ಸರಳ ಮದುವೆಯಾಗಿ 50 ಸಾವಿರ ರೂ ಮೌಲ್ಯದ ಅಗತ್ಯ ಸಾಮಾಗ್ರಿ ಹಂಚಿದ ಜೋಡಿ
Team Udayavani, Apr 29, 2020, 5:28 PM IST
ವಿಜಯಪುರ: ಕೋವಿಡ್-19 ಸೋಂಕು ಹಿನ್ನೆಲೆಯಲ್ಲಿ ಸರಳ ಮದುವೆಯಾದ ನವ ದಂಪತಿ ಮದುವೆಗೆಂದು ಖರ್ಚು ಮಾಡಲಿದ್ದ 50 ಸಾವಿರ ರೂ. ಹಣದಲ್ಲಿ ಬಡವರಿಗೆ ಅಗತ್ಯ ಆಹಾರ ಧಾನ್ಯ ಹಂಚಿ ಮಾದರಿ ಸೇವೆ ಮಾಡಿದ್ದಾರೆ.
ವಿಜಯಪುರ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ಏಪ್ರಿಲ್ 16 ರಂದು ಸರಳವಾಗಿ ಮದುವೆಯಾದ ಅನೀಲ ಹಾಗೂ ಲಕ್ಷ್ಮೀ, ಮದುವೆಗೆ ಬಳಸದ 50 ಸಾವಿರ ರೂ. ಮೌಲ್ಯದ ಆಹಾರ ಧಾನ್ಯಗಳನ್ನು ತಮ್ಮ ಗ್ರಾಮದ ಬಡತನದಲ್ಲಿದ್ದ ಸುಮಾರು 80 ಕುಟುಂಬಗಳ ಜನರಿಗೆ ಅಕ್ಕಿ, ಬೆಲ್ಲ, ಸಕ್ಕರೆ, ಸಾಬೂನು, ಎಣ್ಣೆ, ಬೇಳೆ, ಹಿಟ್ಟು, ಉಪ್ಪು, ಬಿಸ್ಕತ್ ಸೇರಿದಂತೆ ಅಗತ್ಯ ವಸ್ತುಗಳನ್ನು ವಿತರಣೆ ಮಾಡಿದ್ದಾರೆ.
ಕೋವಿಡ್-19 ಲಾಕಡೌನ್ ಸಂದರ್ಭದಲ್ಲಿ ಸ್ವಗ್ರಾಮದ ಜನರಿಗೆ ನೆರವಾಗುವ ಮೂಲಕ ತಮ್ಮ ಮದುವೆಯನ್ನು ಸ್ಮರಣೀಯ ಮಾಡಿಕೊಂಡ ನವ ದಂಪತಿಯ ಮಾನವೀಯ ಕಾರ್ಯಕ್ಕೆ ಗ್ರಾಮಸ್ತರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು
Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು
Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು
Muddebihal: ಟ್ರ್ಯಾಕ್ಟರ್-ಟ್ರೇಲರ್ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು
MUST WATCH
ಹೊಸ ಸೇರ್ಪಡೆ
Kanakadasa Jayanthi ಇಂದು; ಕನಕದಾಸರ ತಣ್ತೀಗಳು ಹಿಂದೆಂದಿಗಿಂತ ಇಂದಿಗೆ ಹೆಚ್ಚು ಪ್ರಸ್ತುತ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.