ಕೃಷಿ ಮಂತ್ರಿ ಸ್ವಾಗತಕ್ಕೆ ಸಜ್ಜು; ರೈತರೊಂದಿಗೆ ಬಿ.ಸಿ. ಪಾಟೀಲ ಸಂವಾದ

ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆಯವರು ಕೃಷಿ ವಸ್ತು ಪ್ರದರ್ಶನ ಉದ್ಘಾಟಿಸುವರು.

Team Udayavani, Feb 23, 2021, 1:04 PM IST

ಕೃಷಿ ಮಂತ್ರಿ ಸ್ವಾಗತಕ್ಕೆ ಸಜ್ಜು; ರೈತರೊಂದಿಗೆ ಬಿ.ಸಿ. ಪಾಟೀಲ ಸಂವಾದ

ಮುದ್ದೇಬಿಹಾಳ: ಮೊದಲ ಬಾರಿಗೆ ತಾಲೂಕಿಗೆ ಆಗಮಿಸುತ್ತಿರುವ ಕೃಷಿ ಸಚಿವ ಬಿ.ಸಿ. ಪಾಟೀಲರನ್ನು ಸ್ವಾಗತಿಸಲು ರೈತರು, ಬಿಜೆಪಿ ಕಾರ್ಯಕರ್ತರು ತುದಿಗಾಲಲ್ಲಿ ನಿಂತಿದ್ದಾರೆ. ಸರ್ಕಾರದ ಹೊಸ ಯೋಜನೆಯಂತೆ ರೈತರೊಂದಿಗೊಂದು ದಿನ ಸಂವಾದಕ್ಕಾಗಿ ಪ್ರಗತಿಪರ ರೈತರೊಬ್ಬರ ಜಮೀನಿನಲ್ಲಿ ವಾಸ್ತವ್ಯ ಮಾಡಿ ರೈತರೊಂದಿಗೆ ಸಮಾಲೋಚನೆ, ಸಂವಾದ ನಡೆಸಲಿರುವ ಸಚಿವರಿಗಾಗಿ ಕವಡಿಮಟ್ಟಿ ಗ್ರಾಮದ ಡಿಸಿಸಿ ಬ್ಯಾಂಕ್‌ ನಿರ್ದೇಶಕ ಸೋಮನಗೌಡ ಬಿರಾದಾರ ಅವರ ಹೊಲದಲ್ಲಿ ಬೃಹತ್‌ ವೇದಿಕೆ ಮತ್ತು ಕೃಷಿ ಸ್ಟಾಲ್‌ಗ‌ಳಿಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಸಾವಿರಾರು ರೈತರು ಕಾರ್ಯಕ್ರಮಕ್ಕೆ ಆಗಮಿಸಲಿರುವ ಹಿನ್ನೆಲೆ ಕವಡಿಮಟ್ಟಿ ಗ್ರಾಮದಲ್ಲಿ ಹಬ್ಬದ ವಾತಾವರಣ ಮನೆ ಮಾಡಿದೆ. ರಸ್ತೆ ಇಕ್ಕೆಲಗಳಲ್ಲಿ ಫ್ಲೆಕ್ಸ್‌, ಬ್ಯಾನರ್‌ ಅಳವಡಿಸಿ ಸ್ವಾಗತ ಕೋರಲು ವ್ಯವಸ್ಥೆ ಮಾಡಲಾಗಿದೆ. ಸ್ಥಳೀಯ ಗ್ರಾಪಂ ನೂತನ ಆಡಳಿತ ಮಂಡಳಿಯಂತೂ ತುಂಬಾ ಹುಮ್ಮಸ್ಸಿನಿಂದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ತಮ್ಮೂರನ್ನು ರಾಜ್ಯವ್ಯಾಪ್ತಿ ಪ್ರಸಿದ್ಧಗೊಳಿಸಲು ಕಾತುರರಾಗಿದ್ದಾರೆ.

ಸೋಮವಾರ ರಾತ್ರಿ ಆಲಮಟ್ಟಿ ಪ್ರವಾಸಿ ಮಂದಿರದಲ್ಲಿ ವಾಸ್ತವ್ಯ ಮಾಡಿ ಮಂಗಳವಾರ ಬೆಳಗ್ಗೆ ಬಸರಕೋಡದ ಪ್ರಗತಿಪರ ರೈತ, ಬಿಜೆಪಿ ಹಿರಿಯ ಧುರೀಣ ಹೇಮರಡ್ಡಿ ಮೇಟಿ ಅವರ ತೋಟಕ್ಕೆ ಭೇಟಿ ನೀಡಿ ಅಲ್ಲಿರುವ ದ್ರಾಕ್ಷಿ, ಮೆಣಸಿನಕಾಯಿ ಸೇರಿದಂತೆ ಹಲವು ಉತ್ಪನ್ನಗಳನ್ನು ಪರಿಶೀಲಿಸುವ ಸಚಿವರು ಕೆಲಹೊತ್ತು ಅಲ್ಲೇ ಇರಲಿದ್ದಾರೆ.

ಕೃಷಿ ವಸ್ತು ಪ್ರದರ್ಶನ: ಕೃಷಿ ವಸ್ತು ಪ್ರದರ್ಶನದಲ್ಲಿ ಒಟ್ಟು 30 ಸ್ಟಾಲ್‌ ಹಾಕಲಾಗಿದೆ. ತೋಟಗಾರಿಕೆ, ರೇಷ್ಮೆ, ಮೀನುಗಾರಿಕೆ, ಬ್ಯಾಂಕಿಂಗ್‌, ರಸಗೊಬ್ಬರ,
ಕೀಟನಾಶಕ, ಬೀಜ, ಸಬ್ಸಿಡಿ ಕೃಷಿ ಉಪಕರಣಗಳ ಪ್ರದರ್ಶನ ನಡೆಯಲಿದೆ. ಸಮಯಾವಕಾಶ ಇದ್ದರೆ ಕೃಷಿ ಇಲಾಖೆಯ ಸಬ್ಸಿಡಿ ಯೋಜನೆಯಡಿ ಮಂಜೂರಾದ ಕೃಷಿ ಉಪಕರಣಗಳನ್ನು ಫಲಾನುಭವಿಗಳಿಗೆ ವಿತರಿಸಲು ಕೃಷಿ ಇಲಾಖೆ ಸಿದ್ಧತೆ ಮಾಡಿಕೊಂಡಿದೆ.

ಕಾರ್ಯಕ್ರಮ: ಮಧ್ಯಾಹ್ನ 1:30ಕ್ಕೆ ಕವಡಿಮಟ್ಟಿಗೆ ಆಗಮಿಸುವ ಸಚಿವರು ರೈತರೊಂದಿಗೊಂದು ದಿನ ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾ ಉಸ್ತುವಾರಿ
ಸಚಿವೆ ಶಶಿಕಲಾ ಜೊಲ್ಲೆಯವರು ಕೃಷಿ ವಸ್ತು ಪ್ರದರ್ಶನ ಉದ್ಘಾಟಿಸುವರು. ಶಾಸಕ, ಕರ್ನಾಟಕ ಆಹಾರ ನಿಗಮದ ಅಧ್ಯಕ್ಷ ಎ.ಎಸ್‌. ಪಾಟೀಲ ನಡಹಳ್ಳಿ ಅಧ್ಯಕ್ಷತೆ ವಹಿಸುವರು. ಸಂಸದ ರಮೇಶ ಜಿಗಜಿಣಗಿ ಹಸ್ತಪ್ರತಿ ಬಿಡುಗಡೆಗೊಳಿಸುವರು.

ವಿಧಾನ ಪರಿಷತ್‌ ವಿಪಕ್ಷ ನಾಯಕ ಎಸ್‌.ಆರ್‌. ಪಾಟೀಲ, ಜಿಪಂ ಅಧ್ಯಕ್ಷೆ ಸುಜಾತಾ ಕಳ್ಳಿಮನಿ, ಶಾಸಕರಾದ ಎಂ.ಬಿ. ಪಾಟೀಲ, ಶಿವಾನಂದ ಪಾಟೀಲ, ಬಸನಗೌಡ ಪಾಟೀಲ ಯತ್ನಾಳ, ಯಶವಂತರಾಯಗೌಡ ಪಾಟೀಲ, ಡಾ| ದೇವಾನಂದ ಚವ್ಹಾಣ, ಸೋಮನಗೌಡ ಪಾಟೀಲ, ಎಂಎಲ್‌ ಸಿಗಳಾದ ಅರುಣ ಶಹಾಪುರ, ಪ್ರಕಾಶ ರಾಠೊಡ, ಹನುಮಂತ ನಿರಾಣಿ, ಸುನೀಲಗೌಡ ಪಾಟೀಲ, ಬೀಜ ಸಾವಯವ ಪ್ರಮಾಣನ ಸಂಸ್ಥೆ ಅಧ್ಯಕ್ಷ ವಿಜುಗೌಡ ಪಾಟೀಲ, ಲಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಶೋಕ ಅಲ್ಲಾಪುರ, ಜಿಪಂ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ, ಜಿಪಂ ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷೆ ಪ್ರತಿಭಾ ಪಾಟೀಲ, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಬಿ.ಎಲ್‌. ಪಾಟೀಲ, ತಾಪಂ ಅಧ್ಯಕ್ಷೆ ಲಕ್ಷ್ಮೀಬಾಯಿ ಹವಾಲ್ದಾರ್‌, ತಾಪಂ ಉಪಾಧ್ಯಕ್ಷ ಮಂಜುನಾಥಗೌಡ ಪಾಟೀಲ, ಜಿಪಂ ಸದಸ್ಯೆ ಪದ್ಮಾವತಿ ವಾಲೀಕಾರ, ತಾಪಂ ಸದಸ್ಯೆ ಕಸ್ತೂರಿಬಾಯಿ ಗುಳಬಾಳ, ಕವಡಿಮಟ್ಟಿ ಗ್ರಾಪಂ ಅಧ್ಯಕ್ಷ ಸಿದ್ರಾಮಯ್ಯ ಗುರುವಿನ್‌ ಮುಖ್ಯ
ಅತಿಥಿಗಳಾಗಿ ಆಗಮಿಸುವರು. ಕೃಷಿ ಇಲಾಖೆ ರಾಜ್ಯ, ಜಿಲ್ಲಾ ಮಟ್ಟದ ಅಧಿ ಕಾರಿಗಳು, ಕೃಷಿ ವಿವಿಯ ಉಪ ಕುಲಪತಿ ಡಾ| ಎಂ.ಬಿ. ಚೆಟ್ಟಿ ಸೇರಿ ಹಲವರು ವಿಶೇಷ ಆಹ್ವಾನಿತರಾಗಿ ಆಗಮಿಸುವರು.

ಶಾಸಕರಿಂದ ಮನವಿ
ಕೃಷಿ ಸಚಿವರ ಕಾರ್ಯಕ್ರಮಕ್ಕೆ ತಾಲೂಕಿನ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ಈ ವೇಳೆ ರೈತ ಪರ ಬೇಡಿಕೆಗಳ ಮನವಿಯನ್ನು ಸಚಿವರಿಗೆ ಸಲ್ಲಿಸಿ ಈಡೇರಿಸುವಂತೆ ಮನವಿ ಮಾಡಿಕೊಳ್ಳಲಾಗುತ್ತದೆ. ರೈತರು ಈ ಅವಕಾಶದ ಸದ್ಭಳಕೆ ಮಾಡಿಕೊಳ್ಳಬೇಕು ಎಂದು ಶಾಸಕ, ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧ್ಯಕ್ಷ ಎ.ಎಸ್‌. ಪಾಟೀಲ ನಡಹಳ್ಳಿ ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

1-wewq

Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arrested

Vijayapura; ವಿದ್ಯಾರ್ಥಿನಿಯರಿಗೆ ಲೈಂಗಿ*ಕ ಕಿರುಕುಳ: ಸರಕಾರಿ ಕಾಲೇಜು ಪ್ರಾಂಶುಪಾಲ ಸೆರೆ

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು

ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು

ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು

ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು

Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ

Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

1-wewq

Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ

1

Kasaragod: ಬಟ್ಟಿಪದವು; ಪ್ಲೈವುಡ್‌ ಮಿಲ್ಲಿಗೆ ಬೆಂಕಿ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.