ರಸ್ತೆಯಲ್ಲಿ ಗುಂಡಿ; ಸವಾರರ ಪರದಾಟ
Team Udayavani, Jun 13, 2022, 5:34 PM IST
ಇಂಡಿ: ಪಟ್ಟಣದಿಂದ ಅಗರಖೇಡ ಗ್ರಾಮಕ್ಕೆ ತೆರಳುವ ರಸ್ತೆಯಲ್ಲಿ ದೊಡ್ಡ ದೊಡ್ಡ ಗುಂಡಿಗಳು ಬಿದ್ದು ಅದರಲ್ಲಿ ಮೊಳಕಾಲವರೆಗೆ ಚರಂಡಿ ನೀರು ಸಂಗ್ರಹವಾಗಿದ್ದು ವಾಹನ ಸವಾರರು ಎಷ್ಟೋ ಬಾರಿ ಕೈ ಕಾಲು ಮುರಿದುಕೊಂಡ ಘಟನೆಗಳು ನಡೆದಿದೆ.
ಕಳೆದ ಎರಡು ತಿಂಗಳಿಂದ ತಗ್ಗಿನಲ್ಲಿ ನೀರು ಸಂಗ್ರಹವಾಗುತ್ತಿದೆ. ಸಂಬಂಧಿಸಿದ ಅಧಿಕಾರಿಗಳು ಇದುವರೆಗೂ ಗಮನ ಹರಿಸದಿರುವುದು ವಿಪರ್ಯಾಸವೇ ಸರಿ. ಅಗರಖೇಡ ರಸ್ತೆ ಪಟ್ಟಣದಿಂದ ಒಂದು ಕಿ.ಮೀ. ವರೆಗೆ ಪುರಸಭೆ ವ್ಯಾಪ್ತಿಯಲ್ಲಿ ಬರುವುದರಿಂದ ಪುರಸಭೆಯವರು ದುರಸ್ತಿ ಮಾಡಬೇಕು. ಇಲ್ಲವಾದರೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ದುರಸ್ತಿ ಮಾಡಬೇಕು ಎಂಬುದು ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ವಾದ.
ಆ ರಸ್ತೆಯಲ್ಲಿ ಪ್ರತಿ ನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತಿದ್ದರು ಸಂಬಂಧಿಸಿದ ಅಧಿಕಾರಿಗಳು ಮಾತ್ರ ರಸ್ತೆ ದುರಸ್ತಿಗೆ ಮುಂದಾಗುತ್ತಿಲ್ಲ. ಈಗಾಗಲೇ ಹತ್ತಾರು ವಾಹನಗಳು ಗುಂಡಿಯಲ್ಲಿ ಬಿದ್ದು ಕೈ ಕಾಲು ಕೆತ್ತಿಕೊಂಡ ಉದಾಹರಣೆಗಳು ಬಹಳಷ್ಟಿವೆ. ಇನ್ನೂ ಕೆಲವು ದಿನ ಬಿಟ್ಟರೆ ಬಹುತೇಕ ಪ್ರಯಾಣಿಕರು ಅಥವಾ ವಾಹನ ಸವಾರರು ಆ ಗುಂಡಿಗಳಲಿ ಬಿದ್ದು ಪ್ರಾಣ ಕಳೆದುಕೊಳ್ಳುವ ಭೀತಿ ಎದುರಾಗಿದೆ.
ರಾತ್ರಿ ಹೊತ್ತಿನಲ್ಲಿ ಸರಿಯಾಗಿ ರಸ್ತೆ ಕಾಣಲ್ಲ. ಅಲ್ಲದೆ ಆ ರಸ್ತೆಗೆ ಹೊಸದಾಗಿ ಯಾರಾದರೂ ವಾಹನ ಸವಾರರು ಬಂದರೆ ಗುಂಡಿಗಳ ಆಳ ತಿಳಿಯದೇ ಗುಂಡಿಯಲ್ಲಿ ಬೀಳಬಹುದಾಗಿದೆ. ಇನ್ನಾದರೂ ಸಂಬಂಧಪಟ್ಟ ಇಲಾಖೆಯವರು ಗುಂಡಿಯನ್ನು ಮುಚ್ಚಿ ಅನಾಹುತವನ್ನು ತಪ್ಪಿಸಬೇಕು ಎಂಬುವುದು ನಾಗರಿಕರ ಆಗ್ರಹವಾಗಿದೆ.
ಬಹಳ ದಿನಗಳಿಂದ ನೀರು ಸಂಗ್ರಹವಾಗಿದೆ. ಇದರಿಂದ ಸಾಂಕ್ರಾಮಿಕ ರೋಗ ಹರಡುವ ಸಾಧ್ಯತೆ ಹೆಚ್ಚಾಗಿದೆ. ರಸ್ತೆ ಪಕ್ಕದಲ್ಲಿ ಚರಂಡಿ ನೀರು ಹೋಗಲು ಚರಂಡಿ ತೆಗೆಯಬೇಕು. ರಸ್ತೆಯಲ್ಲಿನ ಗುಂಡಿಗಳನ್ನು ಮುಚ್ಚಿ ವಾಹನ ಸವಾರರು ಮತ್ತು ಪ್ರಯಾಣಿಕರಿಗೆ ಅನವು ಮಾಡಿಕೊಡಬೇಕೆಂಬುವುದು ನಾಗರಿಕರ ಆಗ್ರಹವಾಗಿದೆ.
ರಸ್ತೆಯಲ್ಲಿ ಚರಂಡಿ ನೀರು ಸಂಗ್ರಹವಾಗಿ ಗಬ್ಬು ವಾಸನೆ ಹರಡುತ್ತಿರುವುದು ಗಮನಕ್ಕೆ ಬಂದಿದೆ. ಈಗಾಗಲೇ ಪುರಸಭೆಯವರಿಗೆ ರಸ್ತೆ ಅಥವಾ ದುರಸ್ತಿ ಮಾಡುವಂತೆ ಪತ್ರ ಬರೆದಿದ್ದೇವೆ. ನಾಳೆ ಖುದ್ದಾಗಿ ಸ್ಥಳಕ್ಕೆ ಭೆಟಿಯಾಗಿ ಸಮಸ್ಯೆ ಬಗೆಹರಿಸುತ್ತೇನೆ. -ವಿವೇಕ್ ಮಠ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸಹಾಯಕ ಅಭಿಯಂತರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು
Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು
Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು
Muddebihal: ಟ್ರ್ಯಾಕ್ಟರ್-ಟ್ರೇಲರ್ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು
Waqf Notice: ಒಂದಿಂಚು ಜಮೀನು ವಕ್ಫ್‌ಗೆ ಹೋಗಲು ಬಿಡಲ್ಲ: ಸಚಿವ ಎಂ.ಬಿ.ಪಾಟೀಲ್
MUST WATCH
ಹೊಸ ಸೇರ್ಪಡೆ
Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ
IPL Auction: ಸಂಪೂರ್ಣ ಐಪಿಎಲ್ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.