ಕಾಂಗ್ರೆಸ್ ಶಾಸಕರಿಗೆ ಕಾಂಗ್ರೆಸ್ ಶಾಸಕರಿಂದಲೇ ರಾಜಕೀಯ ನಿವೃತ್ತಿ ಸವಾಲು

ಎಂ.ಬಿ.ಪಾಟೀಲ ನನ್ನ ವಿರುದ್ಧ ಒಂದು ಆರೋಪ ಸಾಬೀತು ಪಡಿಸಲಿ: ಯಶವಂತರಾಯಗೌಡ

Team Udayavani, Aug 26, 2021, 1:14 PM IST

ಕಾಂಗ್ರೆಸ್ ಶಾಸಕರಿಗೆ ಕಾಂಗ್ರೆಸ್ ಶಾಸಕರಿಂದಲೇ ರಾಜಕೀಯ ನಿವೃತ್ತಿ ಸವಾಲು

ವಿಜಯಪುರ: ಪುಣೆಯ ಹಡಪ್ಸರ್ ನಲ್ಲಿ ಬಂಥನಾಳ ಶ್ರೀಗಳ ಜಮೀನು ಗಡಪ್ ಆಗಿದೆ ಎಂಬ ಕಾಂಗ್ರೆಸ್ ಶಾಸಕ ಎಂ.ಬಿ. ಪಾಟೀಲ್ ಆರೋಪಕ್ಕೆ ತಿರುಗೇಟು ನೀಡಿರುವ ಕಾಂಗ್ರೆಸ್ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ, ಹಾಗೊಂದು ವೇಳೆ ಆ ಆರೋಪ ಸಾಬೀತು ಮಾಡಿದರೆ ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ ಎಂದು ಸವಾಲು ಹಾಕಿದ್ದಾರೆ.

ಗುರುವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಬಹಿರಂಗ ಸವಾಲು ಹಾಕಿದ ಶಾಸಕ ಯಶವಂತರಾಯಗೌಡ, ಶ್ರೀಭೀಮಾಶಂಕರ ಸಕ್ಕರೆ ಕಾರ್ಖಾನೆಯಲ್ಲಿ ನಯಾ ಪೈಸೆ ಲೋಪವಾಗಿದ್ದರೂ ಶಾಸಕ ಸ್ಥಾನದಿಂದ ಮಾತ್ರವಲ್ಲ ರಾಜಕೀಯದಿಂದಲೂ ನಿವೃತ್ತಿ ಹೊಂದುವುದಾಗಿ ಮಾಜಿ ಸಚಿವ ಎಂ.ಬಿ.ಪಾಟೀಲ ಅವರಿಗೆ ಬಹಿರಂಗ ಸವಾಲು ಹಾಕಿದರು.

ನನ್ನ ವಿರುದ್ಧ ಆರೋಪ ಮಾಡುವವರು ಸುಖಾ ಸುಮ್ಮನೆ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಭೀಮಾ ತೀರದ ಅಕ್ರಮ ಮರಳುಗಾರಿಕೆ ವಿಷಯಲ್ಲೂ ಆಧಾರ ರಹಿತ ಆರೋಪ ಮಾಡಿದ್ದಾರೆ. ಒಂದೊಮ್ಮೆ ಇವರ ಬಳಿ ಏನಾದರೂ ದಾಖಲೆ ಇದ್ದರೆ ಸಾಬೀತುಪಡಿಸಲಿ ಎಂದ ಅವರು, ಮರಳಿನ ಅಕ್ರಮ ತಡೆಯುವಲ್ಲಿ ನನ್ನ ಪಾತ್ರವೇ ಪ್ರಮುಖವಾಗಿದೆ. ಎನ್.ಜಿ.ಟಿ. ಆದೇಶದಂತೆ ಹಲವು ವರ್ಷಗಳಿಂದ ಮರಳು ಗಣಿಗಾರಿಕೆಗೆ ಅವಕಾಶವೇ ಇಲ್ಲ. ಇದೀಗ ತಡೆಯಾಜ್ಞೆ ತೆರವಾಗಿದೆ‌. ಹೀಗಾಗಿ ಜನರಿಗೆ ತಪ್ಪು ಸಂದೇಶ ನೀಡುವ ಕೆಲಸ ಮಾಡುವುದನ್ನು ಇನ್ನಾದರೂ ನಿಲ್ಲಿಸಲಿ ಎಂದು ಹರಿಹಾಯ್ದರು.

ಇದನ್ನೂ ಓದಿ:ರಾಹುಲ್ ಗಾಂಧಿಗೆ ಏನು ಗೊತ್ತು? ದೇಶದ ಆಸ್ತಿ ಮಾರಿದ್ದೇ ಕಾಂಗ್ರೆಸ್: ಸಚಿವೆ ನಿರ್ಮಲಾ

ಧರ್ಮ ವಿಭಜನೆ ವಿಷಯದಲ್ಲಿ ಕೈ ಹಾಕಿಲ್ಲ ಎಂದಿದ್ದಾರೆ. ಆದರೆ, ಸಿದ್ದರಾಮಯ್ಯ ಅವರು ಎಲ್ಲ ಸರ್ಕಾರಿ ಕಚೇರಿಯಲ್ಲಿ ಬಸವೇಶ್ವರ ಫೋಟೋ ಅಳವಡಿಸಲು ಆದೇಶಿಸಿದಾಗ ವೀರಶೈವ ಮಹಾಸಭಾ ಅಭಿನಂದನೆ ಸಲ್ಲಿಸಿತು. ಆಗ ಲಿಂಗಾಯತ ಪ್ರತ್ಯೇಕ ಧರ್ಮ ಮಾಡಿ ಎಂದು ಯಾರೂ ಮನವಿ ಮಾಡಿಲ್ಲ. ಅದು ವೀರಶೈವ, ಲಿಂಗಾಯತ ಎಂದು ಮಾಡಿದ್ದು ನೀವೇ. ಧರ್ಮಾಧಾರಿತ ರಾಜಕಾರಣ ಮಾಡುವುದು ಸರಿಯಲ್ಲ. ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟದ ಕಾರಣದಿಂದಲೇ ನಾವು ಸೋತದ್ದು ಎಂದು ಕಾಂಗ್ರೆಸ್ ಸಭೆಯಲ್ಲಿ ಶಿವಮೊಗ್ಗ, ದಾವಣಗೆರೆ, ಗದಗ ಸೇರಿದಂತೆ ವಿವಿಧ ಜಿಲ್ಲೆಗಳ ಪರಾಜಿತರು ನೋವು ಹೇಳಿಕೊಂಡಿದ್ದಾರೆ ಎಂದರು.

ಬಾಜಾ-ಭಜಂತ್ರಿ ಯಾವಾಗ ಬೇಕೆಂದಾಗ ಬಾರಿಸಲು ಬರಲ್ಲ. ಚುನಾವಣೆ ಬಂದಾಗ ಯಾರು ಏನು ಬಾರಿಸುತ್ತಾರೋ ನೋಡೋಣ ಎಂದು ತಿರುಗೇಟು ನೀಡಿದರು.

ಬಿಎಲ್ ಡಿಇ ಸಂಸ್ಥೆ ಬಗ್ಗೆ ಜನಜಾಗೃತಿ ಮೂಡಿಸಬೇಕಿದೆ. ಸಂಸ್ಥೆಯ ಸಮಗ್ರ ಚರಿತ್ರೆಯ ಕುರಿತು ಬರುವ ದಿನಗಳಲ್ಲಿ ಜನರಿಗೆ ಮನವರಿಕೆ ಮಾಡುವ ಕೆಲಸ ಮಾಡುತ್ತೇನೆ, ಈಗಿನಿಂದಲೇ ಆ ಕೆಲಸ ಆರಂಭಗೊಂಡಿದೆ ಎಂದರು. ಇನ್ನು ನಿಮ್ಮಿಂದ ನಾನು ಮಂತ್ರಿಯಾಗಿಲ್ಲ ಎನ್ನುವ ಅವರು ನಮ್ಮಂಥ ಶಾಸಕರು ನೀಡಿದ ಸಹಕಾರದಿಂದಲೇ ಸರ್ಕಾರ ರಚನೆಯಾಗಿದೆ. ಸರ್ಕಾರವೇ ಬರದಿದ್ದರೆ ನೀವೆಲ್ಲಿ ಮಂತ್ರಿ ಆಗುತ್ತಿದ್ದೀರಿ? ಎಂದು ಎಂ.ಬಿ.ಪಾಟೀಲರನ್ನು ಪ್ರಶ್ನಿಸಿದರು.

ನೀವು ಮಂತ್ರಿ ಆದದ್ದು, ಅಪ್ಪಾಜಿ ನಾಡಗೌಡ, ಶಿವಾನಂದ ಪಾಟೀಲ ಅವರು ಮಂತ್ರಿಯಾಗುವ ಅರ್ಹತೆ ಇದ್ದರೂ ನಿಮಗಾಗಿ ತ್ಯಾಗ ಮಾಡಲಿಲ್ಲವೇ, ನಿಮಗೆ ಕೃತಜ್ಞತೆ ಎಂಬುದೇ ಇಲ್ಲವೇ ಎಂದು ಪ್ರಶ್ನಿಸಿದರು.

ನಿಮಗೆ ಸಹಾಯ ಮಾಡಿದವರನ್ನು‌ ನೆನಪಿಸಿಕೊಳ್ಳಿ. ನಿಮಗೆ ಮಾತ್ರವಲ್ಲ ಕಾಂಗ್ರೆಸ್ ನಲ್ಲಿ ಇರುವ ಎಲ್ಲರಿಗೂ ಸೋನಿಯಾಜಿ, ರಾಹುಲ್ ಜೀ ಅವರ ಕೃಪೆ ಇದ್ದೇ ಇರುತ್ತದೆ. ನಿಮ್ಮನ್ನು ಮಂತ್ರಿ ಮಾಡುವಲ್ಲಿ ಪರಮೇಶ್ವರ ಅಂಥವರನ್ನು ಸ್ಮರಿಸಿ ಎಂದರಲ್ಲದೇ‌ ನಾವು ಮಂತ್ರಿ ಮಾಡಿದ್ದೇವೆಂದು ಹೇಳಿಲ್ಲ. ಬದಲಾಗಿ ಸಾಕಷ್ಟು ಸಹಕಾರ ನೀಡಿದ್ದೇವೆ ಎಂಬುದು‌ ನೆನಪಿರಲಿ ಎಂದರು.

2013, 2018 ರ ಚುನಾವಣೆಯಲ್ಲಿ ನೀವು ಏನೆಲ್ಲ‌ ಕಸರತ್ತು ಮಾಡಿದರೂ ನಾನು‌ ಗೆದ್ದೆ. ನೀವು ಕಾಡಿದಂತೆಲ್ಲ‌ ಜನ ಹೆಚ್ಚಿನ ಪ್ರಮಾಣದಲ್ಲಿ ನನ್ನ ಕೈ ಹಿಡಿದಿದ್ದಾರೆ. ಮುಂದಿನ ಚುನಾವಣೆಯಲ್ಲೂ ಅದು ಮರುಕಳಿಸಲಿದೆ ಎಂದರು. ನಾನು ಲಿಂಬೆ ಅಭಿವೃದ್ಧಿ ಮಂಡಳಿ ಮಾಡಿಸಿದ್ದನ್ನು ಸಹಿಸದೇ ನೀವು ಸಿ.ಎಂ. ಸಿದ್ದರಾಮಯ್ಯ ಅವರ ಬಳಿ ದ್ರಾಕ್ಷಿ ಅಭಿವೃದ್ಧಿ ಮಂಡಳಿ‌ ಮಾಡಿ ಎಂದು ಹೋದಾಗ ಲಿಂಬೆ ಅಭಿವೃದ್ಧಿ ಮಾಡಿದ್ದು ಸಹ ನಿನಗೆ ಸಹಿಸಿಕೊಳ್ಳಲು ಆಗುತ್ತಿಲ್ಲವೇ ಎಂದು ಬೈದು ಕಳುಹಿಸಿದ್ದರು. ಅಂಥ ಮನಸ್ಥಿತಿ ನಿಮ್ಮದು ಎಂದು‌ ಕುಟುಕಿದರು.

ನಿಮ್ಮ ಕೆಲಸಕ್ಕೆ ಪದೇ ಪದೇ ಸಿದ್ದೇಶ್ವರ ಶ್ರೀಗಳ ಹೆಸರು ಹೇಳಿಕೊಂಡು ಪ್ರಚಾರ ಪಡೆಯುವುದನ್ನು ಬಿಡಿ. ದೇವರಾದ ಅವರು ಎಲ್ಲರಿಗೂ ಆಶೀರ್ವಾದ ಮಾಡಿ ಮಾತನಾಡುತ್ತಾರೆ, ನನ್ನ ಬಗ್ಗೆಯೂ ಹೊಗಳಿಕೆ ಮಾತನಾಡುತ್ತಾರೆ. ಹಾಗಂತ ಅವರ ಹೆಸರನ್ನು ನಿಮ್ಮ ರಾಜಕೀಯಕ್ಕೆ ಬರುವ ಬಳಸಿಕೊಳ್ಳುವುದನ್ನು ನಿಲ್ಲಿಸಿ. ಬದಲಾಗಿ ಶ್ರೀಗಳ ಆದರ್ಶಗಳನ್ನು‌ ಕಿಂಚಿತ್ತಾದರೂ ಅಳವಡಿಸಿಕೊಳ್ಳಿ ಎಂದು ಸಲಹೆ ನೀಡಿದರು.

ಜಿಲ್ಲಾ ಪಂಚಾಯಿತಿ‌ ಚುನಾವಣೆಯಲ್ಲಿ ನನಗೆ ಟಿಕೆಟ್ ಕೊಡಿಸಿದ ಬಗ್ಗೆ ಹೇಳಿದವರಿಗೆ ಗೊತ್ತಿರಲಿ. ಇವರಿಗಿಂತ ಮೊದಲೇ ನನ್ನ ಕುಟುಂಬ ಜಿಲ್ಲಾ ಪಂಚಾಯಿತಿ ರಾಜಕಾರಣದಲ್ಲಿತ್ತು. ಹೊಸದಾಗಿ‌ ಜಿಲ್ಲಾ ಪರಿಷತ್ ರಚನೆಯಾದಾಗ ಎಲ್ಲೆಡ ಜನತಾ ಪಕ್ಷ ಗೆದ್ದರೆ ಕಾಂಗ್ರೆಸ್ ಕಟ್ಟಾಳುವಾಗಿದ್ದ ನಮ್ಮ ತಂದೆ ವಿಠಲಗೌಡ ಪಾಟೀಲ ಅಗರಖೇಡ ಜಿ.ಪಂ.ನಿಂದ ಗೆದ್ದಿದ್ದ ಇಡೀ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಏಕೈಕ ಅಭ್ಯರ್ಥಿ. ನಾನು ಗೆದ್ದಾಗಲೂ ಜನತಾದಳ ಜಯಭೇರಿ ಬಾರಿಸಿದ್ದರೂ ಕಾಂಗ್ರೆಸ್ ಪಕ್ಷದಿಂದ ಗೆದ್ದ ಏಕೈಕ ಅಭ್ಯರ್ಥಿ ನಾನೇ ಆಗಿದ್ದೆ. ನನ್ನ ರಾಜಕೀಯ ಬೆಳವಣಿಗೆಯಲ್ಲಿ ಬಿ.ಕೆ.ಗುಡದಿನ್ನಿ, ಮಿಸಾಳೆ ಅವರಂಥ ನಾಯಕರ ಕೊಡುಗೆ ಇದೆ. ಜೊತೆಗಿದ್ದವರಲ್ಲಿ ನೀವೂ ಒಬ್ಬರು. ನಂತರ ನೀವು ನನ್ನ ಚುನಾವಣೆಯಲ್ಲಿ ಏನೇನು ಮಾಡಿದ್ದೀರಿ ಎಂಬುದಕ್ಕೆ ನಾನು ಸಾಕ್ಷಿ ಕೊಡಬಲ್ಲೆ. ಆದರೆ ನಾನು ತಿಕೋಟಾ ಕ್ಷೇತ್ರದಲ್ಲಿ ನಿಮ್ಮ ವಿರುದ್ಧ ಕೆಲಸ ಮಾಡಿದ್ದನ್ನು ರುಜುವಾತು ಮಾಡಿ ಎಂದು ಯಶವಂತರಾಯಗೌಡ ಆಗ್ರಹಿಸಿದರು.

ಸಂಸದ ರಮೇಶ ಜಿಗಜಿಣಗಿ ಅವರು ಬಿಜೆಪಿ ಪಕ್ಷದಿಂದ ಜಿಲ್ಲೆಯ ನೀರಾವರಿ ಆಗಿದೆ ಎಂದಿದ್ದಾರೆ. ನೀರಾವರಿ ವಿಷಯದಲ್ಲಿ ಈವರೆಗೂ ಸುಮ್ಮನಿದ್ದ ಬಿಜೆಪಿ ನಾಯಕರು ಇದೀಗ ಎಚ್ಚರವಾಗಿದ್ದಾರೆ. ಸಂಸದರು ಇಂಡಿ ಕ್ಷೇತ್ರಕ್ಕೆ ಹೋಗಿ‌ ನೀರಾವರಿ ಯೋಜನೆ ಮಾಡಿದ್ದು ಬಿಜೆಪಿ ಪಕ್ಷ ಎಂದಿದ್ದಾರೆ. ಅದನ್ನು ನಾವೆಲ್ಲಿ ಅಲ್ಲಗಳೆದಿದ್ದೇವೆ. ಹಾಗಂತ ನಿಮ್ಮೊಬ್ಬರಿಂದಲೇ ಎಲ್ಲವೂ ಆಗಿಲ್ಲ‌. ಇದರಲ್ಲಿ ಎಲ್ಲ‌ ಸರ್ಕಾರಗಳ ಪಾಲೂ ಇದೆ. ದೇವೇಗೌಡರು, ಯಡಿಯೂರಪ್ಪ, ಸಿದ್ದರಾಮಯ್ಯ, ಬಸವರಾಜ ಬೊಮ್ಮಾಯಿ ಸಹ ನೀರಾವರಿಗೆ ಕೊಡುಗೆ ನೀಡಿದ್ದಾರೆ. ನಾವದನ್ನು ಮುಕ್ತವಾಗಿ ಒಪ್ಪಿಕೊಳ್ಳಬೇಕು ಎಂದರು.

ಟಾಪ್ ನ್ಯೂಸ್

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

1-vijay

Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

23-

Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್

22-

ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

8

Kundapura: ಬೋಟ್‌ ರೈಡರ್‌ ನಾಪತ್ತೆ; ಸಿಗದ ಸುಳಿವು

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

13

Kundapura: ಮನೆಗೆ ನುಗ್ಗಿ ಚಿನ್ನಾಭರಣ ಕಳವು

POlice

Brahmavar: ಬೆಳ್ಮಾರು; ಕೋಳಿ ಅಂಕಕ್ಕೆ ದಾಳಿ

dw

Kundapura: ಮಲಗಿದಲ್ಲೇ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.