ಟವೇರಾಗೆ ಕಂಟೇನರ್ ಡಿಕ್ಕಿ: ಇಬ್ಬರು ಕಬಡ್ಡಿ ಆಟಗಾರರ ದುರಂತ ಸಾವು
ಪ್ರೋ ಕಬಡ್ಡಿ ಪಂದ್ಯಾವಳಿ ಆಯ್ಕೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ಇಬ್ಬರು ಆಟಗಾರರು ಅಪಘಾತದಲ್ಲಿ ದುರ್ಮರಣ
Team Udayavani, Mar 17, 2021, 12:49 PM IST
ವಿಜಯಪುರ: ಕಬಡ್ಡಿ ಕ್ರೀಡಾಪಟುಗಳಿದ್ದ ಟವೇರಾ ವಾಹನಕ್ಕೆ ಕಂಟೇನರ್ ಡಿಕ್ಕಿಯಾಗಿ ಮಹಾರಾಷ್ಟ್ರ ಮೂಲದ ಇಬ್ಬರು ಕ್ರೀಡಾಪಟುಗಳು ದುರಂತ ಸಾವಿಗೀಡಾಗಿ, ಆರು ಜನರು ಗಂಭೀರ ಗಾಯಗೊಂಡ ದುರಂತ ಕೊಲ್ಹಾರ ಬಳಿ ಸಂಭವಿಸಿದೆ.
ಕೊಲ್ಹಾರ ಪೊಲೀಸ್ ಠಾಣೆ ವ್ಯಾಪ್ತಿಯ ರೋಣಿಹಾಳ ಕ್ರಾಸ್ ಬಳಿ ಈ ದುರಂತ ಸಂಭವಿಸಿದ್ದು, ಘಟನೆಯಲ್ಲಿ ಮೃತರನ್ನು ಸೋಹೇಲ್ ಇಸ್ಮಾಯಿಲ್ (20)ಹಾಗೂ ಮಹಾದೇವ ಬಾಪು ಅವಟಿ (23) ಎಂದು ಗುರುತಿಸಲಾಗಿದೆ.
ರೋಣಿಹಾಳ ಬಳಿ ರಾಷ್ಟ್ರೀಯ ಹೆದ್ದಾರಿ-218 ರ ಕ್ರಾಸ್ ಬಳಿ ಈ ದುರಂತ ಸಂಭವಿಸಿದ್ದು, ಘಟನೆಯಲ್ಲಿ ಇನ್ನೂ ಎಂಟು ಜನರು ಗಾಯಗೊಂಡಿದ್ದು, ಗಾಯಾಳುಗಳನ್ನ ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ: 6 ತಿಂಗಳಲ್ಲಿ ಸರ್ಕಾರ ಸಮಸ್ಯೆ ಬಗೆಹರಿಸದಿದ್ದರೆ ಬೃಹತ್ ಸಮಾವೇಶ: ಜಯಮೃತ್ಯುಂಜಯ ಸ್ವಾಮೀಜಿ
ಮಹಾರಾಷ್ಟ್ರ ರಾಜ್ಯದ ಬಾರಾಮತಿಯಿಂದ ಬಾಗಲಕೋಟೆ ಜಿಲ್ಲೆಯ ತುಳಸಿಗಿರಿಗೆ ಪ್ರೋ ಕಬಡ್ಡಿ ಪಂದ್ಯಾವಳಿ ಆಯ್ಕೆಯಲ್ಲಿ ಪಾಲ್ಗೊಳ್ಳಲು ಟವೇರಾ ವಾಹನದಲ್ಲಿ ತೆರಳುತ್ತಿದ್ದರು. ಕ್ರೀಡಾಪಟುಗಳಿದ್ದ ವಾಹನ ರೋಣಿಹಾಳ ಕ್ರಾಸ್ ಬಳಿ ಬರುತ್ತಲೇ ಎದುರಿನಿಂದ ಬಂದ ಬ್ಯಾಡಗಿಯಿಂದ ದೆಹಲಿಗೆ ಹೊರಟಿದ್ದ ಕಂಟೇನರ್ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ.
ಇದನ್ನೂ ಓದಿ: ಹಾವೇರಿ: ಇಬ್ಬರು ವ್ಯಕ್ತಿಗಳನ್ನು ಬರ್ಬರವಾಗಿ ಹತ್ಯೆಗೈದ ದುಷ್ಕರ್ಮಿಗಳು
ಕೊಲ್ಹಾರ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ, ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ: ಪ್ಲ್ಯಾಸ್ಟಿಕ್ ನೀತಿ ಬೆಂಬಲಿಸಿ : ಹ್ಯಾರಿಸ್ ಗೆ ಭಾರತಿಯ ಅಮೇರಿಕನ್ ಮಹಿಳಾ ಉದ್ಯಮಿಗಳ ಮನವಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
MUST WATCH
ಹೊಸ ಸೇರ್ಪಡೆ
IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.