BJP, ಹಿಂದೂ ಕಾರ್ಯಕರ್ತರ ನೆರವಿಗೆ ಬೆಂಗಳೂರಿನಲ್ಲಿ ಕಚೇರಿ ಆರಂಭ: ಬಸನಗೌಡ ಪಾಟೀಲ ಯತ್ನಾಳ್


Team Udayavani, Dec 16, 2023, 2:57 PM IST

Opening office in Bengaluru to help BJP, Hindu workers: Yatnal

ವಿಜಯಪುರ: ರಾಜ್ಯದಲ್ಲಿ ಬಿಜೆಪಿ ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ. ಹೀಗಾಗಿ ಸಂತ್ರಸ್ತರಿಗೆ ಕಾನೂನು ನೆರವು ನೀಡುವುದಕ್ಕಾಗಿ ಶೀಘ್ರದಲ್ಲೇ ಬೆಂಗಳೂರಿನಲ್ಲಿ ಕಛೇರಿ ತೆರೆಯುತ್ತೇನೆ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಭರವಸೆ ನೀಡಿದ್ದಾರೆ.

ಶನಿವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಸಾಮಾಜಿಕ ಜಾಲತಾಣಗಳಲ್ಲಿ ಅಭಿಪ್ರಾಯ ಹಂಚಿಕೊಂಡರೂ ಪೊಲೀಸರು ಪ್ರಕರಣ ದಾಖಲಿಸುವ, ಠಾಣೆಗೆ ಕರೆದೊಯ್ದು ಮುಚ್ಚಳಿಕೆ ಬರೆಸಿಕೊಳ್ಳುವ ಮೂಲಕ ದೌರ್ಜನ್ಯ ನಡೆಸುತ್ತಿದ್ದಾರೆ. ಅಭಿವ್ಯಕ್ತಿ ಸ್ವಾತಂತ್ರ್ಯ, ವಾಕ್ ಸ್ವಾತಂತ್ರ್ಯದ ಹರಣ ನಡೆಯುತ್ತಿದೆ. ಇಂಥ ದೌರ್ಜನ್ಯದಿಂದ ಬಾಧಿತರಿಗೆ ಉಚಿತವಾಗಿ ಕಾನೂನು ನೆರವು ನೀಡುವುದಕ್ಕಾಗಿ ಎರಡು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಛೇರಿ ತೆರೆಯುವುದಾಗಿ ಹೇಳಿದರು.

ಸದರಿ ಕೇಂದ್ರದಲ್ಲಿ ಉಚಿತ ಕಾನೂನು ನೆರವು ನೀಡಲು ಹಲವು ವಕೀಲರು ಮುಂದೆ ಬಂದಿದ್ದಾರೆ. ಬಾಧಿತರಿಗೆ ಉಚಿತ ಕಾಲಿಂಗ್ ಸೇವೆ ಆರಂಭಿಸಿ, ಭಯದಿಂದ ಬಳಲಿರುವ ಬಿಜೆಪಿ-ಹಿಂದೂ ಕಾರ್ಯಕರ್ತರಲ್ಲಿ ಧೈರ್ಯ ತುಂಬುವ ಕೆಲಸ ಮಾಡಲಿದ್ದೇನೆ ಎಂದರು.

ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಸುಲ್ತಾನ ಹೆಸರು ಇಡುವುದು ಸೂಕ್ತವಲ್ಲ. ಆದಿಲ್ ಶಾಹಿ, ನಿಜಾಮ ಶಾಹಿ ವ್ಯವಸ್ಥೆಯಿಂದ ನಮ್ಮ ಭಾಗ ಅಭಿವೃದ್ಧಿಯಾಗಿಲ್ಲ. ಬದಲಾಗಿ ಮೈಸೂರು ರಾಜ್ಯದ ಸಮಗ್ರ ಅಭಿವೃದ್ಧಿಗೆ ಶ್ರಮಿಸಿದ ಜಯಚಾಮರಾಜೇಂದ್ರ ಒಡೆಯರ್ ಅಥವಾ ಮೈಸೂರು ರಾಜ ಮನೆತನದ ಮಹಾರಾಜರ ಹೆಸರು ಇಡಲಿ ಎಂದು ಆಗ್ರಹಿಸಿದರು.

ಭ್ರಷ್ಟಾಚಾರ ಪ್ರಕರಣದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ವಿರುದ್ಧ ಸಿಬಿಐ ತನಿಖೆ ವಾಪಸ್ ಪಡೆದಿರುವ ಕ್ರಮ ಅರಾಜಕತೆಗೆ ನಾಂದಿ ಹಾಡಲಿದೆ. ಭವಿಷ್ಯದಲ್ಲಿ ಹತ್ಯೆ ಪ್ರಕರಣದ ಆರೋಪಿಗಳ ವಿರುದ್ಧವೂ ಪ್ರಕರಣ ವಾಪಸ್ ಪಡೆಯುತ್ತೇವೆ ಎಂದರೆ ಅರಾಜಕತೆ ಉಂಟಾಗಲಿದೆ ಎಂದು ಎಚ್ಚರಿಸಿದರು.

ಇದೇ ಕಾರಣಕ್ಕೆ ನಾನು ಕಾನೂನು ಹೋರಾಟಕ್ಕಾಗಿ ಹೈಕೋರ್ಟ್ ಮೊರೆ ಹೋಗಿದ್ದು, ನಮ್ಮ ವಕೀಲರು ಸಮರ್ಥವಾಗಿ ವಾದ ಮಂಡಿಸಿದ್ದಾರೆ. ಜನವರಿ 5 ರಂದು ಮತ್ತೆ ವಿಚಾರಣೆ ಇದ್ದು, ನ್ಯಾಯಕ್ಕೆ ಜಯ ಸಿಗಲಿದೆ ಎಂಬ ವಿಶ್ವಾಸವಿದೆ ಎಂದರು.

ಇದನ್ನೂ ಓದಿ:Hubli; ಸಂಸತ್ ಭದ್ರತೆ ವಿಚಾರದಲ್ಲಿ ರಾಜಕೀಯ ಸರಿಯಲ್ಲ: ಪ್ರಹ್ಲಾದ ಜೋಶಿ

ಬೆಳಗಾವಿ ಅಧಿವೇಶನದಲ್ಲಿ ಅತ್ಯಂತ ಕ್ರಿಯಾಶೀಲವಾಗಿ ಉತ್ತರ ಕರ್ನಾಟಕ ಭಾಗಕ್ಕೆ ಎಲ್ಲ ರಂಗಗಳಲ್ಲಿ ಹಾಗೂ ಎಲ್ಲ ರೀತಿಯಲ್ಲಿ ಆಗಿರುವ ಅಭಿವೃದ್ಧಿ ಹೀನತೆ ಬಗ್ಗೆ ಧ್ವನಿ ಎತ್ತಿದ್ದೇನೆ. ಬಿಜೆಪಿ ಜೋಡೆತ್ತುಗಳಿಗಿಂತ ನಾನೇ ಹೆಚ್ಚು ಮಾತನಾಡಿದ್ದೇನೆ ಎಂದರು.

ಸದನದಲ್ಲಿ ಸರ್ಕಾರದ ವಿರುದ್ಧ ಭಾರಿ ಹೋರಾಟ ಮಾಡುವುದಾಗಿ ಗುಡುಗಿದ್ದವರು ತಣ್ಣಗಾಗಿ ಪ್ರತಿಭಟನೆ ಮಾಡಿದರು. ಈ ಕಾರಣಕ್ಕಾಗಿಯೇ ಕಾಂಗ್ರೆಸ್ ನಾಯಕರು ನನ್ನ ನಡೆಗೆ ವಿಪಕ್ಷದ ನಾಯಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಕರಿಗಿಂತ ಹೆಚ್ಚು ಕೆಲಸ ಮಾಡಿದ್ದಾಗಿ ಹೊಗಳಿದ್ದಾರೆ ಎಂದು ವಿಪಕ್ಷದ ನಾಯಕ ಅಶೋಕ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಪರೋಕ್ಷವಾಗಿ ಕುಟುಕಿದರು.

ಭಯೋತ್ಪಾದನೆ ವಿಷಯದಲ್ಲಿ ಬೆಂಗಳೂರು ಸೇರಿದಂತೆ ಇತರೆ ಕಡೆಗಳಲ್ಲಿ ಎನ್ಐಎ ಕೆಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದೆ.

ವಿಜಯಪುರ ನಗರದ ಓರ್ವ ಇಸ್ಲಾಂ ಧರ್ಮಗುರು ವಿರುದ್ಧ ನಾನು ಮಾಡಿರುವ ಆರೋಪಿಗಳ ಕುರಿತು ತನಿಖೆ ನಡೆಯುವುದು ಖಚಿತ. ಆದರೆ ಈ ಕುರಿತು ಬಹಿರಂಗವಾಗಿ ಮಾಹಿತಿ ಹಂಚಿಕೊಳ್ಳಲಾರೆ ಎಂದರು.

ಟಾಪ್ ನ್ಯೂಸ್

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

1-vijay

Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

23-

Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್

22-

ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

5

Health: ಶೀಘ್ರ ಕ್ಯಾನ್ಸರ್‌ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

4

Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

3(1

Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.