ಮತದಾರ ಪಟ್ಟಿ ಪರಿಷ್ಕರಣೆಗೆ ವಾರ ಅವಧಿ

Team Udayavani, Dec 11, 2020, 6:58 PM IST

ಮತದಾರ ಪಟ್ಟಿ ಪರಿಷ್ಕರಣೆಗೆ ವಾರ ಅವಧಿ

ವಿಜಯಪುರ: ಜಿಲ್ಲೆಯ ರಾಜಕೀಯ ಪಕ್ಷಗಳು (ಬಿಎಲ್‌ಎ) ಬೂತ್‌ ಮಟ್ಟದ ಏಜೆಂಟರನ್ನು ತಕ್ಷಣನೇಮಿಸಿಕೊಳ್ಳುವಂತೆ ಬೆಂಗಳೂರು ಬಿಬಿಎಂಪಿ ಘನತ್ಯಾಜ್ಯ ನಿರ್ವಹಣಾ ವಿಶೇಷ ಆಯುಕ್ತರಾದ ವಿಜಯಪುರ ಜಿಲ್ಲಾ ಮತದಾರರ ಪಟ್ಟಿ ವೀಕ್ಷಕ ಡಿ.ರಂದೀಪ್‌ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಸಲಹೆ ನೀಡಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ಅವರು, ಜಿಲ್ಲೆಯ ರಾಜಕೀಯ ಪಕ್ಷಗಳು ತಕ್ಷಣಬಿಎಲ್‌ಎಗಳನ್ನು ಹೆಚ್ಚಿನ ರೀತಿಯಲ್ಲಿ ನೇಮಿಸಿಕೊಳ್ಳಬೇಕು. ಬಿಎಲ್‌ಎ ನೇಮಕಾತಿಗೆ ಸಂಬಂಧಿಸಿ ಇರುವ ಮಾರ್ಗಸೂಚಿಗಳನ್ನು ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಪೂರೈಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಈಗಾಗಲೇ ಜಿಲ್ಲೆಯ ಮತದಾರರ ಕರಡು ಪಟ್ಟಿ ಪ್ರಕಟಿಸಲಾಗಿದೆ. ಈ ಮತದಾರರ ಪಟ್ಟಿಯಲ್ಲಿ ಯಾವುದೇ ಲೋಪ ಇದ್ದಲ್ಲಿ, ಪುನರಾವರ್ತಿತ ಮತದಾರರು ಇದ್ದಲ್ಲಿ ತಕ್ಷಣ ಸರಿಪಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಭಾಗ ಸಂಖ್ಯೆ: 216ರಲ್ಲಿನಾಗಠಾಣ ಕ್ಷೇತ್ರದ ಮತದಾರರು ಹೆಚ್ಚಿನ ರೀತಿಯಲ್ಲಿ ಸೇರ್ಪಡೆಯಾಗಿರುವ ಬಗ್ಗೆ ಕಾಂಗ್ರೆಸ್‌ ಪಕ್ಷದ ಪ್ರತಿನಿಧಿ ಯಿಂದದೂರು ಬಂದ ಹಿನ್ನೆಲೆಯಲ್ಲಿ ಈ ಕುರಿತಂತೆ ಅಪರ ಜಿಲ್ಲಾ ಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಬೇಕು. ಜೊತೆಗೆ ನಕಲಿ ಮತದಾರರನ್ನು ಗುರುತಿಸಲುಮತ್ತು ಈ ಕುರಿತು ಮತದಾರರ ಪಟ್ಟಿಯಲ್ಲಿ ಸರಿಪಡಿಸುವಂತೆ ನಿರ್ದೇಶನ ನೀಡಿದರು.

ಪಾರದರ್ಶಕ ಮತದಾರರ ಪಟ್ಟಿ ಸಿದ್ಧಪಡಿಸಲು ವಿಶೇಷ ಗಮನ ನೀಡಲಾಗುತ್ತಿದೆ. ನೂತನ ಕರಡು ಮತದಾರರ ಪಟ್ಟಿಗೆ ಸಂಬಂಧಿಸಿಪರಿಶೀಲನೆ ನಡೆಸಿ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ದೂರು ಸಲ್ಲಿಸಬಹುದಾಗಿದೆ ಎಂದರು. ಈವರೆಗೆ ಸಲ್ಲಿಸಲಾದ ದೂರುಗಳ ಮೇಲೆಯೂ ಕ್ರಮ ಕೈಗೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.

ಅಪರ ಜಿಲ್ಲಾಧಿಕಾರಿ ಡಾ| ಔದ್ರಾಮ್‌ ಮಾತನಾಡಿ, ಅರ್ಹ ಮತದಾರರನ್ನು ನೋಂದಾಯಿಸಿಕೊಳ್ಳಲು, ಹಕ್ಕು ಮತ್ತುಆಕ್ಷೇಪಣೆ ಸಲ್ಲಿಸಲು ಡಿ. 17 ರವರೆಗೆ ಕಾಲಾವಕಾಶ ಕಲ್ಪಿಸಲಾಗಿದೆ. ಈಗಾಗಲೇ ಎರಡು ಬಾರಿ ಮತದಾರರ ವಿಶೇಷ ನೋಂದಣಿ ಅಭಿಯಾನ ನಡೆಸಲಾಗಿದೆ. ಡಿ. 13ರಂದು ಮತ್ತೂಮ್ಮೆ ಅಭಿಮಾನ ನಡೆಯಲಿದೆ ಎಂದು ವಿವರಿಸಿದರು.

ಜಿಪಂ ಸಿಇಒ ಲಕ್ಷ್ಮೀಕಾಂತರೆಡ್ಡಿ, ಇಂಡಿ ಉಪವಿಭಾಗಾಧಿಕಾರಿ ರಾಹುಲ್‌ಸಿಂಧೆ ಸೇರಿದಂತೆ ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ ಮತ್ತು ಇತರ ಪಕ್ಷಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

parameshwara

Naxal; ರಾಜ್ಯದಲ್ಲಿ 99 % ನಕ್ಸಲಿಸಂ ಅಂತ್ಯಗೊಂಡಿದೆ: ಡಾ.ಜಿ.ಪರಮೇಶ್ವರ್

SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್‌ ಶುರು?

SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್‌ ಶುರು?

MOsale

Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ

Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್‌ ಬಾಬಾ…ರುದ್ರಾಕ್ಷಾ!

Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್‌ ಬಾಬಾ…ರುದ್ರಾಕ್ಷಾ!

1-TTD

Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!

web

Winter Health Tips: ಚಳಿಗಾಲದಲ್ಲಿ ಆರೋಗ್ಯವಾಗಿರಲು 10 ಅತ್ಯುತ್ತಮ ಮಾರ್ಗಗಳು

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ

Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ

Leopard spotted in Vijayapura city: CCTV footage captured

Leopard: ವಿಜಯಪುರ ನಗರದಲ್ಲಿ ಕಾಣಿಸಿಕೊಂಡ ಚಿರತೆ: ಸಿಸಿಟಿವಿಯಲ್ಲಿ ದೃಶ್ಯ ಸೆರೆ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

arrested

Vijayapura; ವಿದ್ಯಾರ್ಥಿನಿಯರಿಗೆ ಲೈಂಗಿ*ಕ ಕಿರುಕುಳ: ಸರಕಾರಿ ಕಾಲೇಜು ಪ್ರಾಂಶುಪಾಲ ಸೆರೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

parameshwara

Naxal; ರಾಜ್ಯದಲ್ಲಿ 99 % ನಕ್ಸಲಿಸಂ ಅಂತ್ಯಗೊಂಡಿದೆ: ಡಾ.ಜಿ.ಪರಮೇಶ್ವರ್

SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್‌ ಶುರು?

SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್‌ ಶುರು?

MOsale

Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ

Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್‌ ಬಾಬಾ…ರುದ್ರಾಕ್ಷಾ!

Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್‌ ಬಾಬಾ…ರುದ್ರಾಕ್ಷಾ!

9

Shirva: ಮೂಡುಬೆಳ್ಳೆ ಪೇಟೆ; ನಿತ್ಯ ಟ್ರಾಫಿಕ್‌ ಜಾಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.