ಇದ್ದೂ ಇಲ್ಲದಂತಾದ ಶೌಚಾಲಯ
Team Udayavani, Dec 17, 2019, 1:01 PM IST
ಆಲಮಟ್ಟಿ: ಪ್ರವಾಸಿ ತಾಣವಾಗಿರುವಆಲಮಟ್ಟಿ ರೈಲ್ವೆ ನಿಲ್ದಾಣದಲ್ಲಿರುವ ಶೌಚಾಲಯಗಳು ಸಮರ್ಪಕ ನಿರ್ವಹಣೆಯಿಲ್ಲದೇ ಯಾವಾಗಲೂ ಬೀಗ ಜಡಿದ ಸ್ಥಿತಿಯಲ್ಲಿರುತ್ತವೆ ಎಂದು ಪ್ರಯಾಣಿಕರು ಆರೋಪಿಸಿದ್ದಾರೆ.
ವಾಣಿಜ್ಯ ಕೇಂದ್ರಗಳಾಗಿರುವ ಮುದ್ದೇಬಿಹಾಳ, ತಾಳಿಕೋಟೆ, ಧಾರ್ಮಿಕ ಕೇಂದ್ರಗಳಾಗಿರುವ ಕೂಡಲಸಂಗಮ, ಯಲಗೂರ, ಯಲ್ಲಮ್ಮನಬೂದಿಹಾಳ ಸೇರಿದಂತೆ ನೂರಾರು ಗ್ರಾಮ ಹಾಗೂ ಕೆಲ ಪಟ್ಟಣದ ನಾಗರಿಕರು ದೂರದ ಪ್ರಯಾಣಕ್ಕಾಗಿ ಆಲಮಟ್ಟಿಯನ್ನೇ ಅವಲಂಬಿಸಿದ್ದಾರೆ. ಪಟ್ಟಣ ಬೃಹತ್ ಲಾಲ್ ಬಹಾದ್ದೂರ್ ಶಾಸ್ತ್ರಿ ಜಲಾಶಯ, ರಾಕ್ ಉದ್ಯಾನ, ಮೊಘಲ್ ಉದ್ಯಾನ, ಇಟಾಲಿಯನ್, ಲವಕುಶ ಉದ್ಯಾನ, ಗೋಪಾಲಕೃಷ್ಣ ಉದ್ಯಾನ, ಸಂಗೀತ ನೃತ್ಯ ಕಾರಂಜಿ, ರಾಷ್ಟ್ರೀಯ ಹೆದ್ದಾರಿ ಹೊಂದಿ ಸುಮಾರು 24 ಸಾವಿರ ಜನಸಂಖ್ಯೆಯನ್ನು ಹೊಂದಿ ನಾಗಾಲೋಟದಲ್ಲಿ ಬೆಳೆಯುತ್ತಿದೆ.
ಇಲ್ಲಿ ಕೃಷ್ಣಾಭಾಗ್ಯ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕರ ಕಚೇರಿ, ಮುಖ್ಯ ಅಭಿಯಂತರರ ಕಚೇರಿ, ಪ್ರಧಾನ ಮುಖ್ಯ ಲೆಕ್ಕಾಧಿಕಾರಿಗಳ ಕಚೇರಿ, ವಿವಿಧ ವಿಭಾಗೀಯ ಕಚೇರಿ, ಉಪ ವಿಭಾಗೀಯ ಕಚೇರಿಗಳು, ಅರಣ್ಯ, ತೋಟಗಾರಿಕೆ ಹೀಗೆ ವಿವಿಧ ಕಚೇರಿಗಳನ್ನು ಹೊಂದಿದ್ದು ನಿತ್ಯ ಸಾವಿರಾರು ಸಂಖ್ಯೆಯಲ್ಲಿ ಜನರು ಆಗಮಿಸುವದರಿಂದ ಪ್ರತಿ ತಿಂಗಳು ಲಕ್ಷಾಂತರ ರೂ. ರೈಲ್ವೆ ಇಲಾಖೆಗೆ ಆದಾಯವಿದೆ.
ನಮ್ಮ ರಾಜ್ಯದವರೇ ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದರೂ ಕೂಡ ನಿಲ್ದಾಣಗಳಲ್ಲಿ ಪ್ರಯಾಣಿಕರು ಪ್ರಯಾಸಪಡುವಂತಾಗಿದೆ. ಸಂಬಂಧಿಸಿದವರು ರೈಲ್ವೆ ನಿಲ್ದಾಣದಲ್ಲಿರುವ ಶೌಚಾಲಯ ಬೀಗ ಮುಕ್ತಗೊಳಿಸಿ ಶುಚಿಯಾಗಿಡಬೇಕು ಎನ್ನುತ್ತಾರೆ ಮುದ್ದೇಬಿಹಾಳದ ಕಾರ್ಗಿಲ್ ಹುತಾತ್ಮ ಯೋಧರ ಸ್ಮಾರಕ ನಿರ್ಮಾಣಸಮಿತಿ ಅಧ್ಯಕ್ಷ ಕಿರಣ ಪಾಟೀಲ.ಈ ಕುರಿತು ಪತ್ರಿಕೆ ರೈಲ್ವೆ ನಿಲ್ದಾಣದ ಸಿಬ್ಬಂದಿಯನ್ನು ಸಂಪರ್ಕಿಸಿದಾಗ, ರೈಲು ಬರುವದಕ್ಕಿಂತ ಮುಂಚಿತವಾಗಿ ಬೀಗ ತೆಗೆಯಲಾಗುವದು, ರೈಲು ತೆರಳಿದ ನಂತರ ಮತ್ತೆ ಬೀಗ ಹಾಕಲಾಗುವದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು
Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು
Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು
Muddebihal: ಟ್ರ್ಯಾಕ್ಟರ್-ಟ್ರೇಲರ್ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು
MUST WATCH
ಹೊಸ ಸೇರ್ಪಡೆ
Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ ಜನರ ಭೇಟಿ
Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ
Kyiv: ಉಕ್ರೇನ್ ವಿದ್ಯುತ್ ಸ್ಥಾವರ ಮೇಲೆ ರಷ್ಯಾ 120 ಕ್ಷಿಪಣಿ ದಾಳಿ
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.