Ayodhya ವಿರೋಧ ರಾಮ ಮಂದಿರಕ್ಕಲ್ಲ, ರಾಜಕೀಯ ಸಮಾರಂಭಕ್ಕೆ: ಸಚಿವ ಎಂ.ಬಿ.ಪಾಟೀಲ
Team Udayavani, Jan 26, 2024, 8:12 PM IST
ವಿಜಯಪುರ: ರಾಮ, ರಾಮಮಂದಿರದ ಕುರಿತು ನಮ್ಮ ವಿರೋಧವಿಲ್ಲ. ಆದರೆ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಮ ಮಂದಿರ ಲೋಕಾರ್ಪಣೆಯನ್ನು ಬಿಜೆಪಿ ರಾಜಕೀಯ ಸಮಾರಂಭ ಮಾಡಿದ ಕ್ರಮಕ್ಕೆ ಮಾತ್ರ ನಮ್ಮ ವಿರೋಧವಿದೆ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಹೇಳಿದ್ದಾರೆ.
ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಮನನ್ನು ವಿರೋಧಿಸುವವರು ಯಾರೂ ಇಲ್ಲ. ನಾವು ಕೂಡ ರಾಮನನ್ನು ಗೌರವಿಸುತ್ತೇವೆ, ಶಿವನನ್ನು ಆರಾಧಿಸುತ್ತೇವೆ. ಬುದ್ಧ, ಅಲ್ಲಾ, ಗುರುನಾನಕ, ಮಹಾವೀರ ಹೀಗೆ ಎಲ್ಲ ಧರ್ಮಗಳನ್ನು, ದೇವರನ್ನು ನಾವು ಗೌರವಿಸುತ್ತೇವೆ ಎಂದರು.
ಆದರೆ ಪಕ್ಷಾತೀತವಾಗಿ ಆಗಬೇಕಿದ್ದ ಅಯೋಧ್ಯಾ ರಾಮಮಂದಿರ ಲೋಕಾರ್ಪಣೆ ಸಮಾರಂಭವನ್ನು ಬಿಜೆಪಿ ಸ್ವಪಕ್ಷೀಯ ಸಮಾರಂಭ, ಕಾರ್ಯಕ್ರಮದ ರೀತಿಯ ಆಚರಣೆಗೆ ನಮ್ಮ ವಿರೋಧವಿತ್ತು. ಇದೇ ಕಾರಣಕ್ಕೆ ರಾಮಮಂದಿರ ಲೋಕಾರ್ಪಣೆ ಸಮಾರಂಭದಲ್ಲಿ ಭಾಗವಹಿಸಿಲ್ಲ ಎಂದು ಸ್ಪಷ್ಟಪಡಿಸಿದರು.
ಚುನಾವಣೆ ರಾಜಕೀಯ ಕಾರಣಕ್ಕಾಗಿ ಅಯೋಧ್ಯಾ ರಾಮಮಂದಿರ ಉದ್ಘಾಟನೆ ಸಮಾರಂಭವನ್ನು ಬಿಜೆಪಿ ರಾಜಕೀಯ ಸಮಾರಂಭ ಮಾಡಿದ್ದಕ್ಕೆ ನಮ್ಮ ವಿರೋಧವಿತ್ತು. ಬದಲಾಗಿ ರಾಮಮಂದಿರ ನಿರ್ಮಾಣ, ಲೋಕಾರ್ಪಣೆಗೆ ಅಲ್ಲ ಎಂದು ಸಮಜಾಯಿಷಿ ನೀಡಿದರು. ನಮಗೆ ಅನುಕೂಲ ಆದಾಗ ರಾಹುಲ್ ಗಾಂಧಿ , ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಸೇರಿದಂತೆ ಎಲ್ಲ ನಾಯಕರೂ ರಾಮಮಂದಿರಕ್ಕೆ ಹೋಗುತ್ತೇವೆ ಎಂದರು.
ಲೋಕಸಭೆ ಕ್ಷೇತ್ರಗಳನ್ನು ಗೆಲ್ಲಲು ಆಯಾ ಜಿಲ್ಲಾ ಉಸ್ತುವಾರಿ ಸಚಿವರಿಗೆ ಟಾಸ್ಕ್ ನೀಡಿದ್ದಾರೆ ಎನ್ನುವುದಕ್ಕಿಂತ, ನಮಗೆ ಯಾವಾಗಲೂ ಜವಾಬ್ದಾರಿ ಇದ್ದೇ ಇರುತ್ತದೆ. ಹಾಗಂತ ಅದು ಟಾಸ್ಕ್ ಅಂತಲ್ಲ. ಸಚಿವರು, ಶಾಸಕರಿಗೆಲ್ಲ ನೈತಿಕ ಜವಾಬ್ದಾರಿ ಇರುತ್ತದೆ. ಲೋಕಸಭೆ ಚುನಾವಣೆಗೆ ಸ್ಪರ್ಧೆಗೆ ಹೈಕಮಾಂಡ್ ಸೂಚಿಸಿದರೆ ನಾನೂ ಸೇರಿದಂತೆ ಯಾವುದೇ ಸಚಿವರೂ ಸ್ಪ ರ್ಧಿಸಲೇಬೇಕು ಎಂದರು.
ಮೂವರು ಡಿಸಿಎಂ ನೇಮಕ ವಿಚಾರ ಪಕ್ಷದ ನಾಲ್ಕು ಗೋಡೆಗಳ ಮಧ್ಯೆ ವಿಚಾರ ಮಾಡುವ ವಿಷಯವೇ ಹೊರತು, ಬಹಿರಂಗ ಚರ್ಚೆ ಮಾತನಾಡುವ ವಿಚಾರ ಅಲ್ಲ ಎಂದರು. ನಿಗಮ-ಮಂಡಳಿ ನೇಮಕ ವಿಚಾರದಲ್ಲಿ ನಾವು ಹೈಕಮಾಂಡ್ ಗುಲಾಮರಲ್ಲ ಎಂಬ ಸಚಿವ ರಾಜಣ್ಣ ಹೇಳಿಕೆ ನನ್ನ ಗಮನಕ್ಕೆ ಬಂದಿಲ್ಲ. ಆದರೆ ಹೈಕಮಾಂಡ್ ಹೇಳಿದ್ದನ್ನು ನಾವೆಲ್ಲರೂ ಒಪ್ಪಿಕೊಳ್ಳಬೇಕು. ಸದ್ಯಕ್ಕೆ ಶಾಸಕರು, ಪಕ್ಷದ ಮುಖಂಡರನ್ನು ಪರಿಗಣಿಸಿದ್ದು, ಉಳಿದವರ ನೇಮಕದ ಸಂದರ್ಭ ರಾಜಣ್ಣ ಹೇಳಿಕೆಯೂ ಪರಿಗಣನೆ ಆಗಲಿದೆ ಎಂಬ ನಂಬಿಕೆ ಇದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು
Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು
Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು
Muddebihal: ಟ್ರ್ಯಾಕ್ಟರ್-ಟ್ರೇಲರ್ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು
Waqf Notice: ಒಂದಿಂಚು ಜಮೀನು ವಕ್ಫ್‌ಗೆ ಹೋಗಲು ಬಿಡಲ್ಲ: ಸಚಿವ ಎಂ.ಬಿ.ಪಾಟೀಲ್
MUST WATCH
ಹೊಸ ಸೇರ್ಪಡೆ
IPL Auction: ಸಂಪೂರ್ಣ ಐಪಿಎಲ್ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
Bhairathi Ranagal Review: ರೋಣಾಪುರದ ರಣಬೇಟೆಗಾರ
Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.