ಇಂದು ಖಾಸಗಿ ಶಾಲೆ ಬಂದ್
Team Udayavani, Dec 10, 2019, 12:15 PM IST
ಸಿಂದಗಿ: ಡಿ. 10 ರಂದು ಸಿಂದಗಿ ತಾಲೂಕಿನ ಎಲ್ಲ ಅನುದಾನ ರಹಿತ ಖಾಸಗಿ ಶಾಲೆಗಳು ಬಂದ್ ಮಾಡಲಾಗುವದು ಎಂದು ಅನುದಾನ ರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ತಾಲೂಕಾಧ್ಯಕ್ಷ ಡಿ.ಜಿ. ಮಠ ಹೇಳಿದರು.
ಸೋಮವಾರ ಪಟ್ಟಣದ ಖಾಸಗಿ ಶಾಲೆಗಳಿಗೆ ಭೇಟಿ ನೀಡಿ ಮಾತನಾಡಿದ ಅವರು, ಅನುದಾನ ರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳ ಬೇಡಿಕೆಗಳನ್ನು ಈಡೇರಿಸುವಂತೆ ಸರಕಾರಕ್ಕೆ ಒತ್ತಾಯಿಸಿ ವಿಜಯಪುರದಲ್ಲಿ ಡಿ. 10ರಂದು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಖಾಸಗಿ ಶಿಕ್ಷಣ ಸಂಸ್ಥೆಗಳ ಮೇಲೆ ಸರಕಾರ, ಅಧಿಕಾರಿಗಳು ಹಾಗೂ ಜನಪ್ರತಿನಿ ಧಿಗಳು ಅವೈಜ್ಞಾನಿಕ ಕಾನೂನು ಹೆರುವ ಮೂಲಕ ಖಾಸಗಿ ಶಿಕ್ಷಣ ಸಂಸ್ಥೆಗಳ ಅಸ್ತಿತ್ವ ಹಾಳು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಅನುದಾನ ರಹಿತ ಖಾಸಗಿ ಶಾಲೆಗಳ ವಿವಿಧ ಬೇಡಿಕೆಗಳಾದ 2019- 2020 ರ ಆರ್‌ಟಿಇ ಶುಲ್ಕ ಸಮಯಕ್ಕೆ ಸರಿಯಾಗಿ ಮರುಪಾವತಿ ಮಾಡಬೇಕು, ಪ್ರಥಮ ಮಾನ್ಯತೆ ಮತ್ತು ಮಾನ್ಯತೆ ನವೀಕರಣ ನಿಗದಿತ ಸಮಯದಲ್ಲಿ ಮಾಡಬೇಕು, ಸರಕಾರದಿಂದ ಶೌಚಾಲಯ ನಿರ್ಮಾಣ ಮಾಡಬೇಕು, ಸರಕಾರದಿಂದ ಮಧ್ಯಾಹ್ನ ಬಿಸಿಯೂಟ ನೀಡಬೇಕು, 1995ರ ನಂತರ ಪ್ರಾರಂಭವಾದ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳು ಅನುದಾನಕ್ಕೊಳಪಡಿಸಬೇಕು, ಖಾಸಗಿ ಶಾಲೆಗಳ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ವಿತರಿಸುವುದು ಸೇರಿದಂತೆ ಹಲವು ಬೇಡಿಕೆ ಈಡೇರಿಸುವಂತೆಒತ್ತಾಯಿಸಿ ವಿಜಯಪುರದಲ್ಲಿ ಡಿ. 10ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಸಿಂದಗಿ ತಾಲೂಕಿನ ಎಲ್ಲ ಅನುದಾನ ರಹಿತ ಖಾಸಗಿ ಶಾಲೆಗಳ ಮುಖ್ಯಸ್ಥರು ಪ್ರತಿಭಟನೆಯಲ್ಲಿ ಭಾಗವಹಿಸಲು ಮನವಿ ಮಾಡಿದರು.
ಅನುದಾನ ರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಕಾರ್ಯದರ್ಶಿ ಮಲ್ಲಿಕಾರ್ಜುನ ಬಿರಾದಾರ ಮಾತನಾಡಿ, ಆರ್‌ಟಿಇ ಅಡಿಯಲ್ಲಿ ಜನಸಾಮಾನ್ಯರ ಮಕ್ಕಳು ಎಲ್ಲ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಣ ಪಡೆದುಕೊಳ್ಳುತ್ತಿದ್ದರು. ಆದರೆ ಸರಕಾರ ಆರ್‌ಟಿಇ ಕಾನೂನನ್ನು ಅವೈಜ್ಞಾನಿಕ ರೀತಿಯಲ್ಲಿ ಬದಲಾವಣೆ ತರುವ ಮೂಲಕ ಜನಸಾಮಾನ್ಯರ ಮಕ್ಕಳಿಗೆ ಆರ್‌ಟಿಇ ಅಡಿಯಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಣ ಪಡೆಯಲು ವಂಚಿತರನ್ನಾಗಿ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಆರ್.ಡಿ. ಕುಲಕರ್ಣಿ, ಎಂ.ಎ. ಖತೀಬ, ಶ್ರೀಶೈಲ ಪರಗೊಂಡ, ಪ್ರಕಾಶ ಚೌಧರಿ, ಚಂದ್ರು ಹೆರೂರ, ಚಂದ್ರಶೇಖರ ನಾಗರಭಟ್ಟ, ಶರಣಗೌಡ ಬಿರಾದಾರ, ರಮೇಶ ಪೂಜಾರ, ಸುರೇಶಬಾಬು ಕೋಟಿಖಾನೆ, ಸುನೀಲ ಗಡಗಿ, ವಿದ್ಯಾಧರ ಟಕ್ಕಳಕಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು
Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು
Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು
Muddebihal: ಟ್ರ್ಯಾಕ್ಟರ್-ಟ್ರೇಲರ್ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.