ಕೋವಿಡ್ ನಾಲ್ಕನೇ ಅಲೆ ಬಗ್ಗೆ ಅನಗತ್ಯ ಭಯ ಬೇಡ; ಸಿಎಂ ಬೊಮ್ಮಾಯಿ
Team Udayavani, Apr 26, 2022, 2:21 PM IST
ವಿಜಯಪುರ: ರಾಜ್ಯದಲ್ಲಿ ಕೋವಿಡ್ ನಾಲ್ಕನೇ ಅಲೆಯ ವಿಚಾರದಲ್ಲಿ ಜನತೆ ಅನಗತ್ಯವಾಗಿ ಭಯಪಡುವ ಅಗತ್ಯವಿಲ್ಲ. ಸೋಂಕಿತರು ಆಸ್ಪತ್ರೆಗೆ ಸೇರುವ ಪ್ರಮಾಣ ಜಾಸ್ತಿ ಇಲ್ಲದ ಕಾರಣ ಭಯಪಡುವ ಅಗತ್ಯವಿಲ್ಲ. ಆದರೆ ಜನರು ಸಾಂಕ್ರಾಮಿಕ ಮಾರಕ ರೋಗದ ವಿಷಯದಲ್ಲಿ ಜಾಗೃತಿ ವಹಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಮಂಗಳವಾರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಕೊಡಗಾನೂರ ಗ್ರಾಮದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಮುಖ್ಯಮಂತ್ರಿಗಳ ಸಭೆ ಕರೆದಿದ್ದು, ಸಭೆಯ ಬಳಿಕ ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಹೇಳಿದರು.
ಕೋವಿಡ್ ಸೋಂಕು ರೋಗದ ಬಗ್ಗೆ ಹೊಸದಾಗಿ ನಡಾವಳಿ ರೂಪಿಸಬೇಕಿದೆ. ಜನರು ಸರ್ಕಾರ ರೂಪಿಸುವ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಪಾಲಿಸಬೇಕು ಎಂದು ಮನವಿ ಮಾಡಿದರು.
ಪ್ರಧಾನಿ ಮೋದಿ ಅವರ ಸಭೆಯ ಬಳಿಕ ಪರಿಸ್ಥಿತಿ ಅವಲೋಕಿಸಿ ರಾಜ್ಯದ ವಿಮಾನ ನಿಲ್ದಾಣಗಳು, ಮಹಾರಾಷ್ಟ್ರ, ಕೇರಳ, ತಮಿಳುನಾಡು ಗಡಿ ಭಾಗಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಜಾಗ್ರತೆ ವಹಿಸಲಾಗುತ್ತಿದೆ ಎಂದರು.
ಇದನ್ನೂ ಓದಿ:ಚಿಕ್ಕಮಗಳೂರು: ಆನೆದಂತದಿಂದ ಚೆಸ್ ಆಟದ ಪಾನ್ ತಯಾರಿಸಿ ಮಾರಾಟಕ್ಕೆ ಯತ್ನ: ಆರೋಪಿ ಬಂಧನ
ರಾಜ್ಯದ ಸಚಿವ ಸಂಪುಟ ವಿಸ್ತರಣೆ ವಿಚಾರದ ಬಗ್ಗ ಕೇಳಿದ ಪ್ರಶ್ನೆಗೆ, ಮಾಧ್ಯಮದವರಾದ ನೀವೇ ಡೇಟ್ ಫಿಕ್ಸ್ ಮಾಡಿ ಎಂದು ನಗೆಯಾಡಿದ ಮುಖ್ಯಮಂತ್ರಿ ಬೊಮ್ಮಾಯಿ, ಹೈಕಮಾಂಡ್ ನಿಂದ ಸಚಿವ ಸಂಪುಟ ವಿಸ್ತರಣೆ ವಿಷಯವಾಗಿ ಇನ್ನೂ ನನಗೆ ಕರೆ ನೀಡಿಲ್ಲ. ಹೈಕಮಾಂಡ್ ಕರೆ ಬರುತ್ತಲೇ ದೆಹಲಿಗೆ ತೆರಳಿ, ವರಿಷ್ಠರ ಸೂಚನರ ಮೇರೆಗೆ ಸಂಪುಟ ವಿಸ್ತರಣೆ ನಡೆಯಲಿದೆ. ಈ ಸಂದರ್ಭದಲ್ಲಿ ಎಲ್ಲ ಜಿಲ್ಲೆಗಳಿಗೂ ಸಚಿವ ಸ್ಥಾನ ಕೊಡುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.