ಚೈತನ್ಯ ಬ್ಯಾಂಕ್ ವಿರುದ್ದ ತನಿಖೆಗೆ ಆಗ್ರಹ
Team Udayavani, May 17, 2022, 3:49 PM IST
ವಿಜಯಪುರ: ನಗರದ ಚೈತನ್ಯ ಮಹಿಳಾ ಸಹಕಾರಿ ಬ್ಯಾಂಕ್‌ನಿಂದ ಮಹಿಳಾ ಸಂಘಟನೆಗಳಿಗೆ ವಂಚನೆಯಾಗುತ್ತಿದೆ. ಅಲ್ಲದೇ ಬ್ಯಾಂಕ್ ನಲ್ಲೂ ಅವ್ಯವಹಾರ ನಡೆಯುತ್ತಿದೆ. ಈ ಬಗ್ಗೆ ಕೂಡಲೇ ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ನಗರದ ಡಾ| ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ, ಅಪರ ಜಿಲ್ಲಾಧಿಕಾರಿ ರಮೇಶ ಕಳಸದ ಅವರಿಗೆ ಮನವಿ ಸಲ್ಲಿಸಲಾಯಿತು. ಜಿಲ್ಲಾ ಸಂಚಾಲಕ ವಿನಾಯಕ ಗುಣಸಾಗರ ಹಾಗೂ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯಅಶೋಕ ಚಲವಾದಿ ಮಾತನಾಡಿ, ಚೈತನ್ಯ ಬ್ಯಾಂಕ್‌ನಿಂದಾಗುತ್ತಿರುವ ಮೋಸ-ಅನ್ಯಾಯ ಪ್ರಶ್ನಿಸಿದರೆ ಬ್ಯಾಂಕ್ ಅಧಿಕಾರಿ-ಸಿಬ್ಬಂದಿ ದಬ್ಟಾಳಿಕೆ ಮಾಡುತ್ತಿದ್ದಾರೆ. ಗ್ರಾಮೀಣ ಪ್ರದೇಶದ ಮಹಿಳಾ ಸಂಘಗಳಿಗೆ ಸಾಲ ನೀಡಿ, ಮರು ಪಾವತಿ ವಿಷಯದಲ್ಲಿ ಭಾರಿ ಪ್ರಮಾಣದಲ್ಲಿ ವಂಚನೆ ಮಾಡಲಾಗುತ್ತಿದೆ ಎಂದು ದೂರಿದರು.
ದಸಂಸ ಸಂಚಾಲಕ ಸಿದ್ದು ರಾಯಣ್ಣವರ ಮಾತನಾಡಿ, ಚೈತನ್ಯ ಮಹಿಳಾ ಸಹಕಾರಿ ಬ್ಯಾಂಕ್‌ನ ಎಲ್ಲ ವ್ಯವಹಾರಗಳ ಬಗ್ಗೆ ಸಮಗ್ರ ತನಿಖೆ ನಡೆಸಬೇಕು. ಗ್ರಾಮೀಣ ಮಹಿಳೆಯರಿಗೆ ವಂಚಿಸಿರುವ ಎಲ್ಲ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.
ತವರುಮನೆ ಮಹಿಳಾ ಸಂಸ್ಥೆ ಅಧ್ಯಕ್ಷೆ ಮಂಜುಳಾ ಮ್ಯಾಗೇರಿ, ಶರಣು ಶಿಂಧೆ, ರಮೇಶ ಧರಣಾಕರ, ಪರಶುರಾಮ ದಿಂಡವಾರ, ವಿಜಯಕುಮಾರ ಕಾಂಬಳೆ, ಪ್ರಕಾಶ ಗುಡಿಮನಿ, ಕವಿತಾ ಹಿರೇಮಠ, ಸುನಿತಾ ಭಜಂತ್ರಿ, ಪವಿತ್ರಾ ಶೀಲವಂತ, ಸವಿತಾ ಯಳವಾರ, ಗಿರಿಜಾ ಚಿರಲದಿನ್ನಿ, ಶಶಿಕಲಾ ಮ್ಯಾಗೇರಿ, ರತ್ನಾ ಮ್ಯಾಗೇಶಿ, ರಜಿಯಾ ಅತ್ತಾರ, ರೇಣುಕಾ ಚಿರಲದಿನ್ನಿ, ಮಲಕಮ್ಮ ಪಾಟೀಲ ಸೇರಿದಂತೆ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು
ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು
ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ
Sanju Weds Geetha 2: ಸಂಜು-ಗೀತಾಗೆ ಕಿಚ್ಚ ಸಾಥ್
Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್ ಮಾದರಿಯ ಎಚ್ ಎಂಪಿವಿ ವೈರಸ್?
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.