ಭೂಕಾಯ್ದೆ ತಿದ್ದುಪಡಿಗೆ ವಿರೋಧ
Team Udayavani, Jul 24, 2020, 10:30 AM IST
ವಿಜಯಪುರ: ರಾಷ್ಟ್ರೀಯ ಸಂಘಟನೆ ಕೃಷಿಕ್ ಖೆತ್ ಮಜ್ದೂರ್ ಸಂಘಟನೆ ಕರೆ ಮೇರೆಗೆ ಗುರುವಾರ ರೈತ, ಕೃಷಿ, ಕಾರ್ಮಿಕರ ಸಂಘಟನೆ ಕಾರ್ಯಕರ್ತರು ಅಖೀಲ ಭಾರತ ಪ್ರತಿಭಟನಾ ದಿನದ ಅಂಗವಾಗಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಈ ವೇಳೆ ಸಂಘಟನೆ ರಾಜ್ಯ ಉಪಾದ್ಯಕ್ಷ ಬಿ.ಭಗವಾನರೆಡ್ಡಿ ಮಾತನಾಡಿ, ದೇಶಾದ್ಯಂತ ಕೋವಿಡ್ ಸಾಂಕ್ರಾಮಿಕ ರೋಗ ಹರಡಿರುವ ದುಸ್ಥಿತಿ ಸಂದರ್ಭದಲ್ಲಿ ರೈತರು ಜೀವನ ನಿರ್ವಹಣೆಗೆ ಪರದಾಡುತ್ತಿದ್ದಾರೆ. ಇಂಥ ಸಂಕಷ್ಟದ ಸಂದರ್ಭದಲ್ಲಿ ಕೇಂದ್ರದ ಬಿಜೆಪಿ ಸರ್ಕಾರ ಲಾಕ್‌ಡೌನ್ ದುರ್ಲಾಭ ಪಡೆಯಲು ಮುಂದಾಗಿದೆ. ಅಸ್ತಿತ್ವದಲ್ಲಿರುವ ಅಗತ್ಯ ಸರಕುಗಳ ಕಾಯ್ದೆ, 1955ಕ್ಕೆ ಕೆಲವೊಂದು ತಿದ್ದುಪಡಿಗಳನ್ನು ತಂದಿದೆ. ಜೊತೆಗೆ ರೈತರ ಉತ್ಪನ್ನದ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಸುಗ್ರೀವಾಜ್ಞೆ ಕಾಯ್ದೆ 2020, ಬೆಲೆಗಳು ಮತ್ತು ಕೃಷಿ ಸೇವೆಗಳ ಕುರಿತು ರೈತರ ಒಪ್ಪಂದ (ಸಬಲೀಕರಣ ಮತ್ತು ಸಂರಕ್ಷಣೆ) ಆರ್ಡಿನೆನ್ಸ್, 2020ನ್ನು ಜಾರಿಗೊಳಿಸಿ ಕೃಷಿ ಹಾಗೂ ಜನ ವಿರೋಧಿ ಕ್ರಮಕ್ಕೆ ಮುಂದಾಗಿದೆ ಎಂದು ದೂರಿದರು.
ಆರ್ಥಿಕ ಅಭಿವೃದ್ಧಿ ಹೆಸರಿನಲ್ಲಿ ಕೇಂದ್ರ
ಸರ್ಕಾರ ಅಗತ್ಯ ಸರಕುಗಳ ಕಾಯ್ದೆ-1955 ಅಕ್ಕಿ, ಗೋಧಿ , ಧಾನ್ಯಗಳು (ಸೀರಿಯಲ್ಸ್), ಆಲೂಗಡ್ಡೆ, ಈರುಳ್ಳಿ ಮತ್ತು ಬೇಳೆ ಕಾಳುಗಳಂಥ ಅಗತ್ಯ ಸರಕುಗಳ ಪಟ್ಟಿಯಿಂದ ತೆಗೆದು ಹಾಕಿ ತಿದ್ದುಪಡಿ ಮಾಡಿದೆ. ಇದು ಕಾಳ ಸಂತೆಕೋರರಿಗೆ, ದೊಡ್ಡ ವ್ಯಾಪಾರಿ ಸಂಸ್ಥೆಗಳಿಗೆ. ಈ ವಸ್ತುಗಳನ್ನು ದಾಸ್ತನು ಮಾಡಿ ಗರಿಷ್ಠ ಲಾಭ ಗಳಿಸಲು ದಾರಿ ಮಾಡಿಕೊಡುತ್ತದೆ. ಇದು ಅಗತ್ಯ ಸರಕುಗಳ ಕಾಳಸಂತೆ ಹಾಗೂ ಬೆಲೆಗಳು ಹೆಚ್ಚಳಕ್ಕೆ ಕಾರಣವಾಗಲಿದೆ. ಸರ್ಕಾರ ಕೂಡಲೇ ಇದರಿಂದ ಹಿಂದೆ ಸರಿಯಬೇಕು ಎಂದು ಆಗ್ರಹಿಸಿದರು.
ಆರ್‌ಕೆಎಸ್ ಸಂಘಟಕ ಮಹಾದೇವ ಲಿಗಾಡೆ, ಆಕಾಶ ಪಾಟೀಲ, ತಿಪರಾಯ ಹತ್ತರಕಿ, ಪ್ರಕಾಶ ಕಿಲಾರೆ, ವಿಶ್ವನಾಥ ನರಳೆ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Data Theft: ಕಂಪನಿಯ ಡೇಟಾ ಕದ್ದು 12.5 ಕೋಟಿ ವಂಚನೆ ಮಾಡಿದ ಬ್ಯಾಂಕ್ ಮ್ಯಾನೇಜರ್!
Out of Syllabus Review; ಪ್ರೇಮಿಗಳಿಗೆ ಹೊಸ ಸಿಲೆಬಸ್
INDvAUS; ಇತಿಹಾಸದಲ್ಲೇ ಮೊದಲ ಬಾರಿಗೆ…: 200 ವಿಕೆಟ್ ನೊಂದಿಗೆ ಹೊಸ ದಾಖಲೆ ಬರೆದ ಬುಮ್ರಾ
Aranthodu: ಉಡುಪಿಗೆ ಭತ್ತದ ಲೋಡ್ ಸಾಗಿಸುತ್ತಿದ್ದ ವೇಳೆ ಲಾರಿಗೆ ಆಕಸ್ಮಿಕ ಬೆಂಕಿ
Anandapura: ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.