![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Feb 9, 2022, 5:54 PM IST
ಮುದ್ದೇಬಿಹಾಳ: ನಗರೋತ್ಥಾನ ಯೋಜನೆಯ ಹಂತ-2ರಡಿ ಬಿಡುಗಡೆಯಾಗಿರುವ ವಿಶೇಷ ಅನುದಾನದಲ್ಲಿ ಪಟ್ಟಣ ಪ್ರದೇಶದ ವಿವಿಧ ಬಡಾವಣೆಗಳ ಆಂತರಿಕ ರಸ್ತೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲು ಶಾಸಕ, ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧ್ಯಕ್ಷ ಎ.ಎಸ್. ಪಾಟೀಲ ನಡಹಳ್ಳಿಯವರು ಪುರಸಭೆ ಮತ್ತು ಪಿಡಬ್ಲ್ಯೂಡಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಮಂಗಳವಾರ ಪಟ್ಟಣದ ವಿದ್ಯಾನಗರ ಬಡಾವಣೆಯಲ್ಲಿ ಸಂಚರಿಸಿ ಮುಖ್ಯ ರಸ್ತೆಗಳನ್ನು ಸಂಪರ್ಕಿಸುವ ಆಂತರಿಕ ರಸ್ತೆಗಳ ದುರವಸ್ಥೆಯನ್ನು ಅಧಿಕಾರಿಗಳು, ಪುರಸಭೆ ಸದಸ್ಯರು ಮತ್ತು ಬಡಾವಣೆಯ ಪ್ರಮುಖರೊಂದಿಗೆ ಪರಿಶೀಲಿಸಿದ ಅವರು ಎಲ್ಲೆಲ್ಲಿ ರಸ್ತೆಗಳು ಸಂಪೂರ್ಣ ಹದಗೆಟ್ಟು ಸಾರ್ವಜನಿಕರಿಗೆ ತೊಂದರೆ ಆಗಿದೆಯೋ ಅಂಥ ರಸ್ತೆಗಳಿಗೆ ಮೊದಲ ಆದ್ಯತೆ ನೀಡಿ ಕ್ರಿಯಾಯೋಜನೆಯಲ್ಲಿ ಅಳವಡಿಸಿಕೊಳ್ಳಲು ಸೂಚಿಸಿದರು.
ಈ ವೇಳೆ ಬಡಾವಣೆಯ ನಿವಾಸಿಗಳಿಂದ ಕೇಳಿ ಬಂದ ಅಹವಾಲು, ಬೇಡಿಕೆಗಳನ್ನೂ ದಾಖಲಿಸಿಕೊಂಡು ಅಗತ್ಯ ಪರಿಹಾರ ಕಲ್ಪಿಸುವಂತೆ ತಿಳಿಸಿದರು. ಪುರಸಭೆ ಸದಸ್ಯರಾದ ಸಂಗಮ್ಮ ದೇವರಳ್ಳಿ, ಸಹನಾ ಬಡಿಗೇರ, ಬಸವರಾಜ ಮುರಾಳ, ಸುನೀಲ ಹಡಲಗೇರಿ, ಬಿಜೆಪಿ ಧುರೀಣರಾದ ರಾಜೇಂದ್ರಗೌಡ ರಾಯಗೊಂಡ, ಬಸವರಾಜ ಬೂದಿಹಾಳಮಠ, ವಿಜಯಕುಮಾರ ಬಡಿಗೇರ, ಪಿಡಬ್ಲೂಡಿಯ ಸಹಾಯಕ ಕಾರ್ಯಪಾಲಕ ಅಭಿಯಂತರ ಆರ್.ಎಂ.ಹುಂಡೇಕಾರ, ಪುರಸಭೆ ಮುಖ್ಯಾಕಾರಿ ಸುನೀಲ ಪಾಟೀಲ, ಇಂಜಿನೀಯರುಗಳಾದ ಅಶೋಕ ಬಿರಾದಾರ, ಬಗಲಿ, ಪುರಸಭೆಯ ಪರಿಸರ ಮತ್ತು ಆರೋಗ್ಯ ವಿಭಾಗದ ಸಿಬ್ಬಂದಿಗಳು, ಬಡಾವಣೆಯ ಪ್ರಮುಖರು ಇದ್ದರು.
ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ
Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ
Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !
Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.