ಹೆಚ್ಚಿನ ದರದಲ್ಲಿ ರಸಗೊಬ್ಬರ ಮಾರಾಟಕ್ಕೆ ಆಕ್ರೋಶ
Team Udayavani, Jul 23, 2022, 5:57 PM IST
ವಿಜಯಪುರ: ಜಿಲ್ಲೆಯಲ್ಲಿ ಬಿತ್ತನೆ ಬೀಜ, ಗೊಬ್ಬರ ಬೆಲೆ ಹೆಚ್ಚಿನ ದರಕ್ಕೆ ಮಾರಾಟ ಮಾಡುವುದನ್ನು ನಿಯಂತ್ರಿಸಬೇಕು ಎಂದು ಆಗ್ರಹಿಸಿ ಅಖಂಡ ಕರ್ನಾಟಕ ರೈತ ಸಂಘದಿಂದ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.
ಶುಕ್ರವಾರ ಜಿಲ್ಲಾಧಿಕಾರಿ ಡಾ| ವಿ.ಬಿ.ದಾನಮ್ಮನವರ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದ ಸಂಘಟನೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ, ಜಿಲ್ಲೆಯಲ್ಲಿ ಬಿತ್ತನೆ ಬೀಜ ಹಾಗೂ ಗೊಬ್ಬರ ಬೆಲೆ ಗಗನಕ್ಕೆ ಏರಿಸಲಾಗಿದೆ. ವ್ಯಾಪಾರಿಗಳು ಸರ್ಕಾರ ನಿಗದಿ ಮಾಡಿರುವ ದರಕ್ಕೆ ಬದಲಾಗಿ ಪ್ರತಿ ಚೀಲ ಡಿಎಪಿಗೆ 1800 ರೂ. ಮಾರಾಟ ಮಾಡಲಾಗುತ್ತದೆ. ಯುರಿಯಾ ಗೊಬ್ಬರವನ್ನು 266ರೂ. ಹೆಚ್ಚು ದರಕ್ಕೆ ಮಾರಲಾಗುತ್ತಿದೆ. ಇದರಿಂದ ರೈತರು ಅನ್ಯಾಯವಾಗಿ ಹೆಚ್ಚಿನ ದರಕ್ಕೆ ರಸಗೊಬ್ಬರ ಖರೀದಿಸುವ ದುಸ್ಥಿತಿ ನಿರ್ಮಾಣವಾಗಿದೆ ಎಂದು ವಿವರಿಸಿದರು.
ಮಳೆ ಹಾಗೂ ಬಿತ್ತನೆ ಸಂದರ್ಭದಲ್ಲಿ ರೈತರ ಒತ್ತಡದ ಸಮಯ ದುರ್ಬಳಕೆ ಮಾಡಿಕೊಳ್ಳಲು ಮುಂದಾಗಿರುವ ಗೊಬ್ಬರ ವ್ಯಾಪಾರಿಗಳು, ಸರ್ಕಾರ ನಿಗದಿ ಮಾಡಿದ ದರಕ್ಕಿಂತ ಮನಸ್ಸಿಗೆ ಬಂದ ದರಕ್ಕೆ ರಸಗೊಬ್ಬರ ಮಾರಾಟ ಮಾಡುತ್ತಿದ್ದಾರೆ. ಕನಿಷ್ಟ ಪ್ರತಿ ಚೀಲ ರಸಗೊಬ್ಬರಕ್ಕೆ 150-200 ರೂ. ಹೆಚ್ಚಿನ ದರ ಪಡೆಯುತಿದ್ದಾರೆ ಎಂದು ಕಿಡಿ ಕಾರಿದರು.
ಈಗಾಗಲೇ ರೈತರು ಮಳೆ ಇಲ್ಲದೇ ಬರಗಾಲದಿಂದ ತತ್ತರಿಸಿದ್ದಾರೆ. ಮತ್ತೂಂದೆಡೆ ಬೆಳೆ ಹಾನಿಯಿಂದ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾನೆ. ಇಂಥ ಸಂದರ್ಭದಲ್ಲಿ ಸರ್ಕಾರ ಬಿತ್ತನೆ ಬೀಜ ಗೊಬ್ಬರ ಹೆಚ್ಚಿಗೆ ಮಾಡಿದ ರೀತಿ ರೈತರು ಬೆಳೆದ ಬೆಳೆಗಳಿಗೆ ತಕ್ಕ ಬೆಲೆಯನ್ನೂ ನೀಡತ್ತಿಲ್ಲ. ಇಂಥ ದುಸ್ಥಿತಿಯ ಪರಿಸ್ಥಿತಿಯಲ್ಲಿ ಅಕ್ರಮವಾಗಿ ಹೆಚ್ಚಿನ ದರಕ್ಕೆ ರಸಗೊಬ್ಬರ ಖರೀದಿಸುವ ಸಂಕಷ್ಟ ಎದುರಾಗಿದೆ. ಕೂಡಲೇ ಜಿಲ್ಲಾಡಳಿತ ಈ ಅನ್ಯಾಯದ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಇದಲ್ಲದೇ ಜಮೀನಿಗೆ ಬೀಜ ಬಿತ್ತನೆ ಮಾಡುವ ಹಂತದಿಂದ ಬೆಳೆ ಕಟಾವಾಗಿ ರೈತನ ಮನೆ ಸೇರುವವರೆಗೆ ರೈತ ಎದುರಿಸುವ ಸಂಕಷ್ಟಗಳು, ಆರ್ಥಿಕ ಸಮಸ್ಯೆ ಅಷ್ಟಿಷ್ಟಲ್ಲ. ಹೀಗಾಗಿ ಬಿತ್ತನೆಯಿಂದ ಕಟಾವಿನವರೆಗೆ ಕೃಷಿಗೆ ತಗಲುವ ಎಲ್ಲ ಖರ್ಚು-ವೆಚ್ಚಗಳನ್ನು ಪರಿಗಣಿಸಿ ಸರ್ಕಾರ ಎಲ್ಲ ಬೆಳೆಗಳಿಗೆ ಬೆಲೆ ನಿಗದಿ ಮಾಡಬೇಕು ಎಂದು ಆಗ್ರಹಿಸಿದರು.
ರೈತ ಮುಖಂಡ ಹೊನಕೇರಪ್ಪ ತೆಲಗಿ ಮಾತನಾಡಿ, ರೈತ ಕುಲ ಉಳಿವಿಗಾಗಿ ಡಾ| ಎಂ.ಎಸ್. ಸ್ವಾಮಿನಾಥನ್ ವರದಿಯನ್ನು ಸರ್ಕಾರ ಜಾರಿಗೆ ತರಬೇಕು. ಇದರಿಂದ ರೈತರ ಆತ್ಮಹತ್ಯೆ ತಡೆಗಟ್ಟಲು ಸಾಧ್ಯವಿದೆ. ಆದ್ದರಿಂದ ಶೀಘ್ರದಲ್ಲಿ ಕ್ರಮ ಕೈಗೊಳ್ಳಬೇಕು. ಸರ್ಕಾರ ನಿಗಪಡಿಸಿದ ದರ ಪಟ್ಟಿಯನ್ನು ಪ್ರತಿಗೊಬ್ಬರ ಅಂಗಡಿ ಮುಂದೆ ದರಗಳ ಫಲಕ ಹಾಕಬೇಕು ಎಂದು ಆಗ್ರಹಿಸಿದರು. ಬಾಲಪ್ಪಗೌಡ ಲಿಂಗದಳ್ಳಿ, ಸಂಗನಗೌಡ ಕೊಳುರ, ಶೇಖಪ್ಪ ಕರಾಬಿ, ಬಾಲಪ್ಪಗೌಡ ಲಿಂಗದಳ್ಳಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Muddebihal: ಅರೆನಗ್ನಾವಸ್ಥೆಯಲ್ಲಿ ಅನಾಮಧೇಯ ಮಹಿಳೆಯ ಶವ ಪತ್ತೆ
Vijayapura: ವಕ್ಫ್ ಬೋರ್ಡ್ ವಿರುದ್ಧ ಪ್ರಧಾನಿಗೆ ಶಾಸಕ ಯತ್ನಾಳ್ ಪತ್ರ
CHANAKYA CAREER ACADEMY: ಚಾಣಕ್ಯ ಯುವ ಭವಿಷ್ಯಕ್ಕೆ ಭದ್ರ ಬುನಾದಿ
Waqf issue: ಎಲ್ಲ ಪಹಣಿಯಲ್ಲೂ ವಕ್ಫ್ ಹೆಸರು ತೆಗೆಯಿರಿ: ಮುಲ್ಲಾ ಅಸೋಸಿಯೇಷನ್ ಆಗ್ರಹ
Tragedy: ಕೂಲಿ ಆಸೆಗೆ ತೆಂಗಿನ ಮರ ಏರಿದ್ದ ಅವಿವಾಹಿತ ಯುವಕ ಆಯತಪ್ಪಿ ಬಿದ್ದು ಮೃತ್ಯು
MUST WATCH
ಹೊಸ ಸೇರ್ಪಡೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
Shivaji Satam: ಕ್ಯಾಷಿಯರ್ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?
INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.