ವಿಜಯಪುರದಲ್ಲಿ ಲಾಕ್ ಡೌನ್ ಮಾಡಲಾಗುವುದಿಲ್ಲ; ಗೋವಿಂದ ಕಾರಜೋಳ
Team Udayavani, Jul 13, 2020, 3:31 PM IST
ವಿಜಯಪುರ: ವಿಜಯಪುರ ಜಿಲ್ಲೆಯು ಕೋವಿಡ್ ರೆಡ್ ಝೋನ್ ನಿಂದ ಹೊರಗೆ ಇರುವ ಕಾರಣ ಲಾಕ್ ಡೌನ್ ಅಗತ್ಯವಿಲ್ಲ ಡಿಸಿಎಂ ಗೋವಿಂದ ಕಾರಜೋಳ ಅಭಿಪ್ರಾಯಪಟ್ಟರು.
ಭುರಣಾಪೂರ ಬಳಿ ಉದ್ದೇಶಿತ ವಿಜಯಪುರ ವಿಮಾನ ನಿಲ್ದಾಣ ನಿರ್ಮಾಣ ಸ್ಥಳ ಪರಿಶೀಲನೆ ಬಳಿಕ ಪತ್ರಕರ್ತರಿಗೆ ಈ ವಿಷಯ ತಿಳಿಸಿದ ಅವರು,ವಿಜಯಪುರ ರೆಡ್ ಝೋನನಲ್ಲಿ ಇಲ್ಲ. ಹೀಗಾಗಿ ಲಾಕ್ ಡೌನ್ ಮಾಡುವುದಿಲ್ಲ ಎಂದರು.
ಕೋವಿಡ್-19 ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡು ಬರುವ ಪ್ರದೇಶ, ವಾರ್ಡ್ ಮಾತ್ರ ಲಾಕ್ ಡೌನ್ ಮಾಡಲಾಗುತ್ತದೆ ಎಂದರು. ಕೋವಿಡ್ ರೋಗದ ಕುರಿತು ಜನರು ಭಯ ಪಡದೇ, ಕೋವಿಡ್ ರೋಗದೊಂದಿಗೆ ಬದುಕುವುದನ್ನು ರೂಢಿಸಿಕೊಳ್ಳಬೇಕಿದೆ ಎಂದರು.
ಈ ಕುರಿತು ಚರ್ಚಿಸಲು ಇಂದು ಸಂಜೆಗೆ ಮುಖ್ಯಮಂತ್ರಿ ಯಡಿಯೂರಪ್ಪ ವಿಡಿಯೋ ಸಂವಾದ ಸಭೆ ಕರೆದಿದ್ದು, ನಾವೆಲ್ಲರೂ ನಾನೂ ಅದರಲ್ಲಿ ಪಾಲ್ಗೊಳ್ಳಲಿದ್ದೇನೆ. ಜಿಲ್ಲಾಧಿಕಾರಿ ವರದಿ ಆಧಾರಿಸಿ ಮುಖ್ಯಮಂತ್ರಿ ಲಾಕ್ ಡೌನ್ ಮಾಡುವ ಕುರಿತು ನಿರ್ಧರಿಸಲಿದ್ದಾರೆ.
ಇದರ ಹೊರತಾಗಿಯೂ ಸರ್ಕಾರ ಲಾಕ್ ಡೌನ್ ಮಾಡುವ ಕುರಿತು ಆಯಾ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳ ವಿವೇಚನೆಗೆ ಬಿಡಲಾಗಿದೆ ಎಂದೂ ಸಮಜಾಯಿಷಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು
Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.