ಹಿಂಸೆಕೋರರ ವಿರುದ್ಧ ಕ್ರಮಕ್ಕೆ ಆಗ್ರಹ

ದೇಶ ವಿರೋಧಿ ಹೇಳಿಕೆ ಅಕ್ಷಮ್ಯ ಅಪರಾಧ ಸಿಎಎ ವಿರುದ್ಧ ವಿನಾಕಾರಣ ಪ್ರತಿಭಟನೆ ತರವಲ್ಲ

Team Udayavani, Feb 26, 2020, 2:55 PM IST

26-February-15

ನಿಡಗುಂದಿ: ದೇಶಾದ್ಯಂತ ಸಿಎಎ ವಿರುದ್ಧ ಹಿಂಸಾತ್ಮಕ ಆಂದೋಲನ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ಆಗ್ರಹಿಸಿ ಪಟ್ಟಣದಲ್ಲಿ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ತಾಲೂಕಾಡಳಿತದ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.

ಬಿಜೆಪಿ ಮುಖಂಡ ಪ್ರಲ್ಹಾದ ಪತ್ತಾರ ಮಾತನಾಡಿ, ಇತ್ತೀಚಿಗೆ ಬೆಂಗಳೂರಿನ ಪ್ರೀಡಮ್‌ ಪಾರ್ಕ್‌ ಬಳಿ ಪೌರತ್ವ ಕಾಯ್ದೆ ವಿರುದ್ಧ ಪ್ರತಿಭಟನೆಯಲ್ಲಿ ಎಂಐಎಂ ಪಕ್ಷದ ಸಂಸದ ಓವೈಸಿ ಸಮ್ಮುಖದಲ್ಲಿ ಅಮೂಲ್ಯ ಲಿಯೋನಾ ಪಾಕಿಸ್ತಾನಕ್ಕೆ ಜೈಕಾರ ಹಾಕಿದ್ದಾಳೆ.

ಕಲಬುರಗಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಸಹ ಎಂಐಎಂ ಪಕ್ಷದ ಶಾಸಕ ವಾರಿಸ್‌ ಪಠಣ್‌ 15 ಕೋಟಿ ಮುಸಲ್ಮಾನರು ಸೇರಿದರೆ, 100 ಕೋಟಿ ಹಿಂದೂಗಳು ಯಾವ ಲೆಕ್ಕಕ್ಕೂ ಇಲ್ಲ ಎಂದು ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ. ಇದು ಅತ್ಯಂತ ಗಂಭೀರ ದೇಶದ್ರೋಹದ ಪ್ರಕರಣವಾಗಿದೆ. ಅದಕ್ಕಾಗಿ ಇಂತಹ ದೇಶ ವಿರೋಧಿ  ಹೇಳಿಕೆ ನೀಡುವ ಜನರ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದರು.

ಹಿಂದೂ ಜನಜಾಗೃತಿ ಸಮಿತಿ ಮುಖಂಡ ವೈ. ಎಸ್‌. ಭಜಂತ್ರಿ ಮಾತನಾಡಿ, ಶಾಹೀನ್‌ ಬಾಗ್‌ ಪರಿಸರದಲ್ಲಿ ಪೌರತ್ವ ಸುಧಾರಣೆ ಕಾಯ್ದೆ ವಿರುದ್ಧ ಕಳೆದ ವರ್ಷದ ಡಿಸೆಂಬರ್‌ನಲ್ಲಿ ಮತಾಂಧರು ಧರಣಿ ಆಂದೋಲನ ಪ್ರಾರಂಭಿಸಿದ್ದಾರೆ. ಈ ಆಂದೋಲನದ ಯೋಜನೆಯನ್ನು ರೂಪಿಸುವ “ಜೆಎನ್‌ಯೂ’ನ ಮಾಜಿ ವಿದ್ಯಾರ್ಥಿ ಶರಜೀಲ್‌ ಇಮಾಮನು ಬಹಿರಂಗವಾಗಿ “ಅಸ್ಸಾಮ್‌ ಅನ್ನು ಭಾರತದಿಂದ ಮುರಿಯಲು ಸಹಾಯ ಮಾಡುವುದು ತಮ್ಮ ಕರ್ತವ್ಯವಾಗಿದೆ. ಹಾಗೆ ಮಾಡಿದರೆ ಕೇಂದ್ರ ಸರಕಾರವು ನಾವು ಹೇಳಿದಂತೆ ಕೇಳುತ್ತದೆ’. “ರೈಲು ಗಾಡಿಗಳನ್ನು ನಿಲ್ಲಿಸಿರಿ’, ಎಂಬ ಹೇಳಿಕೆಗಳನ್ನು ನೀಡಿದನು.

ಈತನು “ಈ ರೀತಿಯ ಆಂದೋಲನವನ್ನು ದೇಶದಾದ್ಯಂತ ಮಾಡಿರಿ ಎಂದು ಸತತವಾಗಿ ಪ್ರಚೋದನೆ ಮಾಡುತ್ತಿದ್ದಾನೆ ಇಂತಹ ಮತಾಂಧರ ಮೇಲೆ ಕಾನೂನು ಶಿಕ್ಷೆ ಜರುಗಿಸಬೇಕೆಂದರು. ಅದೇ ಸಂದರ್ಭದಲ್ಲಿ ಸಂಪೂರ್ಣ ದೇಶದಲ್ಲಿ ನಿರ್ಬಂಧ ಹೇರಿರುವ “ಸಿಮಿ’ ಉಗ್ರಗಾಮಿಗಳು ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾದ (ಪಿಎಫ್‌ಐ) ಕಾರ್ಯಕರ್ತರಿಗೆ ತರಬೇತಿ ನೀಡಿದ್ದಾಗಿ ಕೆಲವು ಘಟನೆಗಳಿಂದ ಬೆಳಕಿಗೆ ಬಂದಿದೆ. ಆದ್ದರಿಂದ ದೇಶದಲ್ಲಿ ಕಾನೂನು ಹಾಗೂ ಸುವ್ಯವಸ್ಥೆಗೆ ತೊಂದರೆಯಾಗದೆ ಇರಲು “ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ’ ಎಂಬ ಸಂಘಟನೆ ಮೇಲೆ ನಿರ್ಬಂಧ ಹೇರುವ ಬೇಡಿಕೆಯನ್ನು ಈ ಆಂದೋಲನದಲ್ಲಿ ಮಾಡಲಾಯಿತು.

ನಿವೃತ್ತ ನೌಕರರ ಸಂಘದ ಶ್ರೀಶೈಲಪ್ಪ ರೇವಡಿ, ಚಂದ್ರಶೇಖರ ನಿಡಗುಂದಿ, ಸಿದ್ರಾಮೇಶ ಅರಮನಿ ಮಾತನಾಡಿದರು. ವೆಂಕಟರಮನ್‌ ನಾಯ್ಕ, ಚಿನ್ನಪ್ಪ ಬಾವೂರ, ಜೆ.ಜೆ. ಗಂಟಿ, ಶಂಕ್ರಪ್ಪ ಹಣಗಿ, ಶಂಕ್ರಪ್ಪ ಅಂಗಡಿ, ಅಶೋಕ ಬಸರಕೋಡ, ಶಿವಲಿಂಗಪ್ಪ ಪಟ್ಟಣಶೆಟ್ಟಿ, ರುದ್ರು ಚಟ್ಟೇರ, ಗಂಗು ವಡ್ಡರ, ಸುನೀಲ ಇಂಗಳೇಶ್ವರ, ಬಸು ಕೋತಿನ, ಪ್ರಕಾಶ ಕಟಬರ, ಅಭಿಷೇಕ ಕುಮಿತ್ಕರ, ಬಸು ಗೌರಿ ಇದ್ದರು.

ಟಾಪ್ ನ್ಯೂಸ್

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Bangla–Pak

Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!

Basavaraj-horatti

Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ

Kannada-Replica

Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

Rajbhavana

Derogatory Term: ರಾಜಭವನ ಅಂಗಳಕ್ಕೆ ತಲುಪಿದ ಲಕ್ಷ್ಮೀ ಹೆಬ್ಬಾಳ್ಕರ್‌- ಸಿ.ಟಿ.ರವಿ ವಾಗ್ವಾದ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

1-vijay

Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

23-

Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್

22-

ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Bangla–Pak

Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!

Basavaraj-horatti

Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ

Kannada-Replica

Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.