Power cut: ಆತ್ಮಹತ್ಯೆ ಮಾಡಿಕೊಳ್ಳುವ ಎಚ್ಚರಿಕೆ ನೀಡಿದ ಭೀಮಾ ತೀರದ ರೈತರು

ಹೆಸ್ಕಾಂ ಕಚೇರಿ ಮುತ್ತಿಗೆ, ಸರ್ಕಾರಿ ವಾಹನಕ್ಕೆ ಅಡ್ಡ ಮಲಗಿದ ರೈತ

Team Udayavani, Jan 20, 2024, 4:44 PM IST

1-asdasdsad

ವಿಜಯಪುರ : ಭೀಮಾ ನದಿ ತೀರದ ಹಳ್ಳಿಗಳ ವ್ಯಾಪ್ತಿಯಲ್ಲಿ ನಿಷೇದಾಜ್ಞೆ ಜಾರಿಗೊಳಿಸಿ, ಹಳ್ಳಿಗಳ ವಿದ್ಯುತ್ ಸಂಪರ್ಕ ಕಡಿತ ಮಾಡಿರುವ ಜಿಲ್ಲಾಡಳಿತದ ಕ್ರಮದಿಂದ ಆಕ್ರೋಶಗೊಂಡ ರೈತರು ಶನಿವಾರ ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿದ್ದಾರೆ. ಪೊಲೀಸ್ ವಾಹನಕ್ಕೂ ಅಡ್ಡ ಮಲಗಿ ಆಕ್ರೋಶ ಹೊರ ಹಾಕಿದ್ದಾರೆ. ತತ್ ಕ್ಷಣ ವಿದ್ಯುತ್ ಸಂಪರ್ಕ ಕಲ್ಪಿಸದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವ ಎಚ್ಚರಿಕೆ ನೀಡಿದ್ದಾರೆ.

ಕುಡಿಯುವ ನೀರಿಗಾಗಿ ಮಹಾರಾಷ್ಟ್ರದ ಉಜಿನಿ ಜಲಾಶಯದಿಂದ ಭೀಮಾ ನದಿಗೆ ಹರಿಸುತ್ತಿರುವ ನೀರನ್ನು ಕೃಷಿ ಬಳಕೆ ಮಾಡದಂತೆ ಜಿಲ್ಲಾಡಳಿತ ನಿಷೇಧಾಜ್ಞೆ ಜಾರಿಗೊಳಿಸಿದೆ. ಅಲ್ಲದೇ ನದಿ ಪಾತ್ರದ ಹಳ್ಳಿಗಳ ವಿದ್ಯುತ್ ಸಂಪರ್ಕ ಕಡಿತ ಮಾಡಲಾಗಿದೆ.

ಮಹಾರಾಷ್ಟ್ರ ರಾಜ್ಯದ ಉಜಿನಿ ಜಲಾಶಯದಿಂದ ಕುಡಿಯುವ ನೀರಿಗಾಗಿ ಭೀಮಾ ನದಿಗೆ ನೀರು ಹರಿಸಲಾಗುತ್ತಿದೆ. ವಿಜಯಪುರ ಜಿಲ್ಲೆಯ ಚಡಚಣ, ಇಂಡಿ ತಾಲೂಕಿನ ಭೀಮಾ ತೀರದ ಹಳ್ಳಿಗಳ ವ್ಯಾಪ್ತಿಗೆ ನೀರು ಹರಿಯುತ್ತಿದೆ.

ಕುಡಿಯುವ ನೀರಿನ ಉದ್ದೇಶಕ್ಕೆ ನದಿಗೆ ಹರಿಸುತ್ತಿರುವ ನೀರನ್ನು ಕೃಷ ಚಟುವಟಿಕೆಗೆ ಬಳಸಲಾಗುತ್ತಿದೆ ಎಂಬ ಕಾರಣಕ್ಕೆ ನದಿ ತೀರದಿಂಧ 100 ಮೀಟರ್ ಅಂತರದಲ್ಲಿ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಿ ನಿಷೇಧಾಜ್ಞೆ ಹೊರಡಿಸಲಾಗಿದೆ.

ಜಿಲ್ಲಾಧಿಕಾರಿ ಭೂಬಾಲನ್ ಅವರ ಸೂಚನೆ ಮೇರೆಗೆ ಇಂಡಿ ಕಂದಾಯ ಉಪ ವಿಭಾಗದ ಸಹಾಯಕ ಆಯುಕ್ತ ಆಬೀದ್ ಗದ್ಯಾಳ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. ಅಲ್ಲದೇ ಭೀಮಾ ನದಿ ತೀರದ ಹಳ್ಳಿಗಳ ವಿದ್ಯುತ್ ಸಂಪರ್ಕವನ್ನೂ ಕಡಿತ ಮಾಡಲಾಗಿದೆ.

ಇದರಿಂದ ಭೀಮಾ ನದಿ ನೀರನ್ನು ಅವಲಂಬಿತ ಬಹು ಹಳ್ಳಿ ಕುಡಿಯುವ ನೀರಿನ ಯೋಜನೆಗಳಿಗೂ ನೀರಿನ ಸಮಸ್ಯೆ ಎದುರಾಗಿದೆ. ಅಧಿಕಾರಿಗಳ ಈ ಕ್ರಮಕ್ಕೆ ಕುಪಿತರಾಗಿರುವ ಭೀಮಾ ನದಿ ತೀರದ ಹಳ್ಳಗಳ ರೈತರು ಆಕ್ರೋಶಗೊಂಡು ಬೀದಿಗಿಳಿದಿದ್ದಾರೆ.

ಶನಿವಾರ ಚಡಚಣ ತಾಲೂಕ ಕೇಂದ್ರದಲ್ಲಿರುವ ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿದ ರೈತರು, ಅಧಿಕಾರಿಗಳ ವರ್ತನೆಗೆ ಆಕ್ರೋಶ ವ್ಯಕ್ತಪಡಿಸಿದರು. ಈ ಹಂತದಲ್ಲಿ ಸ್ಥಳಕ್ಕೆ ಆಗಮಿಸಿ ತಹಶೀಲ್ದಾರರು, ಹೆಸ್ಕಾಂ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ರೈತರು, ಭೀಕರ ಬರ ಪರಿಸ್ಥಿತಿ ಎದುರಾಗಿರುವ ಈ ಹಂತದಲ್ಲಿ ನೀರಿಲ್ಲದೇ ಜನರು ಬದುಕುವುದಾದೂ ಹೇಗೆ ಎಂದು ಕಿಡಿ ಕಾರಿದರು.

ಮೇಲಾಧಿಕಾರಿಗಳ ಆದೇಶದಂತೆ ನಾವು ಕರ್ತವ್ಯ ನಿರ್ವಹಿಸಿದ್ದೇವೆ ಎಂದು ಅಧಿಕಾರಿಗಳು ಹೇಳುತ್ತಲೇ, ರೈತರು ಹಾಗೂ ಅಧಿಕಾರಿಗಳ ಮಧ್ಯೆ ಮಾತಿನ ಚಕಮಕಿ ನಡೆಯಿತು.

ಜಿಲ್ಲಾಡಳಿತ ನದಿ ನೀರನ್ನು ಕೃಷಿ ಬಳಕೆ ಮಾಡದಂತೆ ಕ್ರಮ ಕೈಗೊಳ್ಳಬೇಕೆ ಹೊರತು, ನದಿ ತೀರತ ಹಳ್ಳಿಗಳನ್ನೇ ಕತ್ತಲಲ್ಲಿ ಕೂಡಿ ಹಾಕುವುದಲ್ಲ. ನಮ್ಮ ಭಾಗದಲ್ಲಿ ನದಿ ನೀರು ಮಾತ್ರವಲ್ಲದೇ ಕೊಳವೆ ಭಾವಿ, ಕೆರೆಗಳಿಂದ ರೈತರು ಕೃಷಿ ಮಾಡಿಕೊಂಡಿದ್ದು, ಅಂಥ ರೈತರು, ಬೆಳೆಗಳ ಪರಿಸ್ಥಿತಿ ಏನು ಎಂದು ಪ್ರಶ್ನಿಸಿದರು.

ಆದರೆ ಮುನ್ಸೂಚನೆ ಇಲ್ಲದೇ ಅಧಿಕಾರಿಗಳು ವಿದ್ಯುತ್ ಸಂಪರ್ಕ ಕಡಿತ ಮಾಡಿರುವುದು ಬೆಳೆದುನಿಂತ ಬೆಳೆಗಳ ಸಂರಕ್ಷಣೆಗೆ ಸಂಕಷ್ಟ ತಂದಿದೆ ಎಂದು ವಾಗ್ವಾದ ನಡೆಸಿದರು. ವಿದ್ಯುತ್ ಸಂಪರ್ಕ ಕಡಿತದಿಂದ ನದಿ ನೀರು ಆಧಾರಿತ ಬಹುಹಳ್ಳಿ ಕುಡಿಯುವ ನೀರಿನ ಯೋಜನೆಗಳೂ ಸ್ಥಗಿತಗೊಂಡಿವೆ ಎಂದು ಕಿಡಿ ಕಾರಿದರು.

ಈ ಹಂತದಲ್ಲಿ ಭದ್ರತೆಗಾಗಿ ಸ್ಥಳಕ್ಕೆ ಧಾವಿಸಿದ ಪೊಲೀಸ್ ಅಧಿಕಾರಿಗಳ ವಾಹನಕ್ಕೆ ದೀರ್ಘ ದಂಡ ನಮಸ್ಕಾರ ಹಾಕಿದ ವೃದ್ದ ರೈತರೊಬ್ಬರು, ಜನ-ಜಾನುವಾರುಗಳು ಬದುಕುವುದಕ್ಕೂ ನೀರಿಲ್ಲ ದುಸ್ಥಿತಿ ತಂದಿದ್ದೀರಿ. ನಮ್ಮ ಸಮಸ್ಯೆ ಇತ್ಯರ್ಥವಾಗದ ಹೊರತು ಸ್ಥಳದಿಂದ ಕದಲುವುದಿಲ್ಲ ಎಂದು ಪಟ್ಟು ಹಿಡಿದರು.

ಕೂಡಲೇ ಜಿಲ್ಲಾಡಳಿತ ತಮ್ಮ ಗ್ರಾಮಗಳಿಗೆ ವಿದ್ಯುತ ಸಂಪರ್ಕ ಕಲ್ಪಿಸದಿದ್ದಲ್ಲಿ ಬೆಳೆದುನಿಂದ ಬೆಳೆಗಳನ್ನು ಉಳಿಸಿಕೊಳ್ಳಲಾಗದೇ ರೈತರು ಆತ್ಮಹತ್ಯೆ ಮಾಡಿಕೊಳ್ಳುವುದು ಖಚಿತ ಎಂದು ಎಚ್ಚರಿಸಿದ್ದಾರೆ.

ಜಿಲ್ಲಾಡಳಿತ ನಿಷೇದಾಜ್ಞೆ ತೆರವು ಮಾಡಬೇಕು. ಕಡಿತಗೊಂಡಿರುವ ವಿದ್ಯುತ್ ಸಂಪರ್ಕ ಕಲ್ಪಿಸಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ಮಾಡುವುದಾಗಿಯೂ ರೈತರು ಎಚ್ಚರಿಸಿದರು. ಆಗ ಅಧಿಕಾರಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ರೈತರ ಮನವೊಲಿಸಿ, ರಸ್ತೆಗೆ ಅಡ್ಡ ಮಲಗಿದ್ದ ರೈತರನ್ನು ಸ್ಥಳದಿಂದ ತೆರವುಗೊಳಿಸಿದರು.

ಉಮರಾಣಿ ಗ್ರಾಮದ ಜಗ್ಗು ಸಾಹುಕಾ ಭೈರಗೊಂಡ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭೀಮಾ ತೀರದ ಹಳ್ಳಿಗಳ ನೂರಾರು ರೈತರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

Shimoga; Deport Zameer Ahmed: ​​MLA Channabasappa

Shimoga; ಜಮೀರ್‌ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweq

Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು

18-muddebihal

Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು

6-muddebihala

Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು

2-muddebihala

Muddebihal: ಟ್ರ್ಯಾಕ್ಟರ್-ಟ್ರೇಲರ್‌ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು

MB-Patil-Minister

Waqf Notice: ಒಂದಿಂಚು ಜಮೀನು ವಕ್ಫ್‌ಗೆ ಹೋಗಲು ಬಿಡಲ್ಲ: ಸಚಿವ ಎಂ.ಬಿ.ಪಾಟೀಲ್‌

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

4-editorial

Editorial: ಪಾಕ್‌ ಪ್ರೇರಿತ ಉಗ್ರರ ತಂತ್ರಕ್ಕೆ ಸೂಕ್ತ ಪ್ರತಿತಂತ್ರ ಈಗಿನ ತುರ್ತು

3-kananda-1

Kannada: ಕನ್ನಡನಾಡಲ್ಲಿ ಕನ್ನಡ ಕಲಿಕೆಯ ಹಾಡು-ಪಾಡು

Shimoga; Deport Zameer Ahmed: ​​MLA Channabasappa

Shimoga; ಜಮೀರ್‌ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.