ಬೆಳೆಹಾನಿ ಸರ್ವೇ ಮಾಡಿ ಪರಿಹಾರಕ್ಕೆ ಸೂಚನೆ

Team Udayavani, Nov 8, 2020, 7:05 PM IST

vp-tdy-1

ಬಸವನಬಾಗೇವಾಡಿ: ಇತ್ತೀಚೆಗೆ ಭಾರೀ ಪ್ರಮಾಣದ ಮಳೆಯಿಂದ ಅಪಾರ ಬೆಳೆ ಹಾನಿಯಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಧಿಕಾರಿಗಳು ತಕ್ಷಣ ಸರ್ವೇ ಮಾಡಿ ಬೆಳೆ ಪರಿಹಾರ ನೀಡಬೇಕು ಎಂದು ಅಧಿಕಾರಿಗಳಿಗೆ ಜಿಪಂ ಅಧ್ಯಕ್ಷೆ ಸುಜಾತಾ ಕಳ್ಳಿಮನಿ ಸೂಚಿಸಿದರು.

ಶನಿವಾರ ಪಟ್ಟಣದ ತಾಪಂ ಸಭಾಭವನದಲ್ಲಿ ನಡೆದ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ರೈತರಿಗೆ ಪರಿಹಾರ ದೊರಕಿಸುವಲ್ಲಿ ಅಧಿಕಾರಿಗಳು ತಾರತಮ್ಯ ಮಾಡಬಾರದು ಎಂದರು. ಕೃಷಿ ಇಲಾಖೆ ಸಹಾಯ ನಿರ್ದೇಶಕ ಎಂ.ಎಚ್‌. ಯರಝರಿ ಮಾತನಾಡಿ, ಅಕ್ಟೋಬರ್‌ ಅಂತ್ಯದವರೆಗೆ ಈ ಭಾಗದಲ್ಲಿ 655 ಮಿ.ಮೀ.ಮಳೆಯಾಗಬೇಕಾಗಿತ್ತು. 902 ಮಿ.ಮೀ. ಮಳೆಯಾಗಿದ್ದರಿಂದ ಶೇ. 42 ಬಿತ್ತನೆ ಬೆಳೆ ಹಾನಿಯಾಗಿವೆ ಎಂದು ಹೇಳಿದರು.

ಕೃಷಿ, ಕಂದಾಯ ಹಾಗೂ ತೋಟಗಾರಿಕೆಇಲಾಖೆಯವರು ಜಂಟಿಯಾಗಿ ಸಮೀಕ್ಷೆ ಮಾಡಿ ಸರಕಾರಕ್ಕೆ ವರದಿ ಸಲ್ಲಿಸಿದ್ದೇವೆ. ಸರಕಾರ ಪರಿಹಾರ ಧನ ನೀಡಿದ ನಂತರ ರೈತರಿಗೆ ತಲುಪಿಸುವ ಕಾರ್ಯ ಮಾಡಲಾಗುವುದು ಎಂದರು. ಜಿಪಂ ಅಧ್ಯಕ್ಷೆ ಮಾತನಾಡಿ, ಕೋವಿಡ್‌-19 ನೆಪ ಹೇಳಿ ಲಸಿಕೆ ಹಾಕದೇ ಇರುವುದರಿಂದ ದನ-ಕರುಗಳು ರೋಗಕ್ಕೆ ಒಳಪಟ್ಟಿದ್ದರಿಂದ ರೈತರು ಸಂಕಷ್ಟ ಎದುರಿಸುತ್ತಿದ್ದಾರೆ. ರೈತರು ಸೇರಿದಂತೆ ದನ-ಕರುಗಳಿಗೆ ಸಂಕಷ್ಟ ಎದುರಾದಾಗ ತಕ್ಷಣವೇ ಸ್ಪಂದಿಸಿ ಅಗತ್ಯ ನೆರವು ನೀಡಲು ಮುಂದಾಗಬೇಕು ಎಂದು ಹೇಳಿದರು.

ದನ-ಕರುಗಳು ಬಾಯಿ ಕಾಲು ಬೇನೆ ರೋಗಗಳಿಗೆ ಸಿಲುಕಿವೆ. ಪಶು ಇಲಾಖೆಯವರು ಲಸಿಕೆ ಹಾಕದೇ ಇರುವುದರಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ತಕ್ಷಣವೇ ಲಸಿಕೆ ಹಾಕಲು ಆರಂಭಿಸಿ ಎಂದು ಪಶು ಇಲಾಖೆ ಅ ಧಿಕಾರಿಗಳಿಗೆ ಸೂಚಿಸಿದರು.

ಆಗ ನಿಡಗುಂದಿ, ಕೊಲ್ಹಾರ, ಹೊವಿನಹಿಪ್ಪರಗಿ, ಬಸವನಬಾಗೇವಾಡಿ ನಾಲ್ಕು ವಲಯಗಳಾಗಿ ವಿಭಾಗಿಸಿ 8 ಗುಂಪುಗಳನ್ನು ರಚಿಸಿ ಲಸಿಕೆ ಹಾಕಲು ಆರಂಭಿಸಲಾಗಿದೆ ಎಂದು ಡಾ| ಎಚ್‌.ಎಂ. ನ್ಯಾಮಗೊಂಡ ಸಭೆಗೆ ತಿಳಿಸಿದರು.

ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ಇಲಾಖೆ ಕಾರ್ಯ ನಿರ್ವಾಹಕ ಅಧಿಕಾರಿ ಜೆ.ವಿ. ಕಿರಸೂರ ಮಾತನಾಡಿ, ನಮ್ಮ ಇಲಾಖೆ ಅಡಿಯಲ್ಲಿ ತಾಲೂಕಿನಲ್ಲಿ 65 ಶುದ್ಧ ನೀರಿನ ಘಟಕಗಳಿವೆ. ಅದರಲ್ಲಿ 7 ಘಟಕಗಳು ದುರಸ್ತಿಗೆ ಬಂದಿವೆ. ಶೀಘ್ರ ದುರಸ್ತಿಗೊಳಿಸಿ ಗ್ರಾಮಸ್ಥರಿಗೆ ಅನುಕೂಲ ಮಾಡಿ ಕೊಡಲಾಗುವುದು ಎಂದು ಹೇಳಿದರು.

ತಾಪಂ ಉಪಾಧ್ಯಕ್ಷೆ ಸುಜಾತಾ ಪಾಟೀಲ, ಜಿಪಂ ಸದಸ್ಯರಾದ ಸಂತೋಷ ನಾಯಕ, ಕಲ್ಲಪ್ಪ ಮಟ್ಟಿ, ಜಿಪಂ ಯೋಜನಾ ಧಿಕಾರಿ ನಿಂಗಪ್ಪ, ತಾಪಂ ಇಒ ಭಾರತಿ ಚಲುಮಯ್ಯ, ಜಿಪಂ ಇಲಾಖೆಯ ಸಿ.ಬಿ. ಕುಂಬಾರ ಸೇರಿದಂತೆ ಅನೇಕರು ಇದ್ದರು.

ಟಾಪ್ ನ್ಯೂಸ್

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweq

Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು

18-muddebihal

Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು

6-muddebihala

Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು

2-muddebihala

Muddebihal: ಟ್ರ್ಯಾಕ್ಟರ್-ಟ್ರೇಲರ್‌ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು

MB-Patil-Minister

Waqf Notice: ಒಂದಿಂಚು ಜಮೀನು ವಕ್ಫ್‌ಗೆ ಹೋಗಲು ಬಿಡಲ್ಲ: ಸಚಿವ ಎಂ.ಬಿ.ಪಾಟೀಲ್‌

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.