ಜಲ ಸಂರಕ್ಷಣೆಗೆ ಆದ್ಯತೆ ನೀಡಿ : ಹೊಸಮನಿ
Team Udayavani, Mar 24, 2021, 8:23 PM IST
ವಿಜಯಪುರ: ಐತಿಹಾಸಿಕ ಸ್ಮಾರಕಗಳ ನಗರವಾದ ವಿಜಯಪುರದಲ್ಲಿ ತಾಜಬಾವಡಿ ಸೇರಿ ಅನೇಕ ಜಲ ಸಂರಕ್ಷಣೆ ಕೆರೆಗಳಿವೆ. ಪಾರಂಪರಿಕ ಕೆರೆಗಳನ್ನು, ಅಮೂಲ್ಯವಾದ ಜಲ ಹಾಗೂ ಜಲಮೂಲಗಳ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಬೇಕು. ಇಂಥ ಕೆರೆಗಳನ್ನು ಸ್ವತ್ಛಗೊಳಿಸಿ ಸಾರ್ವಜನಿಕರಿಗೆ ಅಲ್ಲಿನ ನೀರು ಬಳಕೆಗೆ ಅವಕಾಶ ಕಲ್ಪಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ವೆಂಕಣ್ಣ ಹೊಸಮನಿ ಹೇಳಿದರು.
ನಗರದ ಕಾಕಾ ಕಾರ್ಖಾನೆ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ, ಸ್ಪಂದನಾ ಸ್ವಯಂ ಸೇವಾ ಸಂಸ್ಥೆ, ಜೈನ್ ಇರಿಗೇಶನ್ ಸಿಸ್ಟಮ್ ಲಿ. ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಜಲ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಜೂ. 5ರಂದು ಎಲ್ಲ ಇಲಾಖೆಗಳು ಸೇರಿ ಪರಿಸರ ಮಾಲಿನ್ಯ ತಡೆಗಟ್ಟಲು ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಭವಿಷ್ಯದ ಪೀಳಿಗೆಗೆ ನಾವು ಸಸಿಗಳನ್ನು ನೆಟ್ಟು ಮರವಾಗಿ ಬೆಳೆಸು, ಶುದ್ಧವಾದ ಗಾಳಿ, ನಿರ್ಮಲ ನೀರು, ಉತ್ತಮ ಪರಿಸರವನ್ನು ನಿರ್ಮಾಣ ಮಾಡಿಕೊಡಬೇಕಿದೆ ಎಂದರು. ಕ.ನ.ನಿ.ಸ.ಒ.ಚ. ಮಂಡಳಿ ವಿಭಾಗ ಕಾರ್ಯಪಾಲಕ ಅಭಿಯಂತರ ಎಸ್.ಎಸ್. ಪಟ್ಟಣಶೆಟ್ಟಿ ಮಾತನಾಡಿ, ಸಮೂಹ ಮಾಧ್ಯಮಗಳು ನೀರಿನ ಬಳಕೆ, ಸಂರಕ್ಷಣೆ ಬಗ್ಗೆ ಪ್ರಚಾರ ಹಾಗೂ ಜಾಗೃತಿ ಕಾರ್ಯಕ್ರಮ ರೂಪಿಸಿ ಜನರಿಗೆ ತಲುಪಿಸಬೇಕು ಎಂದು ಮನವಿ ಮಾಡಿದರು.
ಪ್ರಾದೇಶಿಕ ಕೃಷಿ ಸಂಶೋಧನಾ ಕೇಂದ್ರ ಸಹ ಸಂಶೋಧನಾ ನಿರ್ದೇಶಕ ಅಶೋಕ ಸಜ್ಜನ ಮಾತನಾಡಿದರು. ಸಿವಿಲ್ ಎಂಜಿನಿಯರಿಂಗ್ ವಿಭಾಗ ಸಿಕ್ಯಾಬ್ ಕಾಲೇಜು ಮುಖ್ಯಸ್ಥ ಎಸ್. ಜೆ. ಅರವೇಕರ, ಬಿಎಲ್‌ಡಿಇ ಸಂಸ್ಥೆ ಸಹಾಯಕ ಪ್ರಾಧ್ಯಾಪಕಿ ಅನುರಾಧ ಟಂಕಸಾಲಿ ಮತ್ತು ಮಹಾನಗರ ಪಾಲಿಕೆ ಕಾನೂನು ಸಲಹೆಗಾರ ಐ.ಎಂ. ಇಂಡಿಕರ ಇದ್ದರು. ಉಮೇಶ ಪಂಚಾಳ, ರಾಹುಲ್ ಪಂಚಾಳ ಪ್ರಾರ್ಥಿಸಿದರು. ಸಹಾಯಕ ಕಾರ್ಯಪಾಲಕ ಅಭಿಯಂತರ ಬಿ.ವೈ.ನದಾಫ್ ನಿರೂಪಿಸಿದರು. ಎಂ.ಎಸ್. ದೇವರ ಸ್ವಾಗತಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ವಿದ್ಯಾರ್ಥಿನಿಯರಿಗೆ ಲೈಂಗಿ*ಕ ಕಿರುಕುಳ: ಸರಕಾರಿ ಕಾಲೇಜು ಪ್ರಾಂಶುಪಾಲ ಸೆರೆ
Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು
ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು
ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.