ಪರಿಸರ ಸಂರಕ್ಷಣೆಗೆ ಮುಂದಾಗಿ : ವೆಂಕನಗೌಡ
Team Udayavani, Apr 18, 2021, 8:06 PM IST
ಮುದ್ದೇಬಿಹಾಳ: ಕೊರೊನಾದ ಈ ಸಂಕಷ್ಟದ ದಿನಗಳಲ್ಲಿ ಹೊತ್ತು ಕಳೆಯಲು ಅನವಶ್ಯಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದಕ್ಕಿಂತ ಗಿಡಗಳ ನೆಡುವಿಕೆ, ನೆಟ್ಟಿರುವ ಗಿಡ ಮರಗಳಿಗೆ ನೀರುಣಿಸುವಿಕೆ ಸೇರಿದಂತೆ ಪರಿಸರ ಸಂರಕ್ಷಣೆಗೆ ಯುವ ಸಮೂಹ ಮುಂದಾಗಬೇಕು ಎಂದು ಸರ್ ಎಂ.ವಿಶ್ವೇಶ್ವರಯ್ಯ ವಿಜ್ಞಾನ ಪಪೂ ಕಾಲೇಜಿನ ಅಧ್ಯಕ್ಷ, ಡಿಸಿಸಿ ಬ್ಯಾಂಕ್ ನಿರ್ದೇಶಕ ವೆಂಕನಗೌಡ ಪಾಟೀಲ ಸಲಹೆ ನೀಡಿದರು.
ಮುದ್ದೇಬಿಹಾಳ ಪಟ್ಟಣದ ಹುಡ್ಕೊà ಹತ್ತಿರ ಇರುವ ಶಿರವಾಳ ಲೇಔಟ್‌ನಲ್ಲಿ ಅರಣ್ಯ ಇಲಾಖೆಯವರು ನೆಟ್ಟ ಗಿಡಗಳಿಗೆ ಸ್ವಂತ ಖರ್ಚಿನಲ್ಲಿ ನೀರುಣಿಸುವ ಮೂಲಕ ತಮ್ಮ ಜನ್ಮದಿನ ಆಚರಿಸಿಕೊಂಡು ಅವರು ಮಾತನಾಡಿದರು. ಅಮೂಲ್ಯವಾದ ಸಮಯ ವ್ಯರ್ಥಗೊಳಿಸದೆ ಸದುಪಯೋಗ ಪಡಿಸಿಕೊಳ್ಳಬೇಕು. ವಿದ್ಯಾರ್ಥಿಗಳು, ಯುವಕರು ಮೊಬೈಲ್, ವಾಟ್ಸ್‌ಆ್ಯಪ್, ಫೇಸ್‌ಬುಕ್ ಗೀಳು ಅಂಟಿಸಿಕೊಂಡು ಸಮಯ ವ್ಯರ್ಥಗೊಳಿಸುತ್ತಿರುವುದು ಬೇಸರದ ಸಂಗತಿ.
ಇದರ ಬದಲಿಗೆ ಉದ್ಯಾನವನಗಳಿಗೆ ಹೋಗಿ ಪರಿಸರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. ಹಸಿರು ತೋರಣ ಗೆಳೆಯರ ಬಳಗದ ಸದಸ್ಯರು ನಿತ್ಯವೂ ಬೆಳಗಿನ ಸಮಯದಲ್ಲಿ ಗಿಡಗಳನ್ನು ನೆಡುವ, ರಕ್ಷಿಸುವ ಕೆಲಸ ಮಾಡುತ್ತ, ಇವತ್ತಿನ ಅತ್ಯವಶ್ಯಕ ಜವಾಬ್ದಾರಿಯಾಗಿರುವ ಪರಿಸರ ರಕ್ಷಣೆಯಂಥ ಕೆಲಸದಲ್ಲಿ ತೊಡಗಿರುವುದು ಹೆಮ್ಮೆಯ ಹಾಗೂ ಮಾದರಿ ಕೆಲಸ ಎಂದರು.
ತಮ್ಮ ಜನ್ಮದಿನ ಹಿನ್ನೆಲೆ ಎರಡು ಟ್ಯಾಂಕರ್ ಮೂಲಕ ಸುಮಾರು 50 ಗಿಡಗಳಿಗೆ ನೀರುಣಿಸುವ ಕೆಲಸಕ್ಕೆ ಅವರು 1400 ರೂ. ದೇಣಿಗೆ ನೀಡಿ ಹಸಿರು ತೋರಣ ಬಳಗವನ್ನು ಪ್ರೋತ್ಸಾಹಿಸಿದರು. ಸಾಮಾಜಿಕ ವಲಯ ಅರಣ್ಯಾ ಧಿಕಾರಿ ಸಂತೋಷ ಅಜೂರ, ಬಳಗದ ಹಿರಿಯರಾದ ಬಿ.ಎಂ. ಪಲ್ಲೇದ, ಜಿ.ಎಂ. ಹುಲಗಣ್ಣಿ, ಬಳಗದ ಮಾಜಿ ಅಧ್ಯಕ್ಷರಾದ ಕೆ.ಆರ್. ಕಾಮಟೆ, ನಾಗಭೂಷಣ ನಾವದಗಿ, ಅಶೋಕ ರೇವಡಿ, ಸಂಚಾಲಕ ಮಹಾಬಲೇಶ್ವರ ಗಡೇದ, ಬಳಗದ ಸದಸ್ಯರಾದ ರವಿ ಗೂಳಿ, ಎಂ.ಎಸ್. ಬಾಗೇವಾಡಿ, ಅಮರೇಶ ಗೂಳಿ, ವೀರೇಶ ಹಂಪನಗೌಡ್ರ, ವಿಲಾಸ ದೇಶಪಾಂಡೆ, ಶ್ರೀನಿವಾಸರಾವ್ ಕುಲಕರ್ಣಿ, ಲೈನ್ಸ್ ಕ್ಲಬ್ ಮಾಜಿ ಅಧ್ಯಕ್ಷ ಬಸವರಾಜ ಸಿದರೆಡ್ಡಿ, ಪಿ.ಆರ್. ಕೂಡಗಿ, ಈರಣ್ಣ ಶಿರವಾಳ, ಡಾ| ವೀರೇಶ ಇಟಗಿ, ಬಸವರಾಜ ಬಿಜ್ಜೂರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು
ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು
ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.