ನಾಳೆ ಮತ ಎಣಿಕೆಗೆ ಸಕಲ ಸಿದ್ಧತೆ
Team Udayavani, May 22, 2019, 11:12 AM IST
ವಿಜಯಪುರ: ಪರಿಶಿಷ್ಟ ಜಾತಿಗೆ ಮೀಸಲಾಗಿರುವ ವಿಜಯಪುರ ಲೋಕಸಭಾ ಕ್ಷೇತ್ರದ ಚುನಾವಣೆ ಮತ ಎಣಿಕೆ ಮೇ 23ರಂದು ನಗರದಲ್ಲಿರುವ ಸೈನಿಕ ಶಾಲೆಯಲ್ಲಿ ನಡೆಯಲಿದೆ. ಲೋಕಸಭೆ ವ್ಯಾಪ್ತಿಯ 8 ವಿಧಾನಸಭೆ ಕ್ಷೇತ್ರಗಳ ವ್ಯಾಪ್ತಿ ಮತಗಳನ್ನು ಎಣಿಕೆ ಮಾಡಲು ಮೂರು ಕೋಣೆಗಳಲ್ಲಿ ವಿಧಾನಸಭೆ ವಾರು ತಲಾ 14 ಟೇಬಲ್ ವ್ಯವಸ್ಥೆ ಮಾಡಲಾಗಿದೆ. ಮತ ಎಣಿಕೆಗೆ ಸಕಲ ಸಿದ್ಧತೆ ಮಾಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಎಂ.ಕನಗವಲ್ಲಿ ತಿಳಿಸಿದರು.
ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಲೋಕಸಭೆ ಚುನಾವಣೆಯ ವಿಜಯಪುರ ಕ್ಷೇತ್ರ ಮತ ಎಣಿಕೆಯ ಸಿದ್ಧತೆಗಳ ಕುರಿತು ಮಾಹಿತಿ ನೀಡಿದ ಅವರು, ಮೊದಲು ಚುನಾವಣಾ ಕರ್ತವ್ಯ ನಿರತ ಸಿಬ್ಬಂದಿ ಚಲಾಯಿಸಿದ ಹಾಗೂ ಸೇವಾ ನಿರತ ಸಿಬ್ಬಂದಿ ಚಲಾಯಿಸಿ ಮತಪತ್ರಗಳ ಎಣಿಕೆ ನಡೆಯಲಿದೆ. ಈ ಮತಗಳ ಎಣಿಕೆಗೆ 4 ಟೇಬಲ್ ವ್ಯವಸ್ಥೆ ಮಾಡಲಾಗಿದೆ.
ಇದರ ಹೊರತಾಗಿ 8 ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ವಿವಿಧ ಸುತ್ತುಗಳಲ್ಲಿ ಮತ ಎಣಿಕೆ ನಡೆಯಲಿದೆ. ಮುದ್ದೇಬಿಹಾಳ ಕ್ಷೇತ್ರ ವ್ಯಾಪ್ತಿಯಲ್ಲಿ 17 ಸುತ್ತು, ದೇವರಹಿಪ್ಪರಗಿ ಕ್ಷೇತ್ರ ವ್ಯಾಪ್ತಿಯಲ್ಲಿ 18 ಸುತ್ತು, ಬಸವನಬಾಗೇವಾಡಿ ಕ್ಷೇತ್ರ ವ್ಯಾಪ್ತಿಯಲ್ಲಿ 17, ಬಬಲೇಶ್ವರ ಕ್ಷೇತ್ರ ವ್ಯಾಪ್ತಿಯಲ್ಲಿ 18 ಸುತ್ತು, ವಿಜಯಪುರ ನಗರ ಕ್ಷೇತ್ರ ವ್ಯಾಪ್ತಿಯಲ್ಲಿ 19 ಸುತ್ತು, ನಾಗಠಾಣ ಕ್ಷೇತ್ರ ವ್ಯಾಪ್ತಿಯಲ್ಲಿ 22 ಸುತ್ತು, ಇಂಡಿ ಕ್ಷೇತ್ರ ವ್ಯಾಪ್ತಿಯಲ್ಲಿ 20 ಸುತ್ತು, ಸಿಂದಗಿ ಕ್ಷೇತ್ರ ವ್ಯಾಪ್ತಿಯಲ್ಲಿ 19 ಸುತ್ತುಗಳಲ್ಲಿ ಇವಿಎಂಗಳ ಮತ ಎಣಿಕೆ ನಡೆಯಲಿದೆ ಎಂದು ವಿವರಿಸಿದರು.
ಮೇ 23ರಂದು ಬೆಳಗ್ಗೆ 7ಕ್ಕೆ ಭದ್ರತಾ ಕೋಣೆಗಳಿಂದ ಮತಯಂತ್ರಗಳನ್ನು ತೆರೆಯಲಿದ್ದು, ಬೆಳಗ್ಗೆ 8ಕ್ಕೆ ಮತ ಎಣಿಕೆ ಕಾರ್ಯ ಆರಂಭಗೊಳ್ಳಲಿದೆ. ಚುನಾವಣಾ ಆಯೋಗದ ನಿರ್ದೇಶನದಂತೆ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಏಜೆಂಟರ ಎದುರು 5 ಮತಗಟ್ಟೆಗಳ ವಿವಿ ಪ್ಯಾಟ್‌ಗಳ ಚೀಟಿ ಎಣಿಕೆ ಮಾಡಿ ಮತದಾನ ಮಾಡಿರುವ ಮತಯಂತ್ರದ ಸಂಖ್ಯೆಗೆ ತಾಳೆ ಮಾಡಲಾಗುತ್ತದೆ ಎಂದು ವಿವರಿಸಿದರು.
ಮತ ಎಣಿಕೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಪ್ರತಿ ವಿಧಾನಸಭಾ ಕ್ಷೇತ್ರವಾರು 18 ಜನ ಮತ ಎಣಿಕೆ ಮೇಲ್ವಿಚಾರಕ, 18 ಜನ ಮತ ಎಣಿಕೆ ಸಹಾಯಕ ಹಾಗೂ 18 ಜನ ಮೈಕ್ರೋ ಆಬ್ಸ್ರ್ವರ್ ನೇಮಕ ಮಾಡಲಾಗಿದ್ದು, ಒಟ್ಟಾರೆಯಾಗಿ 144 ಮತಎಣಿಕೆ ಮೇಲ್ವಿಚಾರಕ, 144 ಮತ ಎಣಿಕೆ ಸಹಾಯಕ ಹಾಗೂ 144 ಮೈಕ್ರೋ ಆಬ್ಸ್ರ್ವರ್ ನಿಯೋಜಿಸಲಾಗಿದೆ ಎಂದರು.
32 ಜನ ಟ್ಯಾಬುಲೇಷನ್ ಸಿಬ್ಬಂದಿ, 40 ಜನ ಸೀಲಿಂಗ್ ಸಿಬ್ಬಂದಿ, ಇವಿಎಂಗಳನ್ನು ಟೇಬಲ್ಗಳಿಗೆ ಸಾಗಿಸಲು 128 ಸಿಬ್ಬಂದಿ ಹಾಗೂ 24 ಜನ ಹಾಜರಾತಿ ಪಡೆಯುವ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ವಿವರಿಸಿದರು. ಪೋಸ್ಟಲ್ ಬ್ಯಾಲೆಟ್ ಎಣಿಕೆಗಾಗಿ ಪ್ರತ್ಯೇಕವಾಗಿ 20 ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಂದರು.
ಮತಎಣಿಕೆ ಕೇಂದ್ರದಲ್ಲಿ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ ಸೇರಿದಂತೆ ಚುನಾವಣಾ ಏಜೆಂಟರಾದಿಯಾಗಿ ಯಾರೊಬ್ಬರು ಮೊಬೈಲ್ ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ. ಮತ ಎಣಿಕೆಗೆ ನೇಮಕಗೊಂಡಿರುವ ಪಾಸ್ ಹೊಂದಿದ ಏಜೆಂಟರಿಗೆ ಸೈನಿಕ ಶಾಲೆಯ ಎರಡನೇ ಗೇಟ್ನಿಂದ ಪ್ರವೇಶ ಕಲ್ಪಿಸಲಾಗುತ್ತದೆ. ಮೊದಲನೇ ಗೇಟ್ ಮೂಲಕ ಅಭ್ಯರ್ಥಿಗಳು, ಚುನಾವಣಾ ಮತ ಎಣಿಕೆ ಕರ್ತವ್ಯಕ್ಕೆ ನಿಯೋಜಿತ ಸಿಬ್ಬಂದಿ, ಎಣಿಕೆ ಕೇಂದ್ರಕ್ಕೆ ಪ್ರವೇಶಿಸುವ ಅಧಿಕೃತ ಪತ್ರ ಹೊಂದಿರುವ ಪತ್ರಕರ್ತರನ್ನು ಮಾತ್ರ ಮತ ಎಣಿಕೆ ಕೇಂದ್ರಕ್ಕೆ ಪ್ರವೇಶ ನೀಡಲಾಗುತ್ತಿದೆ.
ಮತ ಎಣಿಕೆ ಪ್ರಕ್ರಿಯೆ ಹಿನ್ನೆಲೆಯಲ್ಲಿ ಕಾನೂನು-ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕಲಂ 144 ರನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮುಂಜಾಗೃತಾ ಕ್ರಮವಾಗಿ ಮೇ 22ರಂದು ಮಧ್ಯರಾತ್ರಿಯಿಂದ 23ರ ಮಧ್ಯರಾತ್ರಿ ವರೆಗೆ ವಿಜಯಪುರ ಜಿಲ್ಲೆಯಲ್ಲಿ ಪಾನ ನಿರೋಧ ದಿನ ಎಂದು ಘೋಷಿಸಲಾಗಿದೆ ಎಂದರು.
ಸ್ವೀಪ್ ಸಮಿತಿ ಅಧ್ಯಕ್ಷ ಜಿಪಂ ಸಿಇಒ ವಿಕಾಸ ಸುರಳಕರ, ಎಸ್ಪಿ ಪ್ರಕಾಶ ನಿಕ್ಕಂ ಪತ್ರಿಕಾಗೋಷ್ಠಿಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು
ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು
ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.