ಮಲೇರಿಯಾ ತಡೆಗೆ ಸಹಕರಿಸಿ
Team Udayavani, Apr 28, 2022, 4:03 PM IST
ಇಂಡಿ: ಮನೆ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ನೀರು ನಿಲ್ಲದಂತೆ ಮುಂಜಾಗ್ರತಾ ಕ್ರಮ ಕೈಗೊಂಡು ಮಲೇರಿಯಾ ಬರದಂತೆ ತಡೆಗಟ್ಟಬೇಕು ಎಂದು ಪ್ರಾಥಮಿಕ ಆರೋಗ್ಯ ಕೇಂದ್ರ ಹಲಸಂಗಿ ವೈದ್ಯಾಧಿಕಾರಿ ಡಾ| ಸೀಮಾ ಅಮರಿನ್ ಬಾನು ಹೇಳಿದರು.
ಬುಧವಾರ ತಾಲೂಕಿನ ಭತಗುಣಕಿ ಗ್ರಾಮದಲ್ಲಿ ನಡೆದ ತಾಲೂಕು ಮಟ್ಟದ ವಿಶ್ವ ಮಲೇರಿಯಾ ದಿನದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮನುಷ್ಯನಿಗೆ ಅನಾಫಿಲಿಸ್ ಸೊಳ್ಳೆ ಕಚ್ಚುವುದರಿಂದ ಕೆಂಪು ರಕ್ತದ ಕಣಗಳು ನಾಶಪಡಿಸುತ್ತದೆ. ಮಲೇರಿಯಾ ಜ್ವರ ಕೇವಲ ನಮ್ಮ ಭಾರತದಲ್ಲಿ ಅಷ್ಟೇಯಲ್ಲ ಇದು ಇಡಿ ವಿಶ್ವದಾದ್ಯಂತ ಮಾರಕ ಕಾಯಿಲೆ ಎಂಬ ಕುಖ್ಯಾತಿ ಪಡೆದಿದೆ ಎಂದರು.
ವಿಶೇಷವಾಗಿ ಉಷ್ಣ ವಲಯ ಪ್ರದೇಶಗಳಲ್ಲಿ ಇದು ಜನರಲ್ಲಿ ನಡುಕ ಹುಟ್ಟಿಸಿದೆ. ಅನಾಫಿಲಿಸ್ ಹೆಣ್ಣು ಸೊಳ್ಳೆ ಪ್ಲಾಸ್ಮೋಡಿಯಂ ಎಂಬ ಪ್ಯಾರಾಸೈಟ್ ನಿಂದ ತಾನೂ ಸೋಂಕಿಗೆ ಒಳಗಾಗಿ ಮನುಷ್ಯರಿಗೂ ಸೋಂಕನ್ನು ಹತ್ತಿಸುತ್ತದೆ ಎಂದರು.
ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಸುನಂದಾ ಅಂಬಲಗಿ ಮಾತನಾಡಿ, ಮಲೇರಿಯಾ ಸೋಂಕಿತ ಸೊಳ್ಳೆಯು ವ್ಯಕ್ತಿಯನ್ನು ಕಡಿದ 4ರಿಂದ 7ದಿನಗಳ ಒಳಗಾಗಿ ಜ್ವರದ ಲಕ್ಷಣಗಳು ಕಾಣಿಸಿಕೊಳ್ಳುತ್ತದೆ. ಆದರೆ ತಲೆನೋವು, ಜ್ವರ, ರಕ್ತಸ್ರಾವ ಅನೇಕ ಲಕ್ಷಣಗಳು ಕಂಡು ಬಂದರೆ ವೈದ್ಯರನ್ನು ಸಂಪರ್ಕಿಸಿ. ಮಲೇರಿಯಾನ್ನು ತಡೆಗಟ್ಟಲು ಆದಷ್ಟೂ ಸೊಳ್ಳೆಗಳಿಂದ ದೂರವಿರಿ. ಮನೆಯ ಸುತ್ತ ಸ್ವಚ್ಛತೆ ಬಗ್ಗೆ ಕಾಳಜಿ ವಹಿಸಿ ನೀರು ಸಂಗ್ರಹವಾಗಲು ಬಿಡಬೇಡಿ ಎಂದರು.
ಪ್ರತಿ ಮನೆ ಮನೆಗೂ ಆಶಾ ಕಾರ್ಯಕರ್ತೆಯರು ಹೋಗಿ ಲಾರ್ವಾ ಸಮೀಕ್ಷೆ ಮಾಡಲಿದ್ದು ಸಾರ್ವಜನಿಕರು ಸಹಕರಿಸಿ ಎಂದರು. ಗ್ರಾಪಂ ಅಧ್ಯಕ್ಷೆ ಕವಿತಾ ಹೊನಕೋರೆ, ಭುವನೇಶ್ವರಿ ಬಂಗಲಿ, ರೇಷ್ಮಾ ಉತ್ಸಾದ, ಶಕ್ತಿಕುಮಾರ ಬನಸೋಡೆ ಸೇರಿದಂತೆ ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.