ಗ್ರಂಥಾಲಯ ಸ್ಥಳಾಂತರ ಬೇಡ
Team Udayavani, Jul 7, 2022, 3:28 PM IST
ಮುದ್ದೇಬಿಹಾಳ: ಪಟ್ಟಣದ ಆಲಮಟ್ಟಿ ರಸ್ತೆಯ ಸಗರಿಯವರ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಾರ್ವಜನಿಕ ಗ್ರಂಥಾಲಯವನ್ನು ಸ್ಥಳಾಂತರ ಮಾಡಬಾರದು ಎಂದು ಒತ್ತಾಯಿಸಿ ವಿದ್ಯಾರ್ಥಿಗಳು, ಓದುಗರು ಜಿಲ್ಲಾಧಿಕಾರಿಗೆ ಬರೆದ ಮನವಿಯನ್ನು ಗ್ರೇಡ್ -2 ತಹಶೀಲ್ದಾರ್ ಡಿ.ಜಿ.ಕಳ್ಳಿಮನಿ ಅವರಿಗೆ ಸಲ್ಲಿಸಿದರು.
ಈಚೆಗೆ ಕೆಲವರು ಜಿಲ್ಲಾಧಿಕಾರಿಯವರ ಮುದ್ದೇಬಿಹಾಳ ಭೇಟಿ ವೇಳೆ ಮನವಿ ಸಲ್ಲಿಸಿ ಈಗಿನ ಗ್ರಂಥಾಲಯ ಸ್ಥಳಾಂತರಿಸಬೇಕು ಮತ್ತು ಗ್ರಂಥಾಲಯಕ್ಕೆ ಹೊಸ ಕಟ್ಟಡ ಒದಗಿಸಬೇಕು ಎಂದು ಆಗ್ರಹಿಸಿದ್ದ ಹಿನ್ನೆಲೆ ಈ ಮನವಿ ಸಲ್ಲಿಸಿದ ಅವರು, ಈಗ ಇರುವ ಗ್ರಂಥಾಲಯ ಸುಸಜ್ಜಿತವಾಗಿದೆ. ಈಗಿರುವ ಗ್ರಂಥಾಲಯ ಮಾರ್ಗದಿಂದಲೇ ಅಂದಾಜು 3000 ವಿದ್ಯಾರ್ಥಿಗಳು ಕಾಲೇಜುಗಳಿಗೆ ಹೋಗಿ ಬರುವುದರಿಂದ ಇದು ಅವರಿಗೆ ಹೆಚ್ಚು ಅನುಕೂಲ ಮಾಡಿಕೊಟ್ಟಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಪ್ರಸ್ತುತ ಖಾಸಗಿ ಕಟ್ಟಡದಲ್ಲಿ ನಡೆಯುತ್ತಿರುವ ಗ್ರಂಥಾಲಯವು ಸುಸಜ್ಜಿತವಾದ ಕಟ್ಟಡ ಹೊಂದಿದ್ದು ಗಾಳಿ, ಬೆಳಕು, ಕುಡಿಯುವ ನೀರು, ಪಾರ್ಕಿಂಗ್ ವ್ಯವಸ್ಥೆ ಸೌಲಭ್ಯ ಹೊಂದಿ ಪ್ರಶಾಂತ ಪರಿಸರದಲ್ಲಿದೆ. ಇಲ್ಲಿ ಓದಿದವರು ಕೆಎಎಸ್ ಪಾಸ್ ಮಾಡಿದ್ದಾರೆ. ಪಿಎಚ್‌ಡಿ ಪದವಿ ಪಡೆದು ವಿಶ್ವವಿದ್ಯಾಲಯ ಮಟ್ಟದಲ್ಲಿ ಬೋಧಕರಾಗಿ, ಸರ್ಕಾರಿ ನೌಕರರಾಗಿ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಲಾಗಿದೆ.
ಮೊನ್ನೆ ಮುದ್ದೇಬಿಹಾಳಕ್ಕೆ ಬಂದಾಗ ಕೆಲವರು ಈಗಿನ ಗ್ರಂಥಾಲಯ ಸ್ಥಳಾಂತರ ಕೋರಿ ಸಲ್ಲಿಸಿದ ಅರ್ಜಿಗೆ ಜಿಲ್ಲ ಧಿಕಾರಿಗಳು ಮಾನ್ಯತೆ ಕೊಡಬಾರದು. ಹೆಚ್ಚು ಕಾಲೇಜು ವಿದ್ಯಾರ್ಥಿಗಳಿಗೆ ಅನುಕೂಲವಾಗುವ ಇದನ್ನು ಇದ್ದಲ್ಲಿಯೇ ಮುಂದುವರಿಸಿ ಅನುಕೂಲ ಮಾಡಿಕೊಡಬೇಕು. ವಾರ್ಷಿಕ 2 ಲಕ್ಷ ರೂ. ಬಾಡಿಗೆ ಸರ್ಕಾರಕ್ಕೆ ಹೊರೆಯಲ್ಲ ಎನ್ನುವುದನ್ನು ಮನಗಂಡು ಸ್ಥಳಾಂತರ ಬೇಡಿಕೆ ಕೈಬಿಡಬೇಕು. ಈಗಿರುವ ಗ್ರಂಥಾಲಯ ಈಗಿರುವಲ್ಲಿಯೇ ಕಾರ್ಯನಿರ್ವಹಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ಮನವಿಯಲ್ಲಿ ಕೋರಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!
Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.