ನಮ್ಮದು ಕಾಯಕದಲ್ಲಿ ದೇವರನ್ನು ಕಂಡ ನಾಡು
Team Udayavani, Dec 6, 2021, 4:11 PM IST
ಮೋರಟಗಿ: ಶರಣರು-ಸತ್ಪುರುಷರು ನಡೆದಾಡಿದ ನಾಡು ನಮ್ಮದು. ನಮ್ಮ ದೇಶದ ಸಂಸ್ಕೃತಿ ವಿಶ್ವವೇ ಮೆಚ್ಚವಂಥದ್ದು. ನಾಡಿನಲ್ಲಿ ಶರಣರು ತಮ್ಮ ಕಾಯಕದ ಮೂಲಕ ಕೈಲಾಸ ಕಂಡು ಪರಮಾತ್ಮನನ್ನೇ ಧರೆಗಿಳಿಸಿದ್ದಾರೆ ಎಂದು ಶಾಸಕ ರಮೇಶ ಭೂಸನೂರ ಹೇಳಿದರು.
ಗ್ರಾಮದಲ್ಲಿ ಶ್ರೀ ವೀರಭದ್ರೇಶ್ವರ ಜಾತ್ರೋತ್ಸವ ನಿಮಿತ್ತ ಹಮ್ಮಿಕೊಂಡಿದ್ದ ಮೌನೇಶ್ವರ ಪುರಾಣ ಕಾರ್ಯಕ್ರಮದಲ್ಲಿ ಜ್ಯೋತಿ ಬೆಳಗಿಸಿ ಅವರು ಮಾತನಾಡಿದರು.
ಪರಮಾತ್ಮ ಕಣ್ಣಿಗೆ ಕಾಣಲ್ಲ. ಆದರೆ ನಿಮ್ಮ ಕಾಯಾ-ವಾಚಾ-ಮನಸಾ ಶುದ್ಧವಿಟ್ಟುಕೊಂಡು ತನು-ಮನ-ಧನದಿಂದ ಜೀವನ ಸಾಗಿಸಿದರೆ ನಿಮ್ಮ ಕಾಯಕದಲ್ಲಿ ದೇವರು ಕಾಣಿಸುತ್ತಾನೆ. ಇತ್ತೀಚಿನ ದಿನಗಳಲ್ಲಿ ಕೊಲೆ, ಸುಲಿಗೆ, ದರೋಡೆ, ಅತ್ಯಾಚಾರ ಪ್ರಕರಣಗಳು ದಿನೇ ದಿನೇ ಹೆಚ್ಚಾಗಿ ನಡೆಯುತ್ತಿವೆ. ಯುವಕರು ಶರಣರು-ಸಂತರ ಪುರಾಣ, ಕೀರ್ತನೆ, ಸಂಸಾರಿಕ ನಾಟಕ ನೋಡಬೇಕು. ಈ ಮೂಲಕ ಉತ್ತಮ ಮೌಲಿಕ ಸಂದೇಶ ಅಳವಡಿಸಿಕೊಂಡರೆ ಸುಂದರ ಜೀವನ ಸಾಗಿಸಲು ಸಾಧ್ಯ ಎಂದರು.
ಇತ್ತೀಚಿನ ದಿನಗಳಲ್ಲಿ ನಡೆಯುವ ಹೇಯ ಕೃತ್ಯಗಳಿಗೆ ಕಡಿವಾಣ ಹಾಕಬೇಕು. ಹಿಂದಿನ ಅಧಿಕಾರವಧಿಯಲ್ಲಿ ವೀರಭದ್ರೇಶ್ವರ ದೇವಸ್ಥಾನದ ನವೀಕರಣಕ್ಕೆ ಸ್ಪಂದಿಸಿದ್ದೆ. ಈಗ ಭವ್ಯ ದೇಗುಲವಾಗಿ ಕಾರ್ಯಕ್ರಮ ಜರುಗುತ್ತಿರುವುದು ಸಂತೋಷ ತಂದಿದೆ. ಕಳೆದ 15 ದಿನಗಳ ಹಿಂದೆ ಸಿದ್ದರಾಮೇಶ್ವರ ಜಾತ್ರೆ ಕಾರ್ಯಕ್ರಮದಲ್ಲಿ ಭಗವಹಿಸಿದ್ದಾಗ ಅನೇಕ ಮನವಿಗಳು ಬಂದಿವೆ. ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿ ಇರುವುದರಿಂದ ಯಾವುದೇ ಆಶ್ವಾಸನೆ ನೀಡಿರಲಿಲ್ಲ. ಮಾರ್ಚ್ ತಿಂಗಳ ಅಂತ್ಯದಲ್ಲಿ ಸಿದ್ಧರಾಮೇಶ್ವರ ದೇವಸ್ಥಾನ ಅಭಿವೃದ್ಧಿಪಡಿಸುವ ಜೊತೆಗೆ ಗ್ರಾಮಕ್ಕೆ ಮೂಲ ಸೌಲಭ್ಯ ಒದಗಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.
ಈ ಸಂದರ್ಭದಲ್ಲಿ ಸೊನ್ನ ದಾಸೋಹ ಮಠದ ಡಾ| ಶಿವಾನಂದ ಸ್ವಾಮೀಜಿ, ಸಿಂದಗಿ ಬಿಜೆಪಿ ಮಂಡಲ ಅಧ್ಯಕ್ಷ ಈರಣ್ಣ ರಾವೂರ, ನಿಂಗನಗೌಡ ಪಾಟೀಲ, ಗುರುಪಾದಪ್ಪ ನೆಲ್ಲಗಿ, ಸಿದ್ದನಗೌಡ ಗುತ್ತರಗಿ, ಶಿವರಾಯ ಹಿಪ್ಪರಗಿ, ರೇವಣಸಿದ್ದ ಮಸಳಿ, ಪ್ರಕಾಶ ಅಡಗಲ್ಲ, ಡಾ| ರಾಜಶೇಖರ ಪತ್ತಾರ, ಡಾ| ಆರ್.ಬಿ. ಕುಲಕರ್ಣಿ, ಸಂತೋಷ ಶಾಬಾದಿ, ಶರಣು ಕೋಳಕೂರ, ಮುರುಗೇಂದ್ರ ಕೋರಿ, ಭೂತಾಳಿ ಖಾನಾಪೂರ, ವಿದ್ಯಾಧರ ಮಳಗಿ, ಶ್ರೀಶೈಲ ಅಣಬಸ್ಟಿ ಸೇರಿದಂತೆ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು
ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು
ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Bidar; ಗುತ್ತಿಗೆದಾರ ಸಚಿನ್ ಕೇಸ್; ತನಿಖೆ ಆರಂಭಿಸಿದ ಸಿಐಡಿ ತಂಡ
Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.