ಹೊಸ ಆಂಬ್ಯುಲೆನ್ಸ್‌ಗಳಿಗೆ ಪ್ರಸ್ತಾವನೆ


Team Udayavani, Dec 16, 2018, 12:26 PM IST

vij-1.jpg

ವಿಜಯಪುರ: ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ವ್ಯಾಪ್ತಿಯಲ್ಲಿರುವ 1 ಬೈಕ್‌ ಆಂಬ್ಯುಲೆನ್ಸ್‌ ಸೇವೆ, 108 ಆರೋಗ್ಯ ರಕ್ಷಾ ಕವಚ ಯೋಜನೆಯ 28 ಆಂಬ್ಯುಲೆನ್ಸ್‌ ವಾಹನಗಳಿದ್ದು, ಪ್ರಸಕ್ತ ವರ್ಷದಲ್ಲಿ ಈ ಆಂಬ್ಯುಲೆನ್ಸ್‌ಗಳನ್ನು ಬದಲಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈಗಿರುವ ಆಂಬ್ಯುಲೆನ್ಸ್‌ಗಳು ಸುಭದ್ರವಾಗಿದ್ದರೂ ಭವಿಷ್ಯದ ದೃಷ್ಟಿಯಿಂದ ಬದಲಾವಣೆ ಅಗತ್ಯ ಮನಗಂಡು ಪ್ರಸ್ತಾವನೆ ಸಲ್ಲಿಸಲಾಗಿದೆ. ಮತ್ತೂಂದೆಡೆ ಜಿಲ್ಲಾ ಸರ್ಕಾರಿ ಆಸ್ಪತ್ರೆ ವ್ಯಾಪ್ತಿಯಲ್ಲಿ ನಗುಮಗು ಸೇರಿದಂತೆ 4 ಆಂಬ್ಯುಲೆನ್ಸ್‌ಗಳಿವೆ, ಬಹುತೇಕ ವಾಹನಗಳಲ್ಲಿ ತುರ್ತು ಅಗತ್ಯ ಸಂದರ್ಭದಲ್ಲಿ ಬೇಕಾದ ವೆಂಟಿಲೇಟರ್‌ ವ್ಯವಸ್ಥೆ ಇದೆ. ಜಿಲ್ಲೆಯ ಮಮದಾಪುರ, ಅಥರ್ಗಾ ಹಾಗೂ ತೆಲಗಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಹೊಸದಾಗಿ ಆಂಬ್ಯುಲೆನ್ಸ್‌ ಸೇವೆಗೆ ಹಾಗೂ ಕಲಕೇರಿ ಆಂಬ್ಯುಲೆನ್ಸ್‌ ಬದಲಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಇದರ ಹೊರತಾಗಿ ತಾಳಿಕೋಟೆ ನಗುಮಗು ಆಂಬ್ಯುಲೆನ್ಸ್‌ ಅಪಘಾತದಿಂದ ಮೂಲೆ ಸೇರಿದೆ.

ಖಾಸಗಿ ಆಸ್ಪತ್ರೆಗಳ ಧನದಾಹದ ಮಧ್ಯೆ ಬಡವರ ಪಾಲಿಗೆ ಜಿಲ್ಲಾ ಸರ್ಕಾರಿ ಆಸ್ಪತ್ರೆ ವರದಾನ ಎನಿಸಿದೆ. ಹಲವು ಆಧುನಿಕ ತಂತ್ರಜ್ಞಾನದ ಸೌಲಭ್ಯಗಳ ಸಹಿತ ಸರ್ಕಾರಿ ಆರೋಗ್ಯ ಸೇವೆ ನೀಡುವ ಜಿಲ್ಲಾ ಆಸ್ಪತ್ರೆಯ ಗುಣಮಟ್ಟದ ಸೇವೆಗಾಗಿ 2013ರಲ್ಲಿ ಇಂಡಿಯನ್‌ ಹೆಲ್ತ್‌ಕೇರ್‌ ಪ್ರಶಸ್ತಿ, 2016 ಹಾಗೂ 2017ರಲ್ಲಿ ಎರಡು ಬಾರಿ ಕಾಯಕಲ್ಪ ಪ್ರಶಸ್ತಿ ದೊರಕಿದ್ದರೆ, ಕಳೆದ ವರ್ಷವೇ ರಾಷ್ಟ್ರೀಯ ಸೇವಾ ಖಾತ್ರಿ ಪ್ರಶಸ್ತಿ ಪಡೆದಿದೆ. ಎಚ್‌ಐವಿ ಸೋಂಕಿತ ಗರ್ಭಿಣಿಯರಿಗೆ ಸುರಕ್ಷಿತ ಹೆರಿಗೆ ಮಾಡಿಸುವಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನಕ್ಕಾಗಿ 2009 ಕೆಸೆಪ್ಸ್‌ ನೀಡಿದ್ದ ಪ್ರಶಸ್ತಿ ಈ ಬಾರಿಯೂ
ದೊರೆತಿದೆ.

ಜಿಲ್ಲಾಸ್ಪತ್ರೆ ಆವರಣದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಆರಂಭಿಸಿದ್ದು, 100 ಹಾಸಿಗೆಗಳ ಈ ಆಸ್ಪತ್ರೆಯಲ್ಲಿ ನವಜಾತ ಶಿಶುಗಳ ತೀವ್ರ ನಿಗಾ ಘಟಕದ 20 ಹಾಸಿಗಳೂ ಇವೆ. ಗರ್ಭಿಣಿಯರ ಸುರಕ್ಷಿತ ಹೆರಿಗೆ ಹಾಗೂ ಮಕ್ಕಳ ಆರೈಕೆಗಾಗಿ ಸ್ತ್ರೀರೋಗ, ಮಕ್ಕಳ ತಜ್ಞರು ಹಾಗೂ ಅನೆಸ್ತೇಸಿಯಾ ಸೇರಿದಂತೆ 14 ತಜ್ಞ ವೈದ್ಯರು ಸೇರಿ 36 ಸಿಬ್ಬಂದಿ ನಿರಂತರ ಸೇವೆ ನೀಡುತ್ತಿದ್ದಾರೆ. ಪರಿಣಾಮ ಸಾರ್ವಜನಿಕ ಮನ್ನಣೆಗೆ ಪಾತ್ರವಾಗಿದೆ. ಪರಿಣಾಮವೇ ಮಾಸಿಕ ಸರಾಸರಿ ಸುಮಾರು 1000 ಸುರಕ್ಷಿತ ಹೆರಿಗೆ ನಡೆಯುತ್ತಿವೆ. ಇನ್ನೂ 15 ವೈದ್ಯ-ಸಿಬ್ಬಂದಿ ನೇಮಕಕ್ಕೆ ಸರ್ಕಾರಕ್ಕೆ ಕೋರಲಾಗಿದೆ.

ಜಿಲ್ಲೆಯಲ್ಲಿ ಸರ್ಕಾರಿ ಆಸ್ಪತ್ರೆಗೆ ರಾಜ್ಯ-ರಾಷ್ಟ್ರ ಮಟ್ಟದ ಹಲವು ಪ್ರಶಸ್ತಿ ಸಂದಿರುವುದೇ ಇಲ್ಲಿ ಹಲವು ಆಧುನಿಕ ತಂತ್ರಜ್ಞಾನದ ಸುಧಾರಿತ ವೈದ್ಯಕೀಯ ಸೌಲಭ್ಯ ದೊರೆಯುತ್ತಿರುವುದಕ್ಕೆ ಜೀವಂತ ಸಾಕ್ಷಿ. ಭವಿಷ್ಯದಲ್ಲೂ ರಾಜ್ಯದಲ್ಲೇ ವಿಜಯಪುರ ಜಿಲ್ಲೆಯನ್ನು ಸರ್ಕಾರಿ ಆರೋಗ್ಯ ಸೇವೆಯಲ್ಲಿ ಪ್ರಥಮ ಸ್ಥಾನದಲ್ಲೇ ಉಳಿಸಿಕೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ. 
ಡಾ| ಶರಣಪ್ಪ ಕಟ್ಟಿ, ಶಸ್ತ್ರ ಚಿಕಿತ್ಸಕರು, ಜಿಲ್ಲಾ ಸರ್ಕಾರಿ ಆಸ್ಪತ್ರೆ, ವಿಜಯಪುರ

„ಜಿ.ಎಸ್‌. ಕಮತರ

ಟಾಪ್ ನ್ಯೂಸ್

Sathish-jarakhoili

Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್‌ ಜಾರಕಿಹೊಳಿ

1-allu

Allu Arjun; ತಪ್ಪು ಮಾಹಿತಿ, ಚಾರಿತ್ರ್ಯ ಹರಣಕ್ಕೆ ಯತ್ನ: ರೇವಂತ್ ರೆಡ್ಡಿಗೆ ತಿರುಗೇಟು

1-modi-bg

Hala Modi; ಮಿನಿ ಹಿಂದೂಸ್ಥಾನಕ್ಕೆ ಸಾಕ್ಷಿಯಾಗುತ್ತಿದ್ದೇನೆ: ಕುವೈಟ್ ನಲ್ಲಿ ಮೋದಿ

1-mohali

Mohali; ಬಹುಮಹಡಿ ಕಟ್ಟಡ ಕುಸಿತ: ಹಲವರು ಸಿಲುಕಿರುವ ಶಂಕೆ

kejriwal 2

Delhi excise policy; ಕೇಜ್ರಿವಾಲ್ ವಿಚಾರಣೆಗೆ ಲೆಫ್ಟಿನೆಂಟ್ ಗವರ್ನರ್ ಅನುಮತಿ ಪಡೆದ ಇಡಿ

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

1-russia

9/11-ಶೈಲಿಯಲ್ಲಿ ರಷ್ಯಾದ ವಸತಿ ಕಟ್ಟಡಗಳ ಮೇಲೆ ಉಕ್ರೇನ್ ನಿಂದ ಸರಣಿ ಡ್ರೋನ್ ದಾಳಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-vijay

Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

23-

Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್

22-

ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ

State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ

State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್‌

Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್‌

accident

Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ

Sathish-jarakhoili

Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್‌ ಜಾರಕಿಹೊಳಿ

Kota: ಕೋಟಾದಲ್ಲಿ ಮತ್ತೂಬ್ಬ ವಿದ್ಯಾರ್ಥಿ ಆತ್ಮಹತ್ಯೆ: ವರ್ಷದ 17ನೇ ಪ್ರಕರಣ

Kota: ಕೋಟಾದಲ್ಲಿ ಮತ್ತೂಬ್ಬ ವಿದ್ಯಾರ್ಥಿ ಆತ್ಮಹತ್ಯೆ: ವರ್ಷದ 17ನೇ ಪ್ರಕರಣ

1-allu

Allu Arjun; ತಪ್ಪು ಮಾಹಿತಿ, ಚಾರಿತ್ರ್ಯ ಹರಣಕ್ಕೆ ಯತ್ನ: ರೇವಂತ್ ರೆಡ್ಡಿಗೆ ತಿರುಗೇಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.