ಆಪರೇಷನ್ ಕಮಲಕ್ಕೆ ಅವಕಾಶ ನೀಡುವುದಿಲ್ಲ: ಎಂ.ಬಿ.ಪಾಟೀಲ
Team Udayavani, Sep 7, 2018, 6:05 AM IST
ವಿಜಯಪುರ: “ಆಪರೇಷನ್ ಕಮಲ’ದ ಮೂಲಕ ರಾಜ್ಯದ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಪತನಗೊಳಿಸಲು ಬಿಜೆಪಿ ನಾಯಕರು ಕಾಣುತ್ತಿರುವ ಕನಸು ನನಸಾಗುವುದಿಲ್ಲ ಎಂದು ಮಾಜಿ ಸಚಿವ ಹಾಗೂ ಬಬಲೇಶ್ವರ ಶಾಸಕ ಎಂ.ಬಿ. ಪಾಟೀಲ ಹೇಳಿದ್ದಾರೆ.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ನಾಯಕರು ಎಸೆಯುವ ಯಾವ ದಾಳಕ್ಕೂ ಕಾಂಗ್ರೆಸ್-ಜೆಡಿಎಸ್ ಶಾಸಕರು ಬಲಿಯಾಗುವುದಿಲ್ಲ. ಪ್ರಜಾಪ್ರಭುತ್ವಕ್ಕೆ ಮಾರಕವಾಗಿರುವ ಆಪರೇಷನ್ ಕಮಲ ನಡೆಯಲು ಅವಕಾಶ ನೀಡುವುದಿಲ್ಲ. ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ದಿನಕ್ಕೊಂದು ಹೇಳಿಕೆ ನೀಡುತ್ತಾರೆ, ಅವರು ಹೇಳಿದ್ದಕ್ಕೆಲ್ಲ ನಾನು ಪ್ರತಿಕ್ರಿಯೆ ನೀಡಲಾರೆ. ನನ್ನ ಮರ್ಜಿಯಿಂದ ಅವರು ಮಾತನಾಡುವ ಅಗತ್ಯವೂ ಇಲ್ಲ ಎಂದರು.
ಸಿದ್ದರಾಮಯ್ಯ ಅವರು ಮೇಲ್ಮನೆ ಚುನಾವಣೆಯಲ್ಲಿ ಮತದಾನ ಮಾಡಬಾರದೆಂಬ ದುರುದ್ದೇಶದಿಂದ ವಿದೇಶ ಪ್ರವಾಸ ಕೈಗೊಂಡಿಲ್ಲ. ಈ ಪ್ರವಾಸ 2 ತಿಂಗಳ ಮೊದಲೇ ನಿರ್ಧಾರವಾಗಿತ್ತು. ತಮ್ಮ ಒಂದು ಮತ ತಪ್ಪಿದರೇನಾಯ್ತು, ನೂರು ಮತ ಹಾಕಿಸಿ ಸುನೀಲಗೌಡ ಅವರನ್ನು ಗೆಲ್ಲಿಸುವುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ. ಜೆಡಿಎಸ್ ಬೆಂಬಲಿತ ಕಾಂಗ್ರೆಸ್ ಅಭ್ಯರ್ಥಿ ಸುನೀಲಗೌಡ ಗೆಲುವು ನಿಶ್ಚಿತ.
– ಎಂ.ಬಿ.ಪಾಟೀಲ, ಮಾಜಿ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್
Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ
Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ
Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mumbai: 13000 ಸಂಬಳ ಪಡೆಯುವ ಗುತ್ತಿಗೆ ನೌಕರನಿಂದ ಗೆಳತಿಗೆ BMWಕಾರು, 4BHK ಫ್ಲಾಟ್ ಗಿಫ್ಟ್
Bollywood: ಹೃತಿಕ್ ರೋಷನ್ ʼಕ್ರಿಶ್ -4ʼ ಬಗ್ಗೆ ಹೊರಬಿತ್ತು ಬಿಗ್ ಅಪ್ಡೇಟ್
Martin: ಕಿರುತೆರೆಯಲ್ಲಿ ಧೂಳೆಬ್ಬಿಸಲು ಬರುತ್ತಿದೆ ಧ್ರುವ ಸರ್ಜಾ ನಟನೆಯ ʼಮಾರ್ಟಿನ್ʼ
Airtel Outage:ದೇಶದ ಹಲವೆಡೆ ಏರ್ ಟೆಲ್ Network ಸಮಸ್ಯೆ; ಏರ್ ಟೆಲ್ ಗ್ರಾಹಕರಿಂದ ದೂರು
BBK11: ದಯವಿಟ್ಟು ಬಿಗ್ ಬಾಸ್ ಮನೆಯಿಂದ ಹೋಗು.. ಚೈತ್ರಾಗೆ ಕೈಮುಗಿದು ಕೇಳಿಕೊಂಡ ರಜತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.