![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
Team Udayavani, Sep 4, 2023, 4:25 PM IST
ವಿಜಯಪುರ: ಕಳೆದ ನಾಲ್ಕೂವರೆ ದಶಕದಿಂದ ಕಾಂಗ್ರೆಸ್ ವಿರೋಧಿ ರಾಜಕಾರಣ ಮಾಡುತ್ತ ಬಂದಿರುವ ನಾನು, ಈ ಹಂತದಲ್ಲಿ ಕಾಂಗ್ರೆಸ್ ಸೇರುವ ಪ್ರಶ್ನೆಯೇ ಇಲ್ಲ ಎಂದು ವಿಜಯಪುರ ಬಿಜೆಪಿ ಹಿರಿಯ ಸಂಸದ ರಮೇಶ ಜಿಗಜಿಣಗಿ ಸ್ಪಷ್ಟಪಡಿಸಿದರು.
ಸೋಮವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತೇನೆ ಎಂಬುದು ಊಹಾಪೋಹ ಮಾತ್ರ. ಕಾಂಗ್ರೆಸ್ ವಿರೋಧಿಸುತ್ತಲೇ ರಾಜಕೀಯವಾಗಿ ಬೆಳೆದಿರುವ ನಾನು ಈ ಹಂತದಲ್ಲಿ ಕಾಂಗ್ರೆಸ್ ಸೇರುವ ಪ್ರಶ್ನೆಯೇ ಇಲ್ಲ. ಒಂದೊಮ್ಮೆ ಬಿಜೆಪಿ ಟಿಕೆಟ್ ನೀಡದಿದ್ದರೆ ಮನೆಯಲ್ಲಿ ಇರುತ್ತೇನೆಯೇ ಹೊರತು ಕಾಂಗ್ರೆಸ್ ಸೇರುವ ಪ್ರಶ್ನೆಯೇ ಇಲ್ಲ ಎಂದು ಸಮಜಾಯಿಷಿ ನೀಡಿದರು.
ಇದನ್ನೂ ಓದಿ:G20 Summit: ಭಾರತದಲ್ಲಿ ನಡೆಯುವ ಜಿ20ಗೆ ಚೀನಾ ಅಧ್ಯಕ್ಷ ಕ್ಸಿ ಗೈರು, ಪ್ರಧಾನಿ ಭಾಗಿ: ವರದಿ
ನನಗೆ ಟಿಕೆಟ್ ತಪ್ಪಿಸಿ ಹೊಸ, ಯುವ ಮುಖಗಳಿಗೆ ಟಿಕೆಟ್ ನೀಡುವಂತೆ ಬಿಜೆಪಿ ಪಕ್ಷದ ಕೆಲವರು ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಆರಂಭಿಸಿರುವ ವಿಷಯದ ಬಗ್ಗೆ ನನಗೆ ಗೊತ್ತಿಲ್ಲ. ಸಾಮಾಜಿಕ ಜಾಲತಾಣದಲ್ಲಿ ನಕಾರಾತ್ಮಕ ವಿಷಯಗಳ ಕುರಿಯು ಬರುವ ಯಾವುದೇ ವಿಷಯಗಳನ್ನು ನಾನು ನೋಡಲು ಹೋಗುವುದಿಲ್ಲ. ಹೀಗಾಗಿ ಇಂಥ ಸಂಗತಿಗಳ ಬಗ್ಗೆ ನನಗೇನೂ ತಿಳಿಯದು ಎಂದರು.
ಬಿಜೆಪಿ ಲಿಂಗಾಯತ ನಾಯಕರನ್ನು ಕಡೆಗಣಿಸುತ್ತಿದೆ ಎಂದು ಮೇಲ್ಮನೆ ಶಾಸಕ ಪ್ರದೀಪ ಶಟ್ಟರ ಹೇಳಿಕೆ ನೀಡಿರುವ ಕುರಿತು ನನಗೇನೂ ಗೊತ್ತಿಲ್ಲ ಎಂದರು.
ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ
Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ
Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !
Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?
You seem to have an Ad Blocker on.
To continue reading, please turn it off or whitelist Udayavani.