ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ಅಧಿಕಾರಿಗಳ ದಾಳಿ
Team Udayavani, May 29, 2022, 2:47 PM IST
ವಿಜಯಪುರ: ವಿಜಯಪುರ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ| ಕವಿತಾ ದೊಡಮನಿ ಮಾರ್ಗದರ್ಶನದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ಜಿಲ್ಲಾ ತಂಬಾಕು ತನಿಖಾ ದಳದ ಸದಸ್ಯರು ಕೊಟ್ಫಾ 2003 ಕಾಯ್ದೆಯಡಿ ನಗರದ ವಿವಿಧೆಡೆ ದಾಳಿ ನಡೆಸಿದರು.
ನಗರದ ಕೇಂದ್ರ ಬಸ್ ನಿಲ್ದಾಣ ಸೇರಿದಂತೆ ವಿವಿಧ ಕಡೆಗಳಲ್ಲಿ ಸಂಚರಿಸಿ ಮಾರ್ಗದಲ್ಲಿ ಬರುವಂತಹ ವಿವಿಧ ಪಾನ್ ಶಾಪ್‌ಗ್ಳಿಗೆ ಎಚ್ಚರಿಕೆ ನೀಡಿ ದಂಡ ವಿಧಿಸಿದರು. ದಾಳಿಯಲ್ಲಿ ಸಾರ್ವಜನಿಕರಿಗೆ ತಂಬಾಕು ಸೇವನೆಯ ದುಷ್ಪರಿಣಾಮಗಳ ಕುರಿತು ಮಾಹಿತಿ ನೀಡಿ ತಂಬಾಕು ಉತ್ಪನ್ನ ಮಾರಾಟ ಮಾಡುವ ಅಂಗಡಿ ಮಾಲೀಕರಿಗೆ, ವ್ಯಾಪಾರಸ್ಥರಿಗೆ ಕೊಟ್ಫಾ 2003 ಕಾಯ್ದೆಯಡಿ ಒಟ್ಟು 49 ಪ್ರಕರಣಗಳನ್ನು ದಾಖಲಿಸಿ 4500 ರೂ.ದಂಡ ವಸೂಲು ಮಾಡಲಾಯಿತು.
ತಂಬಾಕು ಉತ್ಪನ್ನಗಳ ಜಾಹೀರಾತು ಫಲಕ ತೆರವುಗೊಳಿಸಿ, ತಂಬಾಕು ನಿಯಂತ್ರಣ ನಿಯಮಗಳ ಕುರಿತು ನಾಮಫಲಕಗಳನ್ನು ಅಳವಡಿಸಲಾಯಿತು. ದಾಳಿಯಲ್ಲಿ ರಾಜ್ಯ ತಂಬಾಕು ನಿಯಂತ್ರಣ ಘಟಕದ ಮಹಾಂತೇಶ ಉಳ್ಳಾಗಡ್ಡಿ, ಗಾಂಧಿ ಚೌಕ್ ಪೊಲೀಸ್ ಠಾಣೆ ಸಿಬ್ಬಂದಿ, ಮಹಾನಗರ ಪಾಲಿಕೆ ಸಿಬ್ಬಂದಿ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶದಿಂದ ಡಾ| ಪ್ರಕಾಶ ಚವ್ಹಾಣ, ಶ್ರೀಕಾಂತ ಪೂಜಾರ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Notice: ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಹೋರಾತ್ರಿ ಧರಣಿ
Vijayapura: ವಕ್ಫ್ ವಿರುದ್ಧ ಹಲವು ಮಠಾಧೀಶರ ನೇತೃತ್ವದಲ್ಲಿ ಹೋರಾಟ
Waqf Issue: ಲ್ಯಾಂಡ್ ಟೆರರಿಸಂ, ಲ್ಯಾಂಡ್ ಜಿಹಾದ್ ನಿಂದ ಬಚಾವಾಗಬೇಕು: ಶೋಭಾ ಕರಂದ್ಲಾಜೆ
Waqf Property: ಬೊಮ್ಮಾಯಿ ಕಾಲದಲ್ಲೂ ವಕ್ಫ್ ಆಸ್ತಿ ತೆರವಿಗೆ ಹೇಳಿದ್ರು: ಸಚಿವ ಜಮೀರ್
Vijayapura: ವಕ್ಫ್ ವಿವಾದ… ನಾಳೆಯಿಂದ ಅಹೋರಾತ್ರಿ ಧರಣಿ ಆರಂಭ: ಶಾಸಕ ಯತ್ನಾಳ
MUST WATCH
ಹೊಸ ಸೇರ್ಪಡೆ
Order: ಶಿರೂರು ಗುಡ್ಡ ಕುಸಿತ: 2 ತಿಂಗಳೊಳಗೆ 5 ಲ.ರೂ. ಪರಿಹಾರಕ್ಕೆ ಹೈಕೋರ್ಟ್ ಸೂಚನೆ
Power cut shock:ಅದಾನಿ ಕಂಪೆನಿಗೆ ಬಾಂಗ್ಲಾ ಪಾವತಿ ಶುರು
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು
ವಕ್ಫ್ ನೋಟಿಸ್‌ಗೆ ಬಿಜೆಪಿ ಆಕ್ರೋಶ; ರಾಜ್ಯಾದ್ಯಂತ ಮುಖಂಡರು, ಕಾರ್ಯಕರ್ತರ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.