ಗೋವಾದಿಂದ ಆಗಮಿಸಿದ ಕಾರ್ಮಿಕರ ತಪಾಸಣೆ
Team Udayavani, May 10, 2020, 12:19 PM IST
ನಿಡಗುಂದಿ: ಪಟ್ಟಣದ ಬಸ್ ನಿಲ್ದಾಣದಲ್ಲಿರುವ ಚೆಕ್‌ಪೋಸ್ಟ್‌ನಲ್ಲಿ ಗೋವಾದಿಂದ ಆಗಮಿಸಿದ ಜನರ ಆರೋಗ್ಯ ಪರೀಕ್ಷೆ ನಡೆಸಲಾಯಿತು
ನಿಡಗುಂದಿ: ಗೋವಾ ರಾಜ್ಯದಿಂದ ಶುಕ್ರವಾರ ರಾತ್ರಿ 5 ಬಸ್‌ಗಳಲ್ಲಿ ಆಗಮಿಸಿದ 165 ಜನರನ್ನು ಥರ್ಮಲ್ ಸ್ಕ್ರಿನಿಂಗ್ ಮಾಡಿ ಅವರವರ ಗ್ರಾಮಗಳಲ್ಲೇ ಹೋಮ್ ಕ್ವಾರಂಟೈನ್‌ನಲ್ಲಿಲು ಸೂಚಿಸಲಾಗಿದೆ ಎಂದು ತಹಶೀಲ್ದಾರ್ ಶಿವಲಿಂಗಪ್ರಭು ವಾಲಿ ತಿಳಿಸಿದ್ದಾರೆ.
ತಾಲೂಕಿನ ಗಣಿ, ಗಣಿ ಆರ್‌ಸಿ, ಮಾರಡಗಿ, ಮಾರಡಗಿ ತಾಂಡಾ, ಚಿಮ್ಮಲಗಿ, ಚಿಮ್ಮಲಗಿ ತಾಂಡಾ, ಹಂಚಿನಾಳ ಗ್ರಾಮಗಳಿಗೆ ಸೇರಿದ 165 ಜನರು 5 ಬಸ್ ಗಳಲ್ಲಿ ಶುಕ್ರವಾರ ರಾತ್ರಿ ಆಗಮಿಸಿದ್ದರು. ಇವರನ್ನು ಚೆಕ್‌ಪೋಸ್ಟ್‌ನಲ್ಲಿ ಥರ್ಮಲ್ ಸ್ಕ್ರಿನಿಂಗ್ ಮಾಡಿಸಿ, ಅವರ ಅಗತ್ಯ ಮಾಹಿತಿ ದಾಖಲಿಸಿಕೊಂಡು ಸ್ವಗ್ರಾಮಕ್ಕೆ ಕಳಿಸಲಾಗಿದೆ. ಗೋವಾ ರಾಜ್ಯ ಹಸಿರು ವಲಯದಲ್ಲಿ ಬರುವುದರಿಂದ ಕೊರಾನಾ ಭೀತಿ ಡಿಮೆ ಇದ್ದರೂ ಮುಂಜಾಗ್ರತಾ ಕ್ರಮವಾಗಿ ಎಲ್ಲರನ್ನೂ ಪರೀಕ್ಷೆ ಮಾಡಿಯೇ ಕಳುಹಿಸಲಾಗಿದೆ ಎಂದು ತಿಳಿಸಿದರು.
ಶನಿವಾರ ತಡರಾತ್ರಿ ಗೋವಾ ರಾಜ್ಯದಿಂದ 12 ಬಸ್‌ಗಳ ಮೂಲಕ ನಿಡಗುಂದಿ, ಮುದ್ದೇ ಬಿಹಾಳ ಸೇರಿದಂತೆ ನಾನಾ ತಾಲೂಕಿನ ಅಂದಾಜು 320ಕ್ಕೂ ಅಧಿಕ ಜನರು ಆಗಮಿಸಲಿದ್ದಾರೆ. ಅವರನ್ನೂ ಪರೀಕ್ಷೆ ಮಾಡಿ ಮಾಹಿತಿ ಸಂಗ್ರಹಿಸಲಾಗುವುದು ಎಂದು ತಹಶೀಲ್ದಾರ್ ವಾಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು
Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು
Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು
Muddebihal: ಟ್ರ್ಯಾಕ್ಟರ್-ಟ್ರೇಲರ್ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು
Waqf Notice: ಒಂದಿಂಚು ಜಮೀನು ವಕ್ಫ್‌ಗೆ ಹೋಗಲು ಬಿಡಲ್ಲ: ಸಚಿವ ಎಂ.ಬಿ.ಪಾಟೀಲ್
MUST WATCH
ಹೊಸ ಸೇರ್ಪಡೆ
Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು
Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ
Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.