ಅನುದಾನ ಬಳಕೆ ವರದಿ ನೀಡಲು ಸೂಚನೆ
184 ಕಾಮಗಾರಿ ಕೈಗೊಂಡಿದ್ದು 9 ಕೋಟಿ ರೂ. ಕಾಮಗಾರಿಗೆ ಸಂಬಂಧಪಟ್ಟಂತೆ ಈವರೆಗೆ ಅನುದಾನ ಬಳಕೆ
Team Udayavani, Jan 28, 2021, 4:00 PM IST
ವಿಜಯಪುರ: ಜಿಲ್ಲೆಯ ಗಡಿ ಪ್ರದೇಶ, ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳಿಗೆ ಹೊಂದಿಕೊಂಡಿರುವ ತಾಲೂಕುಗಳಲ್ಲಿ ಕೈಗೊಂಡ ಕಾಮಗಾರಿಗಳ ಬಗ್ಗೆ
ಸೂಕ್ತ ತಪಾಸಣೆ ನಡೆಸುವಂತೆ ಕರ್ನಾಟಕ ರಾಜ್ಯ ಗಡಿ ಪ್ರದೇಶ ಅಭಿವೃದ್ಧಿ ಪ್ರಾ ಧಿಕಾರದ ಅಧ್ಯಕ್ಷ ಡಾ| ಸಿ.ಸೋಮಶೇಖರ ಸಂಬಂಧಪಟ್ಟ ಅ ಧಿಕಾರಿಗಳಿಗೆ
ಸೂಚನೆ ನೀಡಿದರು.
ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದಿಂದ ಮಂಜೂರಾದ ಅನುದಾನದ ಅಡಿ ಕೈಗೊಂಡ ಕಾಮಗಾರಿಗಳ ಬಗ್ಗೆ ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ರಾಜ್ಯ ಗಡಿ ಪ್ರದೇಶಾಭಿವೃದ್ಧಿ ಸ್ಥಾಪನೆಯಾದ ವರ್ಷ 2010ರಿಂದ ಈವರೆಗೆ ಕೈಗೊಂಡ ಕಾಮಗಾರಿ ಕುರಿತು ಸೂಕ್ತ ಪರಿಶೀಲನೆ ನಡೆಸುವಂತೆ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದ ಅವರು, ಲೋಕೋಪಯೋಗಿ, ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗ, ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮ ಸೇರಿದಂತೆ ವಿವಿಧ ಸಂಸ್ಥೆಗಳ ಮೂಲಕ ಗಡಿ ಪ್ರದೇಶದಲ್ಲಿ ಕೈಗೊಂಡ ಕಾಮಗಾರಿಗಳ ಛಾಯಾಚಿತ್ರ ಸಹಿತ ವರದಿ ಮತ್ತು ಅನುದಾನ ಬಳಕೆ ಪ್ರಮಾಣ ಪತ್ರ ಕಡ್ಡಾಯವಾಗಿ ಸಲ್ಲಿಸುವಂತೆ ಸಂಬಂಧಪಟ್ಟ ಅ ಧಿಕಾರಿಗಳಿಗೆ ಅವರು ಸೂಚನೆ ನೀಡಿದರು.
ಗಡಿ ಭಾಗದಲ್ಲಿ ಸಾಂಸ್ಕೃತಿಕ, ಶೈಕ್ಷಣಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಹಾಗೂ ಕನ್ನಡ ಮತ್ತು ಕನ್ನಡಿಗರ ಭದ್ರತೆಗೆ ವಿಶೇಷ ಗಮನ ನೀಡಬೇಕು. ಗಡಿ ಭಾಗ ಸೇರಿದಂತೆ ಮಹಾರಾಷ್ಟ್ರದ ಭಾಗದಲ್ಲಿರುವ ಕನ್ನಡಿಗರ ತಾಲೂಕುಗಳಲ್ಲಿ ಕೈಗೊಂಡ ಕಾಮಗಾರಿಗಳ ಬಗ್ಗೆ ಸೂಕ್ತ ತಪಾಸಣೆ ನಡೆಸಬೇಕು.
ಗುಣಮಟ್ಟದ ಕಾಮಗಾರಿ ಮತ್ತು ಅನುದಾನದ ಸಮರ್ಪಕ ಬಳಕೆ ಕುರಿತು ಬಳಕೆ ಪ್ರಮಾಣ ಪತ್ರ ಕಡ್ಡಾಯವಾಗಿ ಸಲ್ಲಿಸಬೇಕು. ಬರುವ ದಿನಗಳಲ್ಲಿ ರಸ್ತೆಗಳಿಗೆ ವಿವಿಧ ಮೂಲಗಳಿಂದ ಹೆಚ್ಚು ಅನುದಾನ ಲಭ್ಯವಿರುವುದರಿಂದ ಇದನ್ನು ಹೊರತುಪಡಿಸಿ ಸಾಂಸ್ಕೃತಿಕ ಭವನ, ಸಮುದಾಯ ಭವನ, ಕ್ರೀಡಾ ಮೈದಾನ, ಗ್ರಂಥಾಲಯ, ಶೌಚಾಲಯಗಳ ನಿರ್ಮಾಣ ಇಂತಹ ಅವಶ್ಯಕ ಮೂಲಸೌಕರ್ಯಗಳ ಅಭಿವೃದ್ಧಿಗೆ ವಿಶೇಷ ಗಮನ ನೀಡುವಂತೆ ಅವರು
ಸೂಚನೆ ನೀಡಿದರು.
2010ರಿಂದ ಈವರೆಗೆ ಗಡಿ ಪ್ರದೇಶಾಭಿವೃದ್ಧಿ ನಿಧಿ ಯಡಿ ಕೈಗೊಂಡ ಕಾಮಗಾರಿಗಳು ಮತ್ತು ಇದಕ್ಕೂ ಮುನ್ನ ಡಾ| ಡಿ.ಎಂ. ನಂಜುಂಡಪ್ಪ ವರದಿ ಆಧಾರಿತ ಕಾಮಗಾರಿಗಳ ಮತ್ತು ಅನುದಾನ ಬಳಕೆ ಬಗ್ಗೆಯೂ ಪರಿಶೀಲನೆ ನಡೆಸಬೇಕು. ಕರ್ನಾಟಕ ಹಾಗೂ ಮಹಾರಾಷ್ಟ್ರ ರಾಜ್ಯಕ್ಕೆ ಹೊಂದಿಕೊಂಡಿರುವ ಅಕ್ಕಲಕೋಟ, ಜತ್ತ, ಉಮದಿ ಸೇರಿದಂತೆ ವಿವಿಧ ತಾಲೂಕುಗಳಲ್ಲಿ ಕೈಗೊಂಡ ಕಾಮಗಾರಿಗಳ ಬಗ್ಗೆಯೂ ಅಲ್ಲಿನ ಸಂಬಂಧಪಟ್ಟ ಜಿಲ್ಲಾಧಿಕಾರಿಗಳಿಗೆ ಪತ್ರ ಮೂಲಕ ಪರಿಶೀಲನೆಗೆ ಮನವಿ ಮಾಡಬೇಕು. ಇಲ್ಲಿಯ ಅ ಧಿಕಾರಿಗಳಿಂದ ಕಾಮಗಾರಿ ಪರಿಶೀಲನೆಗೆ ಅವಕಾಶ ನೀಡಲು ಸಹ ಕೋರುವಂತೆ
ಸೂಚಿಸಿದರು.
ಗಡಿ ಪ್ರದೇಶಾಭಿವೃದ್ಧಿ ಅನುದಾನದ ಅಡಿಯಲ್ಲಿ 184 ಕಾಮಗಾರಿ ಕೈಗೊಂಡಿದ್ದು 9 ಕೋಟಿ ರೂ. ಕಾಮಗಾರಿಗೆ ಸಂಬಂಧಪಟ್ಟಂತೆ ಈವರೆಗೆ ಅನುದಾನ
ಬಳಕೆ ಪ್ರಮಾಣ ಪತ್ರ ಕಳುಹಿಸಲಾಗಿಲ್ಲ. ಕಾರಣ ಈ ತಿಂಗಳಾತ್ಯಂಕ್ಕೆ ಅಥವಾ ಫೆಬ್ರುವರಿ ಮೊದಲ ವಾರದಲ್ಲಿ ಸಂಬಂಧಪಟ್ಟ ಇಲಾಖೆಗಳ ವ್ಯಾಪ್ತಿಯಲ್ಲಿ
ಕೈಗೊಂಡ ಕಾಮಗಾರಿ ಹಾಗೂ ಬಳಸಿದ ಅನುದಾನದ ಕುರಿತು ಕಡ್ಡಾಯವಾಗಿ ಪ್ರಮಾಣ ಪತ್ರ ಸಲ್ಲಿಸುವಂತೆ ತಾಕೀತು ಮಾಡಿದರು.
ಗಡಿ ಅಭಿವೃದ್ಧಿ ಪ್ರಾ ಧಿಕಾರದಿಂದ ಬಿಡುಗಡೆಯಾದ ಅನುದಾನ, ಕಾಮಗಾರಿಗೆ ಬಳಸಲಾದ ಅನುದಾನದ ವಿವರ ಸಲ್ಲಿಸಬೇಕು. ಕೈಗೊಂಡ ಕಾಮಗಾರಿಗಳ ಬಗ್ಗೆ
ನೈಜ ಪರಿಶೀಲನಾ ವರದಿ ಸಲ್ಲಿಸುವಂತೆ ತಿಳಿಸಿದ ಅವರು, ಪ್ರಾಧಿಕಾರದಿಂದ ಕಡಿಮೆ ಪ್ರಮಾಣದ ಅನುದಾನ ಇರುವುದರಿಂದ ಇತರೆ ಇಲಾಖೆಗಳ
ಅನುದಾನದ ಅಡಿಯಲ್ಲಿಯೂ ಕಾಮಗಾರಿ ಕೈಗೆತ್ತಿಕೊಳ್ಳುವ ಬಗ್ಗೆ ವಿಶೇಷ ಗಮನ ನೀಡುವಂತೆ, ಜಿಲ್ಲಾ ನ್ಯಾಯಾಲಯದಲ್ಲಿ ಕುಡಿಯುವ ನೀರಿನ
ಸೌಲಭ್ಯ ಕಾಮಗಾರಿ ಕುರಿತು ಪರಿಶೀಲಿಸುವಂತೆಯೂ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಅಧ್ಯಕ್ಷ ನಂತರ ನಗರದ ಕಂದಗಲ್ ಹನುಮಂತರಾಯ ಜಿಲ್ಲಾ ರಂಗಮಂದಿರ ನವೀಕರಣ ಕಾಮಗಾರಿ ಪರಿಶೀಲನೆ ನಡೆಸಿ, ಗುಣಮಟ್ಟದ ಕಾಮಗಾರಿ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಅಪರ ಜಿಲ್ಲಾ ಧಿಕಾರಿ ಡಾ| ಔದ್ರಾಮ್, ಉಪ ವಿಭಾಗಾ ಧಿಕಾರಿ ರಾಹುಲ್ ಸಿಂಧೆ ಸೇರಿದಂತೆ ಇತರೆ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
National Badminton: ರೋಣಕ್ ಚೌಹಾಣ್ ಸೆಮಿಗೆ
Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್ ಹಂತಕ್ಕೇರಿದರೆ?
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.