ಕೃಷ್ಣಾ ಯೋಜನೆಗೆ 2 ತಿಂಗಳಲ್ಲಿ ಅಧಿಸೂಚನೆ

ಶೀಘ್ರವೇ ತಾಂತ್ರಿಕ ಸಮಸ್ಯೆ ನಿವಾರಣೆ

Team Udayavani, Apr 27, 2022, 4:48 PM IST

25

ವಿಜಯಪುರ: ಕೃಷ್ಣಾ ನ್ಯಾಯಾಧಿಕರಣದ ತೀರ್ಪು ಹೊರಬಿದ್ದು ದಶಕವೇ ಕಳೆದಿದೆ. ಬರುವ 2-3 ತಿಂಗಳಲ್ಲಿ ಕಾನೂನು, ತಾಂತ್ರಿಕ ಸಮಸ್ಯೆ ಬಗೆಹರಿಯುವ ಸಾಧ್ಯತೆ ಇದೆ. ಕೇಂದ್ರ ಸರ್ಕಾರ ಅಧಿ ಸೂಚನೆ ಹೊರಡಿಸುವ ನಿರೀಕ್ಷೆ ಇದೆ. ಅಧಿಸೂಚನೆ ಹೊರಬೀಳುತ್ತಲೇ ಬಜೆಟ್‌ನಲ್ಲಿ ಘೋಷಿತ ಅನುದಾನದ ಹೊರತಾಗಿ ಕೃಷ್ಣಾ ಯೋಜನೆಗೆ ಅಗತ್ಯದ ಅನುದಾನ ಬಿಡುಗಡೆಗೆ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.

ಮಂಗಳವಾರ ತಾಳಿಕೋಟೆ ತಾಲೂಕಿನ ಕೊಡ ಗಾನೂರ ಗ್ರಾಮದಲ್ಲಿ ಬೂದಿಹಾಳ ಪೀರಾಪುರ ಏತ ನೀರಾವರಿ ಯೋಜನೆಯ ಪೈಪ್‌ಲೈನ್‌ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಕೃಷ್ಣಾ ನ್ಯಾಯಾಧಿ ಕರಣ ಅಂತಿಮ ತೀರ್ಪು ಹೊರ ಬಿದ್ದ ಬಳಿಕದ ಕಾನೂನು ಹೋರಾಟದ ತಾಂತ್ರಿಕ ಸಮಸ್ಯೆ ಇದೀಗ ನಿವಾರಣೆ ಹಂತ ತಲುಪಿದೆ. ಹೀಗಾಗಿ ಕೇಂದ್ರ ಸರ್ಕಾರ 2-3 ತಿಂಗಳಲ್ಲಿ ಅಧಿಸೂಚನೆ ಹೊರಬೀಳುವ ಸಾಧ್ಯತೆ ಇದೆ ಎಂದರು.

ಅಧಿಸೂಚನೆ ಹೊರ ಬೀಳುತ್ತಲೇ ಬಜೆಟ್‌ನಲ್ಲಿ ನೀರಾವರಿ ಕಾರ್ಯಕ್ಕೆ ಘೋಷಿತ ಅನುದಾನ ಹೊರತಾಗಿ ಕೃಷ್ಣಾ ಮೇಲ್ದಂಡೆ ಯೋಜನೆಗೆ ಅಗತ್ಯ ಇರುವ ಪೂರ್ಣ ಅನುದಾನ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ. ಆಲಮಟ್ಟಿ ಬಳಿ ಕೃಷ್ಣಾ ನದಿಗೆ ನಿರ್ಮಿಸಿರುವ ಲಾಲ್‌ ಬಹಾದ್ದೂರ್‌ ಶಾಸ್ತ್ರಿ ಜಲಾಶಯಕ್ಕೆ 524 ಮೀಟರ್‌ಗೆ ಗೇಟ್‌ ಅಳವಡಿಸುವ ಕಾರ್ಯ, ಭೂಸ್ವಾಧೀನವಾದ, ಪರಿಹಾರ ವಿತರಣೆ, ಮುಳುಗಡೆ ಆಗಲಿರುವ 20 ಹಳ್ಳಿಗಳ ಪುನರ್ವಸತಿ ಕಾರ್ಯ ಸೇರಿ ಇಡೀ ಯೋಜನೆಗೆ ಅಗತ್ಯ ಇರುವ ಅನುದಾನ ನೀಡುವುದಾಗಿ ಘೋಷಿಸಿದರು. ಅಲ್ಲದೇ ರಾಜ್ಯದ ಪಾಲಿನ 130 ಟಿಎಂಸಿ ಅಡಿ ನೀರು ಬಳಸಿಕೊಂಡು ರಾಜ್ಯದ ಅನ್ನದಾತರ ಜಮೀನಿಗೆ ನೀರು ಹರಿಸಿ ಭೂದೇವಿಗೆ ಹಸಿರು ಹೊದಿಸುವ ಕಾರ್ಯ ಮಾಡುವಲ್ಲಿ ನಮ್ಮ ಸರ್ಕಾರ ಬದ್ಧತೆ ತೋರಲಿದೆ ಎಂದರು.

ರಾಜ್ಯದಲ್ಲೇ ಕೆರೆಗೆ ನೀರು ತುಂಬುವ ಯೋಜನೆ ಅನುಷ್ಠಾನಕ್ಕಾಗಿ 110 ಕೋಟಿ ರೂ. ಅನುದಾನ ನೀಡಿ, ವಿಜಯಪುರ ಜಿಲ್ಲೆಯಿಂದ ಯೋಜನೆ ಆರಂಭಿಸಿದ್ದು ನಾನು. ಆದರೆ ನೀರಾವರಿ ವಿಷಯದಲ್ಲಿ ಕೆಲವರು ಭಗೀರಥ ಎಂದು ಕರೆದುಕೊಳ್ಳುತ್ತಾರೆ. ಯಾರು ಬೇಕಾದರೂ ತಮ್ಮನ್ನು ಭಗೀರಥ ಎಂದು ಕರೆದುಕೊಳ್ಳಲಿ, ನನಗೆ ಭಗೀರಥ ಎಂದು ಕರೆಯುವುದು ಬೇಡ. ನಾಡಿನ ರೈತರಿಗೆ ನೀರಾವರಿ ಸೌಲಭ್ಯ ಕಲ್ಪಿಸಿದ ಸಂತೃಪ್ತಿ ನನಗಿದೆ. ಭವಿಷ್ಯದಲ್ಲಿ ವಿಜಯಪುರ ಜಿಲ್ಲೆಯನ್ನು ಸಮಗ್ರ ನೀರಾವರಿ ಮಾಡುವುದು ನನ್ನ ಮುಂದಿರುವ ಗುರಿ ಎಂದರು.

ರಾಜ್ಯದ ಯೋಜನೆಗಳ ಅನುಷ್ಠಾನಕ್ಕೆ 67 ಸಾವಿರ ಕೋಟಿ ರೂ. ಸಾಲ ತರುವ ಸ್ಥಿತಿ ಇದ್ದಾಗ ಸೋರಿಕೆಗಳನ್ನು ತಡೆದು, ಅನಗತ್ಯ ಖರ್ಚಿಗೆ ಮಿತಿ ಹಾಕಿದ್ದರಿಂದ 4 ಸಾವಿರ ಕೋಟಿ ರೂ. ಸಾಲ ಕಡಿತ ಮಾಡಿದ್ದು ನಮ್ಮ ಸರ್ಕಾರದ ಸಾಧನೆ. ಕೇಂದ್ರ ಸರ್ಕಾರ ಕೂಡ ಬಜೆಟ್‌ ಘೋಷಣೆ ಹೊರತಾಗಿ 9600 ಕೋಟಿ ರೂ. ನೆರವು ನೀಡಿದ್ದರಿಂದ ರಾಜ್ಯದ ಆರ್ಥಿಕ ಶಕ್ತಿ ಸುಭದ್ರವಾಗಿದೆ ಎಂದರು.

ನಾನು ದೇವರು ಹಾಗೂ ದೈವ (ಜನ ಸಮೂಹ)ವನ್ನು ನಂಬಿದವ. ಆತ್ಮಸಾಕ್ಷಿಯಿಂದ ಕೆಲಸ ಮಾಡುವವನು. ಕೋವಿಡ್‌ ಸಂಕಷ್ಟದ ಪರಿಣಾಮ ರಾಜ್ಯದ ಬೊಕ್ಕಸಕ್ಕೆ 5 ಸಾವಿರ ಕೋಟಿ ರೂ. ನಿರೀಕ್ಷಿತ ಆದಾಯ ಕೊರತೆ ಆದಾಗ ವಿವಿಧ ಮೂಲಗಳಿಂದ ಆದಾಯ ಸಂಗ್ರಹಿಸಿ, ಗುರಿ ಮೀರಿ 16 ಸಾವಿರ ಕೋಟಿ ರೂ. ಆದಾಯ ಗಳಿ ಸಿದ್ದು ನಮ್ಮ ಸರ್ಕಾರದ ಬದ್ಧತೆಗೆ ಸಾಕ್ಷಿ ಎಂದರು.

ಟಾಪ್ ನ್ಯೂಸ್

PUNJAB

Jagjit Singh Dallewal: ರೈತ ನಾಯಕನನ್ನು ಆಸ್ಪತ್ರೆಗೆ ದಾಖಲಿಸಲು ಡಿ.31ರ ಗಡುವು

Madikeri: ಹಲಸಿನ ಮರವೇರಿದ ಕಾರ್ಮಿಕನ ಮೇಲೆ ಗುಂಡು… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು

Madikeri: ಹಲಸಿನ ಮರವೇರಿದ ಕಾರ್ಮಿಕನ ಮೇಲೆ ಗುಂಡು… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು

ಚೆನ್ನೈ ಲೈಂಗಿಕ ಕಿರುಕುಳ ಕೇಸ್‌: ಎಸ್‌ಐಟಿ ತನಿಖೆಗೆ ಹೈಕೋರ್ಟ್‌ ಆದೇಶ

ಚೆನ್ನೈ ಲೈಂಗಿಕ ಕಿರುಕುಳ ಕೇಸ್‌: ಎಸ್‌ಐಟಿ ತನಿಖೆಗೆ ಹೈಕೋರ್ಟ್‌ ಆದೇಶ

Pinarayi Vijayan: ಸಿಂಗ್‌ ಅಂತ್ಯಕ್ರಿಯೆ ವೇಳೆ ಬೇರೆ ಕಾರ್ಯಕ್ರಮದಲ್ಲಿ ಪಿಣರಾಯಿ ಭಾಗಿ

Pinarayi Vijayan: ಸಿಂಗ್‌ ಅಂತ್ಯಕ್ರಿಯೆ ವೇಳೆ ಬೇರೆ ಕಾರ್ಯಕ್ರಮದಲ್ಲಿ ಪಿಣರಾಯಿ ಭಾಗಿ

1-man-mohan

Manmohan Singh ವಿಚಾರದಲ್ಲಿ ಕಾಂಗ್ರೆಸ್ ಅಗ್ಗದ ರಾಜಕಾರಣ ಮಾಡುತ್ತಿದೆ: ಬಿಜೆಪಿ

CBI

ED ಅಧಿಕಾರಿ ಒಳಗೊಂಡ ಲಂಚ ಪ್ರಕರಣ; ಸಿಬಿಐನಿಂದ ಮಧ್ಯವರ್ತಿ ಬಂಧನ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ

Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ

14-

Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್

10-

Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

1-vijay

Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

PUNJAB

Jagjit Singh Dallewal: ರೈತ ನಾಯಕನನ್ನು ಆಸ್ಪತ್ರೆಗೆ ದಾಖಲಿಸಲು ಡಿ.31ರ ಗಡುವು

Madikeri: ಹಲಸಿನ ಮರವೇರಿದ ಕಾರ್ಮಿಕನ ಮೇಲೆ ಗುಂಡು… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು

Madikeri: ಹಲಸಿನ ಮರವೇರಿದ ಕಾರ್ಮಿಕನ ಮೇಲೆ ಗುಂಡು… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು

5

Udupi: ತಂಡಗಳ ನಡುವೆ ಹಲ್ಲೆ; ಪ್ರಕರಣ ದಾಖಲು

2

Kasaragod: ಹೊಳೆಯಲ್ಲಿ ಮುಳುಗಿ ವಿದ್ಯಾರ್ಥಿ ಸಾವು

Untitled-1

Kasaragod Crime News: ಮೂವರು ಮಕ್ಕಳ ಸಹಿತ ತಾಯಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.