿ ಪಠ್ಯಗಳ ಪರಿಷ್ಕರಣ ಮತ್ತು ರಚನಾ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಶಿಕ್ಷಣ ನೀತಿ-2020 ಭಾರತಾದ್ಯಂತ ಜಾರಿಗೊಳ್ಳುತ್ತಿದೆ ಎಂದರು.
ಶೈಕ್ಷಣಿಕವಾಗಿ ಬದಲಾವಣೆ ಅನಿವಾರ್ಯವಾಗಿದೆ. ಹೀಗಾಗಿ ರಾಷ್ಟ್ರೀಯ ಶಿಕ್ಷಣ ನೀತಿ-2020 ಹೊಸ ಶಿಕ್ಷಣ ನೀತಿ ಅಳವಡಿಸಿಕೊಳ್ಳುವುದು ಅನಿವಾರ್ಯವೂ ಹೌದು. ಹಲವು ಸಲಹೆ ಸೂಚನೆಗಳ ಮೆರೆಗೆ ಈ ಒಂದು ನೀತಿ ಜಾರಿಯಾಗಿದ್ದು ರಾಷ್ಟ್ರೀಯ ಶಿಕ್ಷಣ ನೀತಿಗೆ ಅನುಗುಣವಾಗಿ ಕನ್ನಡ ಪಠ್ಯಗಳನ್ನು ರಚನೆ ಮಾಡುವ ಉದ್ದೇಶದಿಂದ ಕನ್ನಡ ಪ್ರಾಧ್ಯಾಪಕರನ್ನೆಲ್ಲ ಒಂದೆಡೆ ಸೇರಿಸಿ ಅವರ ಅಭಿಪ್ರಾಯ ಹಾಗೂ ಜ್ಞಾನವನ್ನು ಬಳಸಿ ಪಠ್ಯಗಳು ರಚನೆಯಾಗಬೇಕು ಎಂದು ಹೇಳಿದರು.
ರಾಷ್ಟ್ರೀಯ ಶಿಕ್ಷಣ ನೀತಿ-2020ರ ಜಾಗತಿಕರಣದ ಕುರಿತು ಕರ್ನಾಟಕ ವಿಶ್ವವಿದ್ಯಾಲಯದ ಸಮಾಜಶಾಸ್ತ್ರ ವಿಭಾಗದ ಡಾ| ಈರಣ ಮುಳುಗುಂದ ಮಾತನಾಡಿ, ಇಂದಿನ ಶಿಕ್ಷಣವು ಜಾಗತಿಕರಣದ ಪ್ರಭಾಕ್ಕೆ ಒಳಗಾಗುತ್ತಿದ್ದು ಇಂದಿನ ಶಿಕ್ಷಣ ನೀತಿಯಿಂದಾಗಿ ಅನೇಕ ಭಾಷೆಗಳು ಮುನ್ನೆಲೆಗೆ ಬರುತ್ತಿವೆ. ಕೌಶಲ್ಯಾಧಾರಿತ ಶಿಕ್ಷಣಕ್ಕೆ ಹೆಚ್ಚು ಮಹತ್ವ ದೊರೆಯುತ್ತಿದೆ ಎಂದು ಹೇಳಿದರು.
ಉದ್ಘಾಟಕರಾಗಿದ್ದ ಮಹಾಂತೇಶ ಬಿರಾದಾರ ಮಾತನಾಡಿ, ರಾಷ್ಟ್ರೀಯ ಶಿಕ್ಷಣ ನೀತಿ-2020ರ ಪಠ್ಯಕ್ರಮವು ಸಂಬಂಧಗಳನ್ನು ಜೋಡಿಸುವಂತಿರಬೇಕು. ಮೌಲ್ಯಾಧಾರಿತವಾಗಿರಬೇಕು ಎನ್ನುತ್ತ ಹೊಸ ಶಿಕ್ಷಣ ನೀತಿಗಳು ಸವಾಲಾಗುತ್ತಿವೆ. ರಾಷ್ಟ್ರೀಯ ಶಿಕ್ಷಣ ನೀತಿಯು ಯಶಸ್ವಿಯಾಗಲಿ ಎಂದರು.
ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ ವಿಶೇಷಾ ಧಿಕಾರಿ ಎಂ.ಜಯಪ್ಪ ಮಾತನಾಡಿ, ರಾಷ್ಟ್ರೀಯ ಶಿಕ್ಷಣ ನೀತಿಯಡಿಯಲ್ಲಿ ರಚನೆಯಾಗುವ ಪಠ್ಯಕ್ರಮವು ವಿಭಿನ್ನವಾಗಿದೆ. ವಿದ್ಯಾರ್ಥಿಗಳ ಅಭಿವೃದ್ಧಿಗೆ ಪೂರಕ ಆಗುವಂತೆ ಇರಬೇಕು. ಅದನ್ನು ಸಮಾನ ಮನಸ್ಸುಳ್ಳ ಎಲ್ಲ ಕನ್ನಡ ಪ್ರಾಧ್ಯಾಪಕರು ಸೇರಿ ರಚಿಸಬೇಕು. ಪಠ್ಯಕ್ರಮದ ರಚನೆಯು ಉಳಿದ ವಿಶ್ವವಿದ್ಯಾಲಯಗಳಿಗೆ ಮಾದರಿಯಾಗಬೇಕು ಎಂದರು.
ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕನ್ನಡ ಅಭ್ಯಾಸ ಮಂಡಳಿ ಅಧ್ಯಕ್ಷ ಡಾ| ಗುಂಡಣ್ಣ ಕಲಬುರ್ಗಿ, ಕನ್ನಡ ಅಧ್ಯಾಪಕರ ಸಂಘದ ಅಧ್ಯಕ್ಷ ಎಸ್.ಐ. ಬಿರಾದಾರ, ಬಿಎಲ್‌ಡಿಇ ಸಂಸ್ಥೆಯ ಎಸ್.ಬಿ. ಕಲಾ ಹಾಗೂ ಕೆಸಿಪಿ ವಿಜ್ಞಾನ ಮಹಾವಿದ್ಯಾಲಯ ಪ್ರಾಚಾರ್ಯ ಡಾ| ಎ.ಎಸ್. ಪೂಜಾರ ಉಪ ಪ್ರಾಚಾರ್ಯರು ಡಾ| ಯು.ಎಸ್. ಪೂಜಾರಿ, ಬಿ.ಎಸ್. ಬಗಲಿ, ಸಂಪನ್ಮೂಲ ವ್ಯಕ್ತಿಗಳಾದ ಡಾ| ಈರಣ್ಣ ಮುಳಗುಂದ ಇದ್ದರು. ಆಶ್ವಿನಿ ಹಿರೇಮಠ ಪ್ರಾರ್ಥಿಸಿದರು, ಕನ್ನಡ ವಿಭಾಗದ ಡಾ| ಉಷಾದೇವಿ ಹಿರೇಮಠ ನೀರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ambedkar Row: ಕಾಂಗ್ರೆಸ್ ಎಂದರೆ ಫೇಕ್ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ
Delhi bom*b ಬೆದರಿಕೆ; ಮಕ್ಕಳಿಗೆ ರಜೆ ಬೇಕಾಗಿತ್ತು: ಕಾರಣ ಬಿಚ್ಚಿಟ್ಟ ಪೊಲೀಸರು!
ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ
Sabarimala Railway: ಶಬರಿಮಲೆ ತೀರ್ಥಾಟನೆ: ಕೇರಳಕ್ಕೆ 10 ವಿಶೇಷ ರೈಲು
Champions Trophy, ಭಾರತ ಪ್ರವಾಸಕ್ಕೆ ಇಂಗ್ಲೆಂಡ್ ತಂಡ ಪ್ರಕಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.