19 ರಂದು ಸವದತ್ತಿಯಿಂದ ಸುವರ್ಣ ಸೌಧಕ್ಕೆ ಪಾದಯಾತ್ರೆ

2ಎ ಮೀಸಲಾತಿಗಾಗಿ ಪಂಚಮಸಾಲಿ ಸಮಾಜದ ಅಂತಿಮ ಹೋರಾಟ

Team Udayavani, Dec 18, 2022, 4:54 PM IST

1-asdsadasd

ವಿಜಯಪುರ : ಮಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಾವೇ ಕೊಟ್ಟ ಮಾತಿನಿಂದ ಡಿ.19 ರೊಳಗೆ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಘೋಷಿಸಬೇಕು. ಮೀಸಲಾತಿಗಾಗಿ ಕೂಡಲಸಂಗಮ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಶ್ರೀಗಳ ನೇತೃತ್ವದಲ್ಲಿ ಡಿ.19 ರಿಂದ ಸವದತ್ತಿಯಿಂದ ಬೆಳಗಾವಿ ವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಡಿ.22 ರಂದು ಬೆಳಗಾವಿಯಲ್ಲಿ ಸಮಾಜದ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ.

ಭಾನುವಾರ ನಗರದಲ್ಲಿ ಜಂಟಿ ಪತ್ರಿಕಾಗೋಷ್ಠಿಯಲ್ಲಿ ತಮ್ಮ ಸಮಾಜದ ಹೋರಾಟದ ವಿವರ ನೀಡಿದ ಪಂಚಮಸಾಲಿ ಸಮಾಜದ ಜಿಲ್ಲಾಧ್ಯಕ್ಷ ಬಿ.ಎಂ.ಪಾಟೀಲ, ಮೀಸಲು ಹೋರಾಟ ಸಮಿತಿ ಗೌರವಾಧ್ಯಕ್ಷ ಎಂ.ಎಸ್.ರುದ್ರಗೌಡರ, ಬೆಳಗಾವಿ ಸುರ್ವಣ ಸೌಧದಲ್ಲಿ ನಡೆಯುವ ಸಮಾವೇಶ ನಮ್ಮ ಸಮುದಾಯದ ಬಡವರ ಪರವಾದ ಮೀಸಲು ಹೋರಾಟದ ಅಂತಿಮ ಘಟ್ಟ. ಮಾಡಿ ಮಡಿ, ಮೀಸಲು ಪಡೆದೇ ಮಡಿ ಎಂಬ ಘೋಷಣೆಯೊಂದಿಗೆ ಬೆಳಗಾವಿಯಲ್ಲಿ 25 ಲಕ್ಷ ಜನರ ಶಕ್ತಿಪ್ರದರ್ಶನ ಹಮ್ಮಿಕೊಳ್ಳಲಾಗಿದೆ ಎಂದರು.

ಬೆಳಗಾವಿ ಸಮಾವೇಸಕ್ಕೆ ಮುನ್ನ ಜನಜಾಗೃತಿಗಾಗಿ ಅದೇ ಜಿಲ್ಲೆಯ ಸವದತ್ತಿಯಲ್ಲಿ ಕಾರ್ಯಕ್ರಮದ ಬಳಿಕ ಡಿ.19 ರಂದು ಅಲ್ಲಿಂದಲೇ ಬೆಳವಡಿ, ಕಿತ್ತೂರು ಮಾರ್ಗವಾಗಿ ಡಿ.22 ರ ವರೆಗೆ ಪಾದಯಾತ್ರೆ ನಡೆಯಲಿದೆ. 100 ಎಕರೆ ಪ್ರದೇಶದಲ್ಲಿ ಬೆಳಗಾವಿಯಲ್ಲಿ ನಡೆಯಲಿರುವ ಸಮಾವೇಶದಲ್ಲಿ ಅದೇ ಜಿಲ್ಲೆಯ 10 ಲಕ್ಷ ಜನರು, ವಿಜಯಪುರ ಜಿಲ್ಲೆಯ 4 ಲಕ್ಷ ಜನರು ಸೇರಿದಂತೆ 25 ಜನರ ಬೃಹತ್ ಶಕ್ತಿ ಪ್ರದರ್ಶನ ನಡೆಸಲಾಗುತ್ತದೆ ಎಂದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಾವೇ ಕೂಡಲಸಂಗಮದ ಬಸವಜಯ ಮೃತ್ಯುಂಜಯ ಶ್ರೀಗಳ ಸಮ್ಮುಖದಲ್ಲಿ ಸಮಾಜದ ಪ್ರಮುಖರಿಗೆ ಮಾತು ಕೊಟ್ಟಂತೆ ಡಿ.19 ರೊಳಗೆ ಪಂಚಮಸಾಲಿ ಸಮಾಜಕ್ಕೆ ಮೀಸಲು ಘೋಷಿಸುವ ವಿಶ್ವಾಸವಿದೆ ಎಂದರು.

ಮೀಸಲು ಘೋಷಿಸಿದರೆ ಬೆಳಗಾವಿಲ್ಲಿ ಡಿ.22 ರಂದು ನಡೆಯಲಿರುವ ಶಕ್ತಿಪ್ರದರ್ಶನ ಸಮಾವೇಶವನ್ನೇ ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಅಭಿನಂದನಾ ಸಮಾವೇಶವಾಗಿ ಪರಿವರ್ತಿಸಲಿದ್ದೇವೆ. ಮುಖ್ಯಮಮತ್ರಿ ಮಾತುತಪ್ಪಿದರೆ ಸಮಾವೇಶ ಹೋರಾಟದ ವೇದಿಕೆಯಾಗಿ ಪರಿವರ್ತನೆಯಾಗಲಿದೆ. ಅಗತ್ಯ ಎನಿಸಿದರೆ ಅಹೋರಾತ್ರಿ ಧರಣಿ ನಡೆಸುವ ಮೂಲಕ ಹೋರಾಟ ತೀವ್ರಗೊಳಿಸಲು ಹಿಂಜರಿಯುವುದಿಲ್ಲ ಎಂದು ಎಚ್ಚರಿಸಿದರು.

ಸಮಾಜಕ್ಕೆ 28 ವರ್ಷಗಳಿಂದ ನಡೆಸಿದ್ದ ಹೋರಾಟಕ್ಕೆ ಯಾರ ಬಲಿಷ್ಠ ನಾಯಕತ್ವ ನೀಡಿದರು, ಹೋರಾಟವನ್ನು ಯಾರು ತಾರ್ಕಿಕ ಅಂತ್ಯಕ್ಕೆ ಕರೆದೊಯ್ದಿದ್ದಾರೆ ಎಂಬುದು ಸಮಾಜದ ಜನರಿಗೆ ಗೊತ್ತಿದೆ. ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ತಮ್ಮದೇ ಸರ್ಕಾರವಿದ್ದರೂ ಸದನ ಬಾವಿಗಿಳಿದು ಹೋರಾಟ ಮಾಡಿದ್ದಾರೆ. ಸದನ ಹೊರಗೆ ಬಸವಜಯ ಮೃತ್ಯುಂಜಯ ಶ್ರೀಗಳ ನೇತೃತ್ವದಲ್ಲಿ ನಡೆದ ನಿರಂತರ ಹೋರಾಟಗಳಿಗೆಲ್ಲ ಯತ್ನಾಳ ಹಾಗೂ ವಿಜಯಾನಂದ ಕಾಶಪ್ಪನವರ ಸೇರಿದಂತೆ ಸಾವಿರಾರು ಜನರು ಸಾಥ್ ನೀಡಿದ್ದಾರೆ. ಹೀಗಾಗಿ ಹೋರಾದ ಕೀರ್ತಿ ಯಾರಿಗೆ ನೀಡಬೇಕೆಂದು ಜನರೇ ನಿರ್ಧರಿಸುತ್ತಾರೆ ಎಂದರು.

ಹೋರಾಟಕ್ಕೆ ತಾರ್ಕಿಕ ಅಂತ್ಯ ಸಿಗುತ್ತದೆ ಎಂದರಿತ ಕೆಲವು ಮಠಾಧೀಶರು, ನಾಯಕರು, ಶಾಸಕರು, ಸಚಿವರು ಇದೀಗ ಮನವಿ ಸಲ್ಲಿಸುವ, ಸಭೆಗಳಲ್ಲಿ ಭಾಗವಿಸುವ ನಾಟಕ ಆರಂಭಿಸಿದ್ದಾರೆ. ಇನ್ನಾದರೂ ಇಂಥವರೆಲ್ಲ ನಮ್ಮ ಹೋರಾಟದಲ್ಲಿ ಸಕ್ರೀಯವಾಗಿ ಪಾಲ್ಗೊಳ್ಳಲು ಮುಂದಾದಲ್ಲಿ ನಮ್ಮ ತಕರಾರು ಏನಿಲ್ಲ ಎಂದರು.

ಹೋರಾಟದಲ್ಲಿ ಪಾಲ್ಗೊಳ್ಳುವ ಜನರು ಸ್ವಯಂ ಬುತ್ತಿ, ನೀರು, ಅಗತ್ಯ ಎನಿಸಿದರೆ ಅಹೋರಾತ್ರಿ ಹೋರಾಟಕ್ಕಾಗಿ ಹಾಸಿಗೆ, ಹೊದಿಕೆ ಸಮೇತ ಬೆಳಗಾವಿಗೆ ಬರಬೇಕು. ಸಮಾವೇಶದಲ್ಲಿ ಪಾಲ್ಗೊಳ್ಳಲು ಹಳ್ಳಿಗಳಿಂದ ಬರುವ ಸಮಾಜದ ಬಡವರಿಗಾಗಿ ವಾಹನ ಸೇವೆ ಒದಗಿಸಲು ಹೋರಾಟ ಸಮಿತಿ ವ್ಯವಸ್ಥೆ ಮಾಡುತ್ತದೆ ಎಂದರು.

ಮೀಸಲಾತಿಗಾಗಿ ನಡೆಯುತ್ತಿರುವ ಈ ಹೋರಾಟ ಅಂತಿಮ ಹಂತದ್ದಾಗಿದ್ದು, ಮನೆಗೆ ಒಬ್ಬರಲ್ಲ, ಮನೆಯಲ್ಲಿ ಒಬ್ಬರನ್ನು ಬಿಟ್ಟು ಇತರರು ಬೆಳಗಾವಿ ಸಮಾವೇಶಕ್ಕೆ ಆಗಮಿಸಿ ಸಮಾಜದ ಶಕ್ತಿ ಪ್ರದರ್ಶನ ನೀಡಬೇಕು. ರಾಜ್ಯದಾದ್ಯಂತ ಸುಮಾರು 1.40 ಕೋಟಿ ಜನಸಂಖ್ಯೆ ಇದ್ದು, ಮೂಲೆ ಮೂಲೆಯಿಂದ ಜನರು ಆಗಮಿಸಲು ಸಂಘಟನೆ ರೂಪಿಸಲಾಗಿದೆ ಎಂದರು. ಪಂಚಸೇನೆಯ ರಾಜ್ಯಾಧ್ಯಕ್ಷ ಬಿ.ಎಸ್.ಪಾಟೀಲ ನಾಗರಾಳಹುಲಿ, ನಿಂಗನಗೌಡ ಸೋಲಾಪುರ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

9-someshwara

Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.