ಪ್ರಧಾನಿ ಮೋದಿ ವಿರುದ್ಧ ಪಾಟೀಲ ಕಿಡಿ


Team Udayavani, Apr 30, 2021, 4:19 PM IST

ಲಕಜಹಗ್ದಸ಻

ವಿಜಯಪುರ: ಪ್ರಧಾನಿ ನರೇಂದ್ರ ಮೋದಿ ಅವರು ದೇಶದಲ್ಲಿ ಕೋವಿಡ್‌ ಕೊರೊನಾ ಸೋಂಕಿತರಿಗೆ ತುರ್ತು ಅಗತ್ಯವಾಗಿರುವ ರೆಮ್‌ ಡೆಸಿವಿಯರ್‌ ಲಸಿಕೆ ಪೂರೈಕೆಯಲ್ಲಿ ಹಲವು ರಾಜ್ಯಗಳಿಗೆ, ಅದರಲ್ಲೂ ಕರ್ನಾಟಕಕ್ಕೆ ತಾರತಮ್ಯ ನೀತಿ ಅನುಸರಿಸುತ್ತಿದ್ದಾರೆ ಎಂದು ಮಾಜಿ ಸಚಿವ ಎಂ.ಬಿ. ಪಾಟೀಲ ದೂರಿದ್ದಾರೆ.

ಗುರುವಾರ ತಾವು ಅಧ್ಯಕ್ಷರಾಗಿರುವ ಬಿಎಲ್‌ಡಿಇ ಬಿ.ಎಂ. ಪಾಟೀಲ ವೈದ್ಯಕೀಯ ಕಾಲೇಜಿನ ಆಸ್ಪತ್ರೆಗೆ ಭೇಟಿ ನೀಡಿ ಹಿರಿಯ ವೈದ್ಯರೊಂದಿಗೆ ಸಮಾಲೋಚನೆ ನಡೆಸಿ ಚಿಕಿತ್ಸಾ ಸೌಲಭ್ಯ ಪರಿಶೀಲಿಸಿ ಮಾತನಾಡಿದ ಅವರು, ತಾರತಮ್ಯ ನಿವಾರಣೆ ಕುರಿತು ಪ್ರಧಾನಿ, ಕೇಂದ್ರ ಆರೋಗ್ಯ ಸಚಿವ, ಸಿ.ಎಂ, ರಾಜ್ಯದ ಆರೋಗ್ಯ ಸಚಿವರಿಗೆ ಟ್ವೀಟ್‌ ಮೂಲಕ ಗಮನ ಸೆಳೆಯುವುದಾಗಿ ಹೇಳಿದರು. ಕರ್ನಾಟಕದಲ್ಲಿ ಹೊಸದಾಗಿ 40 ಸಾವಿರ, ಛತ್ತೀಸಗಡ ರಾಜ್ಯದಲ್ಲಿ 15 ಸಾವಿರ, ಗುಜರಾತ್‌ 14 ಸಾವಿರ ಹೊಸ ಕೊರೊನಾ ಪ್ರಕರಣ ದಾಖಲಾಗಿವೆ. ಆದರೆ ಕೇಂದ್ರ ಸರ್ಕಾರ ರೆಮ್‌ ಡೆಸಿವಿಯರ್‌ ಪೂರೈಕೆಯಲ್ಲಿ ಏ. 21ರಿಂದ 30ರವರೆಗೆ 10 ದಿನಗಳ ಅವಧಿಗೆ ಗುಜರಾತ ರಾಜ್ಯಕ್ಕೆ 1,63,559, ಛತ್ತೀಸಗಡಕ್ಕೆ 48,250 ಲಸಿಕೆ ನೀಡಿದೆ.

ಕರ್ನಾಟಕಕ್ಕೆ ಕೇವಲ 25,352 ರೆಮ್‌ ಡೆಸಿವಿಯರ್‌ ಲಸಿಕೆ ನೀಡುವ ಮೂಲಕ ತಾರತಮ್ಯ ಮಾಡುತ್ತಿದೆ. ರೋಗಿಗಳ ಸಂಖ್ಯೆಗೆ ತಕ್ಕಂತೆ ಲಸಿಕೆ ನೀಡದೇ ಅನ್ಯಾಯ ಮಾಡಲಾಗುತ್ತಿದೆ ಎಂಬುದು ಸ್ಪಷ್ಟವಾಗಿದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಕೂಡಲೇ ಮಧ್ಯ ಪ್ರವೇಶಿಸಿ ಲಸಿಕೆ ತಾರತಮ್ಯ ನಿವಾರಿಸಬೇಕು ಎಂದು ಆಗ್ರಹಿಸಿದರು. ಅತಿ ಕಡಿಮೆ ಶುಲ್ಕ ಪಡೆದು ಹೆಚ್ಚಿನ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ಬಿಎಲ್‌ ಡಿಇ ಆಸ್ಪತ್ರೆಗೆ ನಿನ್ನೆ 382 ಇಂಜಕ್ಷನ್‌ಗಳು ಬಂದಿದ್ದು ಎಲ್ಲವೂ ಖಾಲಿಯಾಗಿವೆ.

ಇಂದು 482 ಇಂಜಕ್ಷನ್‌ಗಳು ಬಂದಿದ್ದು ರೋಗಿಗಳ ಸಂಖ್ಯೆಗೆ ಅನುಗುಣವಾಗಿ ಇಂಜಕ್ಷನ್‌ ನೀಡಲು ಆಗುತ್ತಿಲ್ಲ ಎಂದು ಅಸಹಾಯಕತೆ ವ್ಯಕ್ತಪಡಿಸಿದರು. ಬಿಎಲ್‌ಡಿಇ ಆಸತ್ರೆಯಲ್ಲಿ ಹೆಚ್ಚುತ್ತಿರುವ ರೋಗಿಗಳಿಗೆ ಆಕ್ಸಿಜನ್‌ ಪೂರೈಸಲು ಈಗಿರುವ 13 ಕೆಎಲ್‌ ಸಾಮರ್ಥಯದ ಘಟಕದೊಂದಿಗೆ ಇನ್ನೂ 13 ಕೆಎಲ್‌ ಸಾಮರ್ಥ್ಯದ ಘಟಕ ಸ್ಥಾಪನೆಗೆ ನಿರ್ಧರಿಸಲಾಗಿದೆ. ಈ ಕುರಿತು ಯುದೊœàಪಾದಿಯಲ್ಲಿ ಕೆಲಸ ಮುಗಿಸಿ ಬರುವ 15 ದಿನಗಳಲ್ಲಿ ನೂತನ ಘಟಕ ನಿರ್ಮಿಸಿ, ಜಿಲ್ಲೆಯಲ್ಲಿ ಆಕ್ಸಿಜನ್‌ ಕೊರತೆ ನೀಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ.

ಇದಲ್ಲದೇ ತುರ್ತಾಗಿ 100 ಜಂಬೋ ಆಕ್ಸಿಜನ್‌ ಸಿಲಿಂಡರ್‌ ತರಿಸಿ ಬಳಕೆ ಮಾಡಲಾಗುತ್ತಿದೆ ಎಂದರು. ಆಸ್ಪತ್ರೆಗೆ ನಿತ್ಯವೂ ಹೆಚ್ಚಿನ ರೋಗಿಗಳು ದಾಖಲಾಗಲು ಬರುತ್ತಿರುವರಲ್ಲಿ ರೋಗ ಇರುವ, ಅಗತ್ಯ ಇರುವವರಿಗೆ ಮಾತ್ರ ಒಳ ರೋಗಿಯಾಗಿ ದಾಖಲೆ ಮಾಡಬೇಕು. ಮನೆಯಲ್ಲಿ ಆರೈಕೆ ಅಗತ್ಯ ಇರುವವರನ್ನು ಆಸ್ಪತ್ರೆಗೆ ದಾಖಲಿಸದೇ ವೈದ್ಯಕೀಯ ಸಲಹೆ, ಚಿಕಿತ್ಸೆ, ಔಷಧಿ ನೀಡಬೇಕು. ಇದರಿಂದ ತುರ್ತು ಹಾಗೂ ಗಂಭೀರ ರೋಗಿಗಳಿಗೆ ಚಿಕಿತ್ಸೆ ನೀಡಿ ಜೀವ ರಕ್ಷಿಸಲು ನೆರವಾಗುತ್ತದೆ.

ಗಂಭೀರ ಸ್ವರೂಪದಲ್ಲಿ ದಾಖಲಾದ ರೋಗಿಗೆ ಚಿಕಿತ್ಸೆ ಬಳಿಕ ಆರೋಗ್ಯದಲ್ಲಿ ಸುಧಾರಣೆ ಕಂಡು ಬಂದಲ್ಲಿ ಡಿಸಾcರ್ಜ್‌ ಮಾಡಬೇಕು ಎಂದು ಸೂಚಿಸಿದರು. ಆಸ್ಪತ್ರೆಯಲ್ಲಿ ಹೆಚ್ಚುತ್ತಿರುವ ರೋಗಿಗಗಳ ಚಿಕಿತ್ಸೆಗೆ ಅನಕೂಲವಾಗಲು ಬಿಎಲ್‌ಡಿಇ ಸಂಸ್ಥೆ ನರ್ಸಿಂಗ್‌ ಹಾಗೂ ಫಾರ್ಮಸಿ ಕಾಲೇಜಿನ ನುರಿತ ಸಿಬ್ಬಂದಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳ ಸೇವೆ ಬಳಸಿಕೊಳ್ಳಲು ನಿರ್ಧರಿಸಲಾಯಿತು. ಗುಣಮುಖರಾದವರಿಗೆ ಆಸ್ಪತ್ರೆಯಲ್ಲೇ μàಜಿಯೋಥೆರಪಿ ಸೌಲಭ್ಯ ಒದಗಿಸಲಾಗುತ್ತಿದ್ದು, ಇದರಿಂದ ಉತ್ತಮ ಫಲಿತಾಂಶ ಕಂಡು ಬಂದಿದೆ ಎಂದು ಎಂ.ಬಿ. ಪಾಟೀಲ ಹೇಳಿದರು. ಬಿಎಲ್‌ಡಿಇ ವಿವಿ ಸಮ ಕುಲಪತಿ ಡಾ| ಆರ್‌.ಎಸ್‌. ಮುಧೋಳ, ಬಿ.ಎಂ. ಪಾಟೀಲ ವೈದ್ಯಕೀಯ ಕಾಲೇಜು ಪ್ರಾಚಾರ್ಯ ಡಾ| ಅರವಿಂದ ಪಾಟೀಲ, ಆಸ್ಪತ್ರೆ ಅಧಿಧೀಕ್ಷಕ ಡಾ| ರಾಜೇಶ ಹೊನ್ನುಟಗಿ, ರಿಜಿಸ್ಟಾರ್‌ ಡಾ| ಜೆ.ಜಿ. ಅಂಬೇಕರ್‌, ಸಂಸ್ಥೆ ಆಡಳಿತಾ ಧಿಕಾರಿ ಡಾ|ರಾಘವೇಂದ್ರ ಕುಲಕರ್ಣಿ, ಪ್ರಚಾರಾಧಿ ಕಾರಿ ಡಾ| ಮಹಾಂತೇಶ ಬಿರಾದಾರ ಇದ್ದರು

 

 

ಟಾಪ್ ನ್ಯೂಸ್

infosys

Mysuru: ಇನ್ಫೋಸಿಸ್‌ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್‌ ಫ್ರಂ ಹೋಂ

Darshan-kannada

Professional Life: ಚಿತ್ರರಂಗಕ್ಕೆ ನಟ ದರ್ಶನ್‌ ಮರುಪ್ರವೇಶ!

TB-Jayachndra

Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ

Arrest

Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ

CS-Shadakshari

Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್‌.ಷಡಾಕ್ಷರಿ ಮನವಿ

vidhana-Soudha

Response to Demand: ಬಿಸಿಯೂಟ ನೌಕರರಿಗೆ ಇಡುಗಂಟು: ಸರಕಾರದ ಮಾರ್ಗ ಸೂಚಿ ಪ್ರಕಟ

Koppala–women

Tragedy: ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲೂ ಬಾಣಂತಿ, ಶಿಶು ಸಾವು: ಕುಟುಂಬಸ್ಥರ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು

ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು

ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು

ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು

Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ

Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ

14-

Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್

10-

Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

infosys

Mysuru: ಇನ್ಫೋಸಿಸ್‌ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್‌ ಫ್ರಂ ಹೋಂ

Darshan-kannada

Professional Life: ಚಿತ್ರರಂಗಕ್ಕೆ ನಟ ದರ್ಶನ್‌ ಮರುಪ್ರವೇಶ!

TB-Jayachndra

Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ

Arrest

Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ

CS-Shadakshari

Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್‌.ಷಡಾಕ್ಷರಿ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.