ದುಶ್ಚಟಗಳಿಂದ ಶಾರೀರಿಕ-ಮಾನಸಿಕ ಆರೋಗ್ಯ ಹಾಳು
Team Udayavani, Jan 26, 2018, 3:24 PM IST
ಇಂಡಿ: ಇಂದಿನ ಯುವಜನಾಂಗ ದುಷ್ಚಟಗಳಿಂದ ಶಾರೀರಿಕ ಮತ್ತು ಮಾನಸಿಕವಾಗಿ ಹಾಳಾಗುತ್ತಿದ್ದು, ಇದು ದೇಶದ ಭವಿಷ್ಯಕ್ಕೆ ಮಾರಕವಾಗಲಿದೆ ಎಂದು ಶಾಂತೇಶ್ವರ ಕಾಲೇಜು ಶಿಕ್ಷಣ ಶಾಸ್ತ್ರ ಉಪನ್ಯಾಸಕ ರಮೇಶ ಅಂಗಡಿ ಹೇಳಿದರು.
ತಾಲೂಕಿನ ಲಚ್ಯಾಣ ಗ್ರಾಮದ ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ನಡೆದ ವಾರ್ಷಿಕ ಸ್ನೇಹ ಸಮ್ಮೇಳನ
ಮತ್ತು ದ್ವಿತೀಯ ಪಿಯು ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭದಲ್ಲಿ ಅತಿಥಿ ಉಪನ್ಯಾಸಕರಾಗಿ ಅವರು
ಮಾತನಾಡಿದರು.
ನವಭಾರತ ನಿರ್ಮಾಣದಲ್ಲಿ ಯುವಕರ ಪಾತ್ರ ಅನನ್ಯವಾಗಿದೆ. ಇಂದಿನ ಯುವ ಜನಾಂಗ ಸ್ವಾಮಿ ವಿವೇಕಾನಂದ, ಸುಭಾಸಚಂದ್ರ ಭೋಸ್ ಅವರಂತ ಮಹಾನ್ ನಾಯಕರ ತತ್ವ ಆದರ್ಶ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
ಇಂದಿನ ಯುವ ಜನಾಂಗ ದುಶ್ಚಟಗಳಿಗೆ ಬಲಿಯಾಗುತ್ತಿದೆ. ರೋಗಗಳಿಂದ ಸಾವನ್ನಪ್ಪುವ ಸಂಖ್ಯೆಯಲ್ಲಿ ಯುವ ಪೀಳಿಗೆ
ಸಂಖ್ಯೆಯೇ ಹೆಚ್ಚಾಗಿದೆ. ಆದ್ದರಿಂದ ಯುವಕರು ದುಶ್ಚಟ ಮಾಡದೆ ತಮ್ಮ ಸದೃಢ ಶರೀರ ಹೊಂದಿ ದೇಶ ಸೇವೆಗೆ
ಮುಂದಾಗಬೇಕು ಎಂದು ಹೇಳಿದರು.
ಉಚ್ಚನ್ಯಾಯಾಲಯದ ಆದೇಶದಂತೆ ಪೊಲೀಸ್ ಇಲಾಖೆ ಜ. 26ರಿಂದ ಹೆಲ್ಮೆಟ್ ಕಡ್ಡಾಯಗೊಳಿಸಿದೆ. ದ್ವಿಚಕ್ರ ವಾಹನ
ಸವಾರಿ ಮಾಡುವಾಗ ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ತಮ್ಮ ಪ್ರಾಣ ರಕ್ಷಿಸಿಕೊಳ್ಳಬೇಕು ಎಂದು ಹೇಳಿದರು.
ಕಾಲೇಜು ಪ್ರಾಚಾರ್ಯ ಕೆ.ಎ. ಉಪ್ಪಾರ ಅಧ್ಯಕ್ಷತೆ ವಹಿಸಿದ್ದರು. ಸಂಕಪ್ಪಗೌಡ ಬಿರಾದಾರ, ಸುರೇಶ ವಾಲಿ, ಎಚ್.ಡಿ. ಹಳ್ಳಿ, ಎಸ್.ಎಸ್. ಪಾಟೀಲ, ಸಿ.ಕೆ. ಸದಲಾಪುರ, ಅಂಬಣ್ಣ ಲಾಳಸೇರಿ, ತುಕಾರಾಮ ಚವ್ಹಾಣ, ಅಶ್ವಿನಿ
ಅಂದೇವಾಡಿ, ಗೌರಿಶಂಕರ ಬಾಬಳಗಿ ಸೇರಿದಂತೆ ಸಿಬ್ಬಂದಿ, ವಿದ್ಯಾರ್ಥಿ, ವಿದ್ಯಾರ್ಥಿನಿಯರು ಇದ್ದರು. ಕುಮಾರಿ ಅಕ್ಷತಾ ಬಿರಾದಾರ ಪ್ರಾರ್ಥಿಸಿದರು. ಬಿ.ಜಿ. ಗೊಳ್ಳಗಿ ಸ್ವಾಗತಿಸಿದರು. ಎಚ್.ಎಸ್. ಗೊಟ್ಯಾಳ ನಿರೂಪಿಸಿದರು. ಬಿ.ಆರ್. ಸ್ಥಾವರಮಠ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ
Vijayapura; ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿ ಕೂರದು: ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.