ಹೆಚ್ಚಿನ ಶುಲ್ಕ ಸಂಗ್ರಹಕ್ಕೆ ವಿರೋಧ
Team Udayavani, Jul 6, 2018, 2:47 PM IST
ವಿಜಯಪುರ: ನಗರದಲ್ಲಿರುವ ಸರಕಾರಿ ಐಟಿಐ ಕಾಲೇಜಿನಲ್ಲಿ ಪ್ರಚಾರ್ಯರೇ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ಅನುತ್ತೀರ್ಣ ಮಾಡುವ ಬೆದರಿಕೆ ಹಾಕಿ ಹಣ ಸುಲಿಗೆ ಮಾಡಲಾಗುತ್ತಿರುವ ಪ್ರಾಚಾರ್ಯರ ಅಮಾನತಿಗೆ ಆಗ್ರಹಿಸಿ ವಿದ್ಯಾರ್ಥಿಗಳು ಎಬಿವಿಪಿ ನೇತೃತ್ವದಲ್ಲಿ ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು.
ಗುರುವಾರ ಐಟಿಐ ಕಾಲೇಜಿನ ವಿದ್ಯಾರ್ಥಿಗಳು ಎಬಿವಿಪಿ ನೇತೃತ್ವದಲ್ಲಿ ಕಾಲೇಜಿನ ಎದುರು ಪ್ರತಿಭಟನೆ ನಡೆಸಿದ
ವಿದ್ಯಾರ್ಥಿಗಳು, ಪ್ರಾಚಾರ್ಯರ ವಿರುದ್ಧ ಧಿಕ್ಕಾರ ಕೂಗಿದರು. ಪ್ರಾಚಾರ್ಯರು ಪರೀಕ್ಷೆಯಲ್ಲಿ ಉತ್ತೀರ್ಣ ಮಾಡುವ ಭರವಸೆ ನೀಡಿ ಒತ್ತಾಯದಿಂದ ಪ್ರತಿ ವಿದ್ಯಾರ್ಥಿಗಳಿಂದ 1500 ಪಡೆದಿದ್ದಾರೆ. ಹಣ ನೀಡದ ವಿದ್ಯಾರ್ಥಿಗಳನ್ನು ಅನುತ್ತೀರ್ಣ ಮಾಡುವ ಬೆದರಿಕೆ ಹಾಕುತ್ತಿದ್ದಾರೆ. ಮತ್ತೂಂದೆಡೆ ಇಡೀ ಕಾಲೇಜು ಅವ್ಯವಸ್ಥೆ ಆಗರವಾಗಿದೆ.
ಕಾಲೇಜಿನಲ್ಲಿ ಮೂಲ ಸೌಲಭ್ಯಗಳಿಲ್ಲದೇ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ. ಹೀಗಾಗಿ ಕೂಡಲೇ ಪ್ರಾಚಾರ್ಯರನ್ನು
ಅಮಾನತುಗೊಳಿಸಬೇಕೆಂದು ಆಗ್ರಹಿಸಿ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಎಬಿವಿಪಿ ವಿಭಾಗ ಸಂಘಟನಾ ಕಾರ್ಯದರ್ಶಿ ಪೃಥ್ವಿಕುಮಾರ, ಪ್ರಾಚಾರ್ಯರು
ವಿದ್ಯಾರ್ಥಿಗಳಿಗೆ ಬೆದರಿಕೆಯೊಡ್ಡಿ ಪ್ರತಿ ವಿದ್ಯಾರ್ಥಿಯಿಂದ 1500 ರೂ. ಸುಲಿಗೆ ಮಾಡುತ್ತಿದ್ದಾರೆ. ಕಾಲೇಜಿನಲ್ಲಿ 600ಕ್ಕೂ ಅಧಿಕ ವಿದ್ಯಾರ್ಥಿಗಳಿದ್ದು, ಸುಮಾರು 9 ಲಕ್ಷ ರೂ. ಅಕ್ರಮ ಹಣ ಪಡೆದಿದ್ದಾರೆ. ವಿದ್ಯಾರ್ಥಿಗಳಿಂದ ಪರೀಕ್ಷೆಗಳಲ್ಲಿ ಪ್ರತಿಯೊಬ್ಬರಿಂದ 3 ಸಾವಿರ ರೂ. ನೀಡಲು ಬಲವಂತದ ಬೇಡಿಕೆ ಇಟ್ಟಿದ್ದಾರೆ.
ಹೀಗಾಗಿ ಪ್ರಾಚಾರ್ಯರ ಭ್ರಷ್ಟಾಚಾರದ ವಿರುದ್ಧ ಉನ್ನತಮಟ್ಟದ ತನಿಖೆ ಆಗಬೇಕು. ಅಲ್ಲಿಯವರೆಗೆ ಅವರನ್ನು ಅಮಾನತು ಮಾಡಬೇಕು ಎಂದು ಆಗ್ರಹಿಸಿದರು. ನಗರ ಕಾರ್ಯದರ್ಶಿ ಸಚಿನ ಬಾಗೇವಾಡಿ, ಬಸವರಾಜ ಪೂಜಾರಿ, ಸಿದ್ದು ಜಂಬಗಿ, ಅರವಿಂದ ರಾಠೊಡ, ಸಂಗಮೇಶ ಅವಟಿ, ವಿಷ್ಣು ರಾಠೊಡ, ಪ್ರಶಾಂತ ಕಟ್ಟಿಮನಿ, ಕಾರ್ತಿಕ ಮುಚ್ಚಂಡಿ, ಪರಮೇಶ್ವರ ನಾಯ್ಕೋಡಿ ನೇತ್ರತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.