ಆಲಮಟ್ಟಿ: ಸಾರ್ವಜನಿಕರೊಂದಿಗೆ ಅನುಚಿತ ವರ್ತನೆ ತೋರಿದ ಪೊಲೀಸ್ ಇನ್ಸ್ ಪೆಕ್ಟರ್ ಅಮಾನತು
Team Udayavani, Feb 6, 2022, 3:47 PM IST
ಆಲಮಟ್ಟಿ: ಇಲ್ಲಿನ ಶಾಸ್ತ್ರಿ ಸಾಗರ ಜಲಾಶಯದ ಭದ್ರತಾ ಹೊಣೆ ಹೊತ್ತಿರುವ ರಾಜ್ಯ ಕೈಗಾರಿಕಾ ಭದ್ರತಾ ಪಡೆಯ ಪೊಲೀಸ್ ಇನ್ಸಪೆಕ್ಟರೊಬ್ಬರು ಸಾರ್ವಜನಿಕರೊಂದಿಗೆ ಅನುಚಿತ ವರ್ತನೆ ಹಾಗೂ ಹಲ್ಲೆ ನಡೆಸಿರುವ ಹಿನ್ನೆಲೆಯಲ್ಲಿ ಅವರನ್ನು ಸರ್ಕಾರ ಅಮಾನತುಗೊಳಿಸಿ ಆದೇಶಿಸಿದೆ.
ಕರಿಯಪ್ಪ ಮರನೂರ, ಪ್ರಸ್ತುತ ಆಲಮಟ್ಟಿ ಲಾಲ್ ಬಹದ್ದೂರಶಾಸ್ತ್ರಿ ಸಾಗರದ ಭದ್ರತಾ ಕರ್ತವ್ಯನಿರ್ವಹಿಸುತ್ತಿರುವ ಇವರು ಜಲಾಶಯದ ವಿವಿಧ ಕಾಮಗಾರಿಗಳನ್ನು ನಿರ್ವಹಣೆಯ ಜವಾಬ್ದಾರಿ ಹೊಂದಿರುವ ಕೃಷ್ಣಾ ಭಾಗ್ಯ ಜಲನಿಗಮದ ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರ ಮೇಲೆ ಪೊಲೀಸ್ ದರ್ಪ ತೋರಿ ಅಸಭ್ಯವಾಗಿ ವರ್ತಿಸಿರುವುದು ಮತ್ತು ಸಾರ್ವಜನಿಕರ ಮೇಲೆ ಹಲ್ಲೆ ನಡೆಸಿರುವ ಬಗ್ಗೆ ಆರೋಪ ಕೇಳಿ ಬಂದಿತ್ತು.
ಈ ಕುರಿತು ಬಂದ ದೂರಿನ ಹಿನ್ನೆಲೆಯಲ್ಲಿ ಸಂಬಂಧಿಸಿದ ಹಿರಿಯ ಅಧಿಕಾರಿಗಳು ಪೂರ್ವಭಾವಿ ವಿಚಾರಣೆ ನಡೆಸಿದ ವೇಳೆ ಮೇಲಿನ ಎಲ್ಲಾ ಆರೋಪಗಳು ಸಾಬೀತಾಗಿರುವುದರಿಂದ ಪೊಲೀಸ್ ಇನ್ಸಪೆಕ್ಟರ್ ಮರನೂರ ಅಮಾನತು ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.