ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿ ಸಂಗ್ರಹಕ್ಕೆ ಸೂಚನೆ
Team Udayavani, May 28, 2022, 4:54 PM IST
ವಿಜಯಪುರ: ಸರ್ಕಾರಿ ಆಸ್ಪತ್ರೆಗಳಲ್ಲಿ ಯಾವುದೇ ತರಹದ ಔಷಧಿ ಕೊರತೆ ಆಗದಂತೆ ಅಗತ್ಯಕ್ಕೆ ತಕ್ಕಂತೆ ಸಮರ್ಪಕವಾಗಿ ಔಷಧಿ ಸಂಗ್ರಹ ಮಾಡಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳೂ ಆಗಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತ ಡಿ.ರಂದೀಪ ತಮ್ಮ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಈ ಸೂಚನೆ ನೀಡಿದ ಅವರು, ಮಳೆಗಾಲದ ಈ ಸಂದರ್ಭದಲ್ಲಿ ತಲೆ ದೋರುವ ರೋಗಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು. ಸಾಂಕ್ರಾಮಿಕ ರೋಗಗಳು ಹರಡದಂತೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಸಿಗುತ್ತಿಲ್ಲ ಎಂದು ಸಾರ್ವಜನಿಕರಿಂದ ದೂರುಗಳು ಬರದಂತೆ ನೋಡಿಕೊಳ್ಳಬೇಕು. ಪ್ರತಿ ಆಸ್ಪತ್ರೆಯಲ್ಲಿ ಅಗತ್ಯಕ್ಕೆ ತಕ್ಕಂತೆ ಔಷಧಿಯನ್ನು ಸಂಗ್ರಹ ಮಾಡಿಕೊಳ್ಳಬೇಕು. ಇದಕ್ಕಾಗಿ ಬಿಡುಗಡೆ ಆಗಿರುವ ಅನುದಾನವನ್ನು ಸಮರ್ಪಕ ಬಳಕೆಯಾಗಬೇಕು. ಔಷಧ ಲಭ್ಯತೆ ಕುರಿತು ಜಿಲ್ಲಾ-ತಾಲೂಕು ಹಂತಗಳಲ್ಲಿ ವಿಡಿಯೋ ಸಂವಾದ ನಡೆಸಿ ಚರ್ಚಿಸಬೇಕು. ಜಿಲ್ಲೆಯಲ್ಲಿ ಜನೌಷಧಿ ಕೇಂದ್ರಗಳು ಸಹ ಸರಿಯಾಗಿ ನಿರ್ವಹಿಸುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.
ಕೋವಿಡ್ ಸಾಂಕ್ರಾಮಿಕ ರೋಗ ಹರಡದಂತೆ ಹೆಚ್ಚಿನ ನಿಗಾ ವಹಿಸಬೇಕು. ಕೋವಿಡ್ ಸೋಂಕಿತ ತೀವ್ರ ಲಕ್ಷಣಗಳು ಕಂಡುಬಂದವರಿಗೆ ತ್ವರಿತವಾಗಿ ಆರೋಗ್ಯ ಪರೀಕ್ಷೆ ನಡೆಸಿ ಚಿಕಿತ್ಸೆ ಕೊಡಿಸಬೇಕು. ಅಲ್ಲದೇ ಕೋವಿಡ್ ನಿಗ್ರಹಕ್ಕಾಗಿ ಕೋವಿಡ್ ಲಸೀಕಾಕರಣ ನಡೆಸಬೇಕು ಎಂದು ಸೂಚಿಸಿದರು.
ಆರೋಗ್ಯ ಇಲಾಖೆಯ ಕುಂದುಕೊರತೆ, ಬೇಕು-ಬೇಡಿಕೆಗಳಿಗೆ ಸಂಬಂಧಿಸಿದಂತೆ ಸಮಗ್ರ ವಿವರವನ್ನು ಪ್ರಾತ್ಯಕ್ಷಿಕೆಯ ಮೂಲಕ ತಮಗೆ ತಿಳಿಸಲು ಸಲಹೆ ಮಾಡಿದರು. ಸಭೆಯಲ್ಲಿ ಜಿಲ್ಲಾಧಿಕಾರಿಗಳು, ಅಪರ ಜಿಲ್ಲಾಧಿಕಾರಿಗಳು, ಡಿಎಚ್‌ಒ ಡಾ| ರಾಜಕುಮಾರ ಯರಗಲ್, ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಶಸ್ತ್ರ ಚಿಕಿತ್ಸಕ ಡಾ| ಎಸ್.ಎಲ್. ಲಕ್ಕಣ್ಣವರ, ಜಿಲ್ಲಾ ಸರ್ವೇಕ್ಷಣಾ ಘಟಕದ ಅಧಿಕಾರಿ ಡಾ| ಕವಿತಾ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!
Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Siddakatte Kodange Kambala: ಈ ಸೀಸನ್ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.