ಅನರ್ಹ ಪಡಿತರ ಚೀಟಿ ರದ್ದತಿಗೆ ಸೂಚನೆ

Team Udayavani, Jun 10, 2020, 7:47 AM IST

ಅನರ್ಹ ಪಡಿತರ ಚೀಟಿ ರದ್ದತಿಗೆ ಸೂಚನೆ

ವಿಜಯಪುರ: ಜಿಲ್ಲೆಯಲ್ಲಿ ಅನರ್ಹ ಕುಟುಂಬಗಳಿಗೆ ನೀಡಿರುವ ಬಿಪಿಎಲ್‌ ಕಾರ್ಡ್‌ಗಳನ್ನು ಪತ್ತೆ ಮಾಡಿ, ನಿಯಮಾನುಸಾರ ರದ್ದುಪಡಿಸುವಂತೆ ಜಿಲ್ಲಾಧಿಕಾರಿ ವೈ.ಎಸ್‌. ಪಾಟೀಲ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಸರ್ಕಾರ ಕೋವಿಡ್‌-19 ವೈರಾಣು ಹರಡುವಿಕೆಯಿಂದ ರಾಜ್ಯದ ಆರ್ಥಿಕ ಪರಿಸ್ಥಿತಿಯ ಮೇಲೆ ದುಷ್ಪರಿಣಾಮ ಆಗಿದ್ದರ ಹಿನ್ನೆಲೆಯಲ್ಲಿ ಆದೇಶ ಹೊರಡಿಸಿ, ಪ್ರಾದೇಶಿಕ ಸಾರಿಗೆ ಇಲಾಖೆ ಆಯುಕ್ತರಿಂದ ಕಾರು, ಜೀಪ್‌, ಟ್ರ್ಯಾಕ್ಟರ್‌ ಇತ್ಯಾದಿ 4 ಚಕ್ರದ ವಾಹನ ಹೊಂದಿರುವ ಪಡಿತರ ಚೀಟಿದಾರರ ಮಾಹಿತಿ ಸಂಗ್ರಹಿಸಿ ಅನರ್ಹರ ಪಡಿತರ ಚೀಟಿ ರದ್ದುಪಡಿಸುವಂತೆ ಸೂಚಿಸಿದ್ದಾರೆ.

ವಾಹನ ನೋಂದಣಿ (ಆರ್‌.ಸಿ.) ಪುಸ್ತಕದಲ್ಲಿರುವ ವಿಳಾಸ ಮತ್ತು ಪಡಿತರ ಚೀಟಿಯ ವಿಳಾಸ ತಾಳೆ ಮಾಡುವುದು, ವಾಹನ ಮಾಲೀಕರ ಆಧಾರ್‌ ಸಂಖ್ಯೆ ಪಡಿತರ ಚೀಟಿಗೆ ಜೋಡಣೆಯಾಗಿರುವ ಆಧಾರ್‌ ಸಂಖ್ಯೆಗೆ ತಾಳೆ ಮಾಡುವುದು, ವಾಹನ ಮಾಲೀಕರ ಮೊಬೈಲ್‌ ಸಂಖ್ಯೆಯನ್ನು ಪಡಿತರ ಚೀಟಿಗೆ ಜೋಡಣೆಯಾಗಿರುವ ಆಧಾರ್‌ ಸಂಖ್ಯೆಯೊಂದಿಗೆ ತಾಳೆ ಮಾಡಿ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದ್ದಾರೆ. ಆಯಾ ಇಲಾಖೆಯ ಮುಖ್ಯಸ್ಥರಿಂದ ಸರ್ಕಾರಿ ನೌಕರರ ಎಚ್‌ಆರ್‌ಎಂಎಸ್‌ ಮಾಹಿತಿ ಪಡೆದು ನೌಕರರ ಆಧಾರ್‌ ಸಂಖ್ಯೆಯನ್ನು ಪಡಿತರ ಚೀಟಿಗೆ ಜೋಡಣೆಯಾಗಿರುವ ಆಧಾರ್‌ ಸಂಖ್ಯೆಗೆ ತಾಳೆ ಮಾಡಬೇಕು. ವಿವಿಧ ನಿಗಮ, ಮಂಡಳಿ, ಖಾಸಗಿ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳ ಮಾಹಿತಿಯನ್ನು ಅವರ ಆಧಾರ್‌ ಸಂಖ್ಯೆಯೊಂದಿಗೆ ಪಡೆದು, ಪಡಿತರ ಚೀಟಿಗೆ ಜೋಡಣೆಯಾಗಿರುವ ಆಧಾರ್‌ ಸಂಖ್ಯೆಯೊಂದಿಗೆ ತಾಳೆ ಮಾಡಿ ಕ್ರಮ ಜರುಗಿಸಬೇಕು. ನಗರಾಭಿವೃದ್ಧಿ ಇಲಾಖೆಯಲ್ಲಿ ಲಭ್ಯವಿರುವ 1000 ಚದರ ಅಡಿಗಿಂತ ಕಡಿಮೆ ವಿಸ್ತೀರ್ಣವಿರುವ ವಾಸದ ಮನೆಗಳ ಮಾಹಿತಿಯನ್ನು ಪಡೆದು ಪಡಿತರ ಚೀಟಿಯಲ್ಲಿರುವ ವಿಳಾಸದೊಂದಿಗೆ ತಾಳೆ ಮಾಡುವುದು, ಪ್ರತಿ ನ್ಯಾಯಬೆಲೆ ಅಂಗಡಿ ವ್ಯಾಪ್ತಿಯಲ್ಲಿ ಪಡಿತರ ಪಡೆಯುತ್ತಿರುವ ಹಾಗೂ ಒಟಿಪಿ ಮೂಲಕ ಪಡಿತರ ಪಡೆಯುತ್ತಿರುವ ಫಲಾನುಭವಿಗಳ ಮಾಹಿತಿಯನ್ನು ಮರು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವುದು.

ಹಲವಾರು ಪಡಿತರ ಚೀಟಿಗಳ ಫಲಾನುಭವಿಗಳ ಸ್ಥಳದಲ್ಲಿ ವಾಸವಿಲ್ಲದಿರುವುದು, ಮರಣ ಹೊಂದಿರುವುದು ಇತ್ಯಾದಿ ಕಾರಣಗಳಿಂದಾಗಿ ಪಡಿತರ ಎತ್ತುವಳಿ ಮಾಡದೇ ಇರುವ ದಾಖಲೆಯನ್ನು ಪರಿಶೀಲಿಸಿ, ಅಂಥ ಪಡಿತರ ಚೀಟಿಯಲ್ಲಿದ್ದ ಸದಸ್ಯರ ಹೆಸರನ್ನು ರದ್ದು ಪಡಿಸುವದು. ಅನರ್ಹ ಪಡಿತರ ಚೀಟಿ ರದ್ದುಪಡಿಸುವ ಕಾರ್ಯಕ್ರಮದ ಬಗ್ಗೆ ನಿಗದಿತ ವೇಳಾಪಟ್ಟಿಯನ್ನು ಸಿದ್ಧಪಡಿಸಿಕೊಳ್ಳಲು ತಾಲೂಕು ಆಹಾರ ಸಿಬ್ಬಂದಿಗಳಿಗೆ ಸೂಚಿಸಬೇಕು. ಪ್ರತಿವಾರ ರದ್ದು ಪಡಿಸುವ ಗುರಿ ಹಾಕಿಕೊಂಡು ಉಪವಿಭಾಗಾಧಿಕಾರಿ, ತಹಶೀಲ್ದಾರ್‌ ಅವರು ಈ ಬಗ್ಗೆ ಖುದ್ದು ಮೇಲ್ವಿಚಾರಣೆ ಮಾಡಿ ಈ ತಿಂಗಳ ಅಂತ್ಯದೊಳಗಾಗಿ ಕನಿಷ್ಠ ಪಕ್ಷ ಪ್ರತಿ ತಾಲೂಕಿನಿಂದ 1 ಸಾವಿರ ಅಂತ್ಯೋದಯ ಹಾಗೂ ಬಿಪಿಎಲ್‌ ಪಡಿತರ ಕಾರ್ಡ್‌ ರದ್ದು ಮಾಡುವಂತೆ ಸೂಚಿಸಿದ್ದಾರೆ.

ಟಾಪ್ ನ್ಯೂಸ್

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

tirupati

Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್‌!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

1-vijay

Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

23-

Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್

22-

ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.