ಮತದಾನ ಜಾಗೃತಿ ಮೂಡಿಸಲು ಅಧಿಕಾರಿಗಳಿಗೆ ಸೂಚನೆ

Team Udayavani, Mar 11, 2019, 7:17 AM IST

vij-1.jpg

ವಿಜಯಪುರ: ಲೋಕಸಭಾ ಚುನಾವಣೆಯಲ್ಲಿ ಮತದಾನ ಚಲಾಯಿಸುವ ಹಕ್ಕು ನೀಡಲು 18 ವರ್ಷ ಪೂರೈಸಿರುವ ನೂತನ ಯುವ ಮತದಾರರನ್ನು ಗುರುತಿಸುವ ಕೆಲಸವಾಗಬೇಕಿದೆ. ಇದಲ್ಲದೇ ಮತದಾರರ ಚೀಟಿ ಹೊಂದಿರುವ ಪ್ರತಿಯೊಬ್ಬ ಮತದಾರ ಮುಂದಿನ ಚುನಾವಣೆಯಲ್ಲಿ ತಪ್ಪದೇ ಮತದಾನ ಮಾಡಲು ಪ್ರೇರೇಪಿಸಬೇಕಿದೆ ಎಂದು ಸ್ವೀಪ್‌ ಸಮಿತಿ ಅಧ್ಯಕ್ಷ ವಿಕಾಸ ಸುರಳಕರ ಸೂಚಿಸಿದರು.

ನಗರದ ಜಿಪಂ ಸಿಇಒ ಕಚೇರಿಯಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ಜರುಗಿದ ಜಿಲ್ಲಾ ಸ್ವೀಪ್‌ ಸಮಿತಿ ಸಭೆಯಲ್ಲಿ ಈ ಸೂಚನೆ ನೀಡಿದ ಅವರು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತಪ್ಪದೇ ಮತದಾನ ಮಾಡುವ ಕುರಿತಂತೆ ಜಿಲ್ಲೆಯ ಶಾಲಾ-ಕಾಲೇಜ್‌ ವಿದ್ಯಾರ್ಥಿಗಳ ಜಾಗೃತಿ ಜಾಥಾ ಹಮ್ಮಿಕೊಳ್ಳಬೇಕು. ಮಾನವ ಸರಪಳಿ ನಿರ್ಮಾಣ, ಸೈಕಲ್‌ ರ್ಯಾಲಿ, ದ್ವಿಚಕ್ರ ವಾಹನಗಳ ಜಾಥಾ, ಸಂಚಾರಿ ವಾಹನಗಳ ಮೂಲಕ ಪ್ರಚಾರ ಕಾರ್ಯಕ್ರಮ ವಿವಿಧ ವಾಹನಗಳ ಮೇಲೆ ಮತದಾನ ನೋಂದಣಿ ಮತ್ತು ಮತದಾನ ಮಾಡುವ ಕುರಿತ ಪೋಸ್ಟರ್‌ ಹಾಗೂ ಸ್ಟೀಕರ್‌ ಅಳವಡಿಕೆ, ಜನನಿಬಿಡ ಪ್ರದೇಶಗಳಲ್ಲಿ ಜಿಂಗಲ್ಸ್‌ಗಳ ಮೂಲಕ ಜಾಗೃತಿ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಹಮ್ಮಿಕೊಳ್ಳಬೇಕು ಎಂದು ಸೂಚಿಸಿದರು.

ಈವರೆಗೆ ಮತದಾರ ಪಟ್ಟಿಯಲ್ಲಿ ನೋಂದಣಿಯಾಗದೇ ಇರುವ ಮತದಾರರನ್ನು ಗುರುತಿಸಬೇಕು. ಅದರಂತೆ 18 ವರ್ಷ ಪೂರೈಸಿದ ಯುವ ಮತದಾರರ ನೋಂದಣಿಗೆ ಅವಕಾಶ ಕಲ್ಪಿಸಬೇಕು. ಪಪೂ, ಪದವಿ ಕಾಲೇಜುಗಳಲ್ಲಿ ಯುವ ಮತದಾರರ ನೋಂದಣಿಗೆ ಪ್ರೋತ್ಸಾಹಿಸಿ, ಚುನಾವಣೇ ಸಂದರ್ಭದಲ್ಲಿ ಕಡ್ಡಾಯ ಮತದಾನ ಮಾಡುವ ಕುರಿತು ಮನವರಿಕೆ ಮಾಡಿಕೊಡಬೇಕು. ಮತ ಚಲಾಯಿಸುವ ಕುರಿತು ಸ್ಥಳೀಯ ಸಂಸ್ಥೆಗಳ ಕಸ ಸಂಗ್ರಹಣಾ ವಾಹನ ಸೇರಿದಂತೆ ಇತರೆ ವಾಹನದ ಮೂಲಕ ಆಡಿಯೋ ಮೂಲಕ ಅರಿವು ಮೂಡಿಸಬೇಕು ಎಂದು ಸಲಹೆ ನೀಡಿದರು.

ಇದಲ್ಲದೇ ಸಾರ್ವಜನಿಕ ಸ್ಥಳಗಳಾದ ಬಸ್‌ ನಿಲ್ದಾಣ, ಜಾತ್ರೆಗಳು, ಸಂತೆಗಳು ವಿವಿಧ ವೃತ್ತಗಳ ಪಟ್ಟಿ ಮಾಡಿಕೊಂಡು ಆ ಪ್ರದೇಶದಲ್ಲಿ ಜಾಗೃತಿ ಕಾರ್ಯಕ್ರಮ ರೂಪಿಸಬೇಕು. ಸಾಕ್ಷé ಚಿತ್ರ ಸಿದ್ಧಪಡಿಸಿ ಜನರಿಗೆ ಪ್ರದರ್ಶಿಸಬೇಕು. ವಿವಿಧ ಸಮೂಹ ಮಾಧ್ಯಮಗಳ ಮೂಲಕ ಜಾಗೃತಿ ಮೂಡಿಸುವುದು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳಿಗೆ ನೀಡಲಾಗಿರುವ  ಜವಾಬ್ದಾರಿಗಳನ್ವಯ ಕ್ರಿಯಾಯೋಜನೆ ಸಿದ್ಧಪಡಿಸುವ ಜೊತೆಗೆ ಖರ್ಚು ವೆಚ್ಚಗಳ ಮಾಹಿತಿ ಒದಗಿಸುವಂತೆ ಸೂಚಿಸಿದರು.

ಅದರಂತೆ ಜಿಲ್ಲೆಯಲ್ಲಿರುವ ದಿವ್ಯಾಂಗ ಮತದಾರರನ್ನು ಗುರುತಿಸಲು ಸಮೀಕ್ಷೆ ನಡೆಸಬೇಕು. ಕಳೆದ ಚುನಾವಣೆಗಳಲ್ಲಿ ಅತಿ ಕಡಿಮೆ ಮತದಾನವಾಗಿರುವ ಮತಗಟ್ಟೆವಾರು ಜಾಗೃತಿಗೆ ಕ್ರಮ ಕೈಗೊಳ್ಳಬೇಕು. ಜಿಲ್ಲೆಯ ಗ್ರಾಮಾಂತರ ಪ್ರದೇಶಗಳಲ್ಲಿನ ದಿವ್ಯಾಂಗ ಮತದಾರರು, ಮತದಾರರ ಪಟ್ಟಿಯಿಂದ ಹೊರಗೆ ಉಳಿದ ಮತದಾರ ಪಟ್ಟಿಗೆ ಸೇರಿಸಲು ಅಂಗನವಾಡಿ ಕಾರ್ಯಕರ್ತೆಯರು-ಸಹಾಯಕಿಯರು, ಸರ್ಕಾರೇತರ ಸಂಘ-ಸಂಸ್ಥೆಗಳ ಸಹಕಾರ ಪಡೆಯಬೇಕು. ಅಲ್ಲದೇ ಅವರ ದೂರವಾಣಿ ಸಂಖ್ಯೆ ಸಹಿತ ಮಾಹಿತಿ ಸಿದ್ಧಪಡಿಸಿ ಇರಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
 
ಜಿಲ್ಲೆಯ ವಿವಿಧ ಹಾಸ್ಟೆಲ್‌ಗ‌ಳ ವ್ಯಾಪ್ತಿಯಲ್ಲಿ, ವಿವಿಧ ಕಾರ್ಯಕ್ರಮಗಳ ಸಂದರ್ಭಗಳಲ್ಲಿ ಮತಯಂತ್ರ ಮತ್ತು ವಿವಿ ಪ್ಯಾಟ್‌ ಕುರಿತಂತೆ ಪ್ರಾತ್ಯಕ್ಷಿಕೆಗಳನ್ನು ಹಮ್ಮಿಕೊಂಡು ಸೂಕ್ತ ಜಾಗೃತಿ ಮೂಡಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿ ಕೈಗೊಳ್ಳಲಾಗುವ ಕಾರ್ಯಕ್ರಮಗಳ ಮಾಹಿತಿ ಸಲ್ಲಿಸುವಂತೆ ಸೂಚನೆ ನೀಡಿದರು. ಜಿಪಂ ಉಪ ಕಾರ್ಯದರ್ಶಿ ಅಮರೇಶ ನಾಯಕ, ಯೋಜನಾಧಿಕಾರಿ ಕುಂಬಾರ ಸೇರಿದಂತೆ ಜಿಲ್ಲಾ ಸ್ವೀಪ್‌ ಸಮಿತಿ ಸದಸ್ಯರುಗಳಾದ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: One-year-old child kidnapped from district hospital: Crime detected on CCTV

Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ

kolahara-TV

By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ

Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.